ಗೂಂಡಾ ಪರವಾಗಿ ಸದನದಲ್ಲಿ ಬಿಜೆಪಿ ನಾಯಕರು ಚರ್ಚೆ ಮಾಡುತ್ತಿದ್ದಾರೆ: ಆಯನೂರು ಮಂಜುನಾಥ್
Team Udayavani, Dec 14, 2023, 1:14 PM IST
ಶಿವಮೊಗ್ಗ: ಭದ್ರವಾವತಿಯಲ್ಲಿ ಬಿಜೆಪಿ ಕಾರ್ಯಕರ್ತ ಗೋಕುಲ್ ಗೋಕುಲ್ ಕಾಂಗ್ರೆಸ್ ಮುಖಂಡರ ಮೇಲೆ ಗುಂಡಾಗಿರಿ ಮಾಡುತ್ತಿದ್ದ. ಅವನಿಂದ ನಮ್ಮ ಕಾಂಗ್ರೆಸ್ ಕಾರ್ಯಕರ್ತರನ್ನು ರಕ್ಷಣೆ ಮಾಡಬೇಕಿದೆ. ಕಾಂಗ್ರೆಸ್ ಮುಖಂಡರಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಗೋಕುಲ್ ಮೇಲೆ ಅಪ್ರಕರಣ ದಾಖಲಿಸುವಂತೆ ಪೌರ ಕಾರ್ಮಿಕರು ಆಗ್ರಹ ಮಾಡಿದ್ದಾರೆ. ಅಂತಹ ಗೂಂಡಾ ಪರವಾಗಿ ಸದನದಲ್ಲಿ ಬಿಜೆಪಿ ನಾಯಕರು ಚರ್ಚೆ ಮಾಡುತ್ತಿದ್ದಾರೆ. ನಿಯಂತ್ರಿಸುವ ಬದಲಿಗೆ ಬಿಜೆಪಿಯವರು ಅವನನ್ನು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾವತಿ ಘಟನೆಯನ್ನು ಬಿಜೆಪಿಯ ನಾಯಕರು ಸದನದಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಭದ್ರಾವತಿಯಲ್ಲಿ ಗೂಂಡಾಗಿರಿ ನಡಿದಿದೆ ಎಂದು ಸದನದಲ್ಲಿ ಸಂಗಮೇಶ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಗೋಕುಲ್ ಮೇಲೆ ಯಾರು ಹಲ್ಲೆ ಮಾಡಿದ್ದಾರೆ ಎನ್ನುವುದನ್ನು ಪೊಲೀಸರು ತನಿಖೆ ಮಾಡಿ ಹೇಳಬೇಕು ಎಂದರು.
ಶಾಸಕ ಸಂಗಮೇಶ್ ಹಾಗೂ ಅವರ ಮಗನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಘಟನೆಗೂ ಸಂಗೇಮೇಶ್ ಗೂ ಸಂಬಂಧವಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಸಂಗಮೇಶ್ ಮೇಲೆ ಗೂಂಡಾಗಿರಿ ಮಾಡಿದ್ದರು. ಸಂಗಮೇಶ್ ಅವರನ್ನು ಟಾರ್ಗೆಟ್ ಮಾಡುವ ಪ್ರವೃತ್ತಿ ನಡೆಯುತ್ತಿದೆ ಎಂದು ಆರೋಪಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಗೊಂದಲಗಳಾಗ ಬೇಕೆಂದು ಹೀಗೆ ಮಾಡುತ್ತಾರೆ. ಎಂಪಿಎಂ ಪ್ರಾರಂಭ ಮಾಡುವ ಕೆಲಸವನ್ನು ಶಾಸಕರು ಮಾಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಗಲಾಟೆ ಮಾಡುವ ಪ್ರಯತ್ನಗಳು ವಿಫಲವಾದವು. ರಾಗಿಗುಡ್ಡದ ಪ್ರಕರಣ ಇಟ್ಟುಕೊಂಡು ಏನೇನೋ ಮಾಡಿದರು. ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ಆಯನೂರು ಹೇಳಿದರು.
ಗೋಕುಲ್ ಮಾತಾನಾಡಿರುವ ಆಡಿಯೋ ಪ್ರಸ್ತಾವನೆ ಮಾಡಿ ಬಿಜೆಪಿಯವರು ಮಾತಾಡಲಿ. ಪುಂಡಪೋಕರಿಗಳನ್ನು ಪೋಷಿಸಬಾರದು. ಬಿಜೆಪಿಯವರ ನಡೆಯನ್ನು ಕಾಂಗ್ರೆಸ್ ಖಂಡಿಸುತ್ತೇವೆ. ಶಾಸಕ ಸಂಗಮೇಶ್ ಮೇಲೆ ಮಾಡುವ ತೇಜೋವಧೆಯನ್ನು ನಿಲ್ಲಿಸಬೇಕು. ಸಂಗಮೇಶ್ ಅವರನ್ನು ಸೋಲಿಸಲಾಗದೆ ಹೀಗೆ ಆರೋಪ ಮಾಡುತ್ತಿದ್ದಾರೆ ಎಂದ ಆಯನೂರು ಮಂಜುನಾಥ್, ಬಿಜೆಪಿ ಕಾರ್ಯಕರ್ತ ಗೋಕುಲ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.