Karnataka: ಅನುದಾನಕ್ಕಾಗಿ ಡಿಸಿಎಂಗೂ ಮೊರೆ ಇಟ್ಟ ಶಾಸಕರು


Team Udayavani, Dec 14, 2023, 11:34 PM IST

D K SHIVAKUMAR

ಬೆಳಗಾವಿ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅನುದಾನದ ಜಪ ಮುಂದುವರಿದಿದ್ದು, ಮುಖ್ಯಮಂತ್ರಿ ಮಾತ್ರವಲ್ಲ; ಉಪಮುಖ್ಯಮಂತ್ರಿ ಖಾತೆಗಳಿಂದಲೂ ಕ್ಷೇತ್ರಗಳಿಗೆ ಅನುದಾನ ನೀಡುವಂತೆ ಅಲವತ್ತುಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಪ್ರತಿ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಕೊಡುವುದಾಗಿ ಹೇಳಿರುವುದು ಸ್ವಾಗತಾರ್ಹ. ನಮ್ಮ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಂತಾಗಿದೆ. ಆದರೆ ನಾವು ಚುನಾವಣೆ ಹೊಸ್ತಿಲಲ್ಲಿದ್ದು, ತ್ವರಿತವಾಗಿ ಮತ್ತು ಎದ್ದುಕಾಣುವ ಅಭಿವೃದ್ಧಿ ಕಾಮಗಾರಿಗಳು ಕ್ಷೇತ್ರ ಗಳಲ್ಲಿ ನಡೆಯಬೇಕಿದೆ. ಇದಕ್ಕಾಗಿ ಹೆಚ್ಚು ಹಣದ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳ ಬಳಿ ಇರುವ ಜಲಸಂಪನ್ಮೂಲ ಖಾತೆಯಿಂದಲೂ ಹಲವು ಯೋಜನೆಗಳಿಗೆ ಅನುದಾನ ಒದಗಿಸಬೇಕು ಎಂದು ಕೆಲವು ಶಾಸಕರು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದರಲ್ಲೂ ಪ್ರಮುಖವಾಗಿ ಕರ್ನಾಟಕ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮ ಸೇರಿ ಹಲವು ನಿಗಮಗಳಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಆಯಾ ನಿಗಮಗಳ ವ್ಯಾಪ್ತಿಗೆ ಬರುವ ಶಾಸಕರಿಗೆ ಅನುದಾನ ಒದಗಿಸಬೇಕು ಎಂದು ಕೋರಿದರು. ಇದಕ್ಕೆ ಸ್ಪಂದಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಶಾಸಕರಿಗೆ ಅನುದಾನ ದೊರೆಯದಿದ್ದರೆ ಕ್ಷೇತ್ರಗಳಲ್ಲಿ ಕಷ್ಟವಾಗುತ್ತದೆ ಎಂಬ ಅರಿವು ಇದೆ. ಸಾಧ್ಯವಾದಷ್ಟು ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಮನವೊಲಿಸಿದರು ಎನ್ನಲಾಗಿದೆ.

ನಿರಾಳತೆ ಮೂಡ್‌ನ‌ಲ್ಲಿ ಶಾಸಕರು; ನಾಯಕರ ಬೇಸರ
ಪಕ್ಷ ಸಂಘಟನೆ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ಈ ಬಗ್ಗೆ ಹೈಕಮಾಂಡ್‌ ತೀವ್ರ ಬೇಸರ ವ್ಯಕ್ತಪಡಿಸಿದೆ ಎಂದು ಇದೇ ವೇಳೆ ಶಾಸಕರ ಗಮನಕ್ಕೆ ತಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪಕ್ಷ ಅಧಿಕಾರಕ್ಕೆ ಬಂದು ಆರು ತಿಂಗಳಾಗಿವೆ. ಮುಂದೆ ಲೋಕಸಭಾ ಚುನಾವಣೆ ಇದೆ. ಶಾಸಕರು ಈಗ ಹನಿಮೂನ್‌ ಮನಸ್ಥಿತಿಯಿಂದ ಹೊರಬಂದು ಸ್ಥಳೀಯವಾಗಿ ಪಕ್ಷ ಸಂಘಟನೆ ಕಡೆಗೆ ಗಮನ ಹರಿಸಬೇಕು. ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಕ್ಷೇತ್ರಗಳಲ್ಲೇ ಬೀಡುಬಿಟ್ಟು, ಈ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಸೂಚನೆ ನೀಡಿದರು.

ಐದು ಗ್ಯಾರಂಟಿಗಳಿವೆ. ಅವುಗಳ ಪೈಕಿ ಬಹುತೇಕ ಎಲ್ಲವನ್ನೂ ಜಾರಿಗೊಳಿಸಲಾಗಿದೆ. ಎಷ್ಟು ಜನರಿಗೆ ಅವು ತಲುಪಿವೆ? ಕೆಲವರು ಹೊರಗುಳಿದಿದ್ದರೆ, ಯಾಕೆ? ಈ ನಿಟ್ಟಿನಲ್ಲಿರುವ ಅಡತಡೆಗಳು ಏನು? ಇಂತಹ ಅಂಶಗಳ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಸುಮಾರು 14 ಬಜೆಟ್‌ ಮಂಡಿಸಿದ್ದೇನೆ. ಇಷ್ಟೊಂದು ಕೆಟ್ಟ ಪರಿಸ್ಥಿತಿ ಎಂದೂ ಬಂದಿರಲಿಲ್ಲ. ಅಷ್ಟರಮಟ್ಟಿಗೆ ಈ ಹಿಂದಿನ ಸರಕಾರ ಆರ್ಥಿಕ ಸ್ಥಿತಿಯನ್ನು ಹಾಳುಗೆಡವಿ ಹೋಗಿದೆ. ಇದರ ಅಂಕಿ-ಅಂಶಗಳು ಸಹಿತ ದಾಖಲೆಗಳನ್ನು ನಾನು ಕೊಡುತ್ತೇನೆ. ಸ್ಥಳೀಯ ನಾಯಕರು ಮತ್ತು ಜನರಿಗೆ ಇದನ್ನು ಮನದಟ್ಟು ಮಾಡುವ ಕೆಲಸ ಆಗಬೇಕು ಎಂದು ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ಇದೆಲ್ಲದರ ನಡುವೆ ಎಂದಿನಂತೆ ಬಿ.ಆರ್‌. ಪಾಟೀಲ್‌ ಸಹಿತ ಕೆಲವು ಶಾಸಕರಿಂದ ಸಚಿವರು ಮತ್ತು ಅಧಿಕಾರಿಗಳು ತಮ್ಮನ್ನು ಪರಿಗಣಿಸುತ್ತಿಲ್ಲ. ಕಿಮ್ಮತ್ತು ಕೊಡುತ್ತಿಲ್ಲ ಎಂಬ ಮುನಿಸು ಮುಂದುವರಿದಿದೆ. ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕದ ಬಗ್ಗೆ ಪ್ರಸ್ತಾವವಾಗಿದ್ದು, ಹೈಕಮಾಂಡ್‌ ಈ ಸಂಬಂಧ ಆದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.