Shahi Idgah Case:ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ-ಮಸೀದಿ ಸರ್ವೆಗೆ ಹೈಕೋರ್ಟ್ ಅಸ್ತು
ಮಥುರಾ ಶ್ರೀಕೃಷ್ಣನ ಜನ್ಮಸ್ಥಳವಾಗಿದೆ ಎಂದು ಹಿಂದು ಪರ ಕಕ್ಷಿದಾರರು ಪ್ರತಿಪಾದಿಸಿದ್ದಾರೆ
Team Udayavani, Dec 14, 2023, 3:13 PM IST
ನವದೆಹಲಿ: ಮಥುರಾ ಶ್ರೀಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಹಿಂದೂ ಪರ ಅರ್ಜಿಯನ್ನು ಗುರುವಾರ (ಡಿ.14) ಸ್ವೀಕರಿಸಿದ್ದು, ಇದರೊಂದಿಗೆ ಮಸೀದಿ ಆವರಣದಲ್ಲಿ ನ್ಯಾಯಾಲಯದ ಆಯೋಗದ ಸಮೀಕ್ಷೆಗೆ ಅನುವು ಮಾಡಿಕೊಟ್ಟಂತಾಗಿದೆ. ಏತನ್ಮಧ್ಯೆ ಮಸೀದಿಯನ್ನು ಖಾಲಿ ಜಾಗದಲ್ಲಿ ನಿರ್ಮಿಸಿದ್ದು, ಸಮೀಕ್ಷೆಗೆ ಅವಕಾಶ ನೀಡಬಾರದು ಎಂಬ ಈದ್ಗಾ ಸಮಿತಿ ಮತ್ತು ವಕ್ಫ್ ಬೋರ್ಡ್ ನ ವಾದವನ್ನು ಹೈಕೋರ್ಟ್ ತಳ್ಳಿಹಾಕಿದೆ.
ಇದನ್ನೂ ಓದಿ:Explainer: ಬಾಂಗ್ಲಾ ವಿಮೋಚನೆಯ ಕೂಗಿಗೆ ದನಿಯಾಯಿತು ಐಎಎಫ್: ಜನ್ಮತಾಳಿತು ಬಿಎಎಫ್!
ಭಗವಾನ್ ಶ್ರೀಕೃಷ್ಣನ ದೇವಾಲಯವನ್ನು ನಾಶಗೊಳಿಸಿ, ಆ ಜಾಗದಲ್ಲಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳವಾಗಿದೆ ಎಂದು ಹಿಂದು ಪರ ಕಕ್ಷಿದಾರರು ಪ್ರತಿಪಾದಿಸಿದ್ದಾರೆ.
2020ರಲ್ಲಿ ಹಿಂದು ಪರ ಕಕ್ಷಿದಾರರು ಮಥುರಾ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಈದ್ಗಾ ಶಾಹಿ ಮಸೀದಿಯನ್ನು ತೆರವುಗೊಳಿಸಿ, ದೇವಸ್ಥಾನವನ್ನು ಪುನರ್ ನಿರ್ಮಿಸಲು ಅವಕಾಶ ನೀಡಬೇಕೆಂದು ಅರ್ಜಿಯಲ್ಲಿ ಕೋರಿದ್ದರು. ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಪ್ರಕರಣದಲ್ಲಿ ರಾಮಮಂದಿರ ನಿರ್ಮಿಸಲು ಸುಪ್ರೀಂಕೋರ್ಟ್ 2019ರಲ್ಲಿ ತೀರ್ಪು ನೀಡಿದ್ದ ಹಿನ್ನೆಲೆಯನ್ನು ಆಧಾರವಾಗಿಟ್ಟುಕೊಂಡು ಮಥುರಾ ಶ್ರೀಕೃಷ್ಣ ಜನ್ಮಸ್ಥಾನದ ವಿಚಾರದಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು.
ಮಥುರಾದಲ್ಲಿ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕೆಂಬ ಅರ್ಜಿಯನ್ನು ಜಿಲ್ಲಾ ಕೋರ್ಟ್ ವಜಾಗೊಳಿಸಿತ್ತು. 1991ರ ಪೂಜಾ ಸ್ಥಳ ಮತ್ತು 1947ರ ಆಗಸ್ಟ್ 15ರ ಯಾವುದೇ ಧಾರ್ಮಿಕ ಪೂಜಾ ಸ್ಥಳದಲ್ಲಿ ಯಾವುದೇ ಬದಲಾವಣೆಗೆ ಅವಕಾಶ ಇಲ್ಲ ಎಂಬ ಕಾಯ್ದೆಯನ್ವಯ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
MUST WATCH
ಹೊಸ ಸೇರ್ಪಡೆ
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.