![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 15, 2023, 5:15 AM IST
ಪುಣೆ: ಪ್ರೊ ಕಬಡ್ಡಿ 10ನೇ ಋತುವಿನ ಪುಣೆ ಚರಣದ ಪಂದ್ಯಗಳು ಶುಕ್ರವಾರದಿಂದ ಪುಣೆಯ
ಬಾಳೇವಾಡಿ ಕ್ರೀಡಾ ಸಂಕೀರ್ಣದ ಬ್ಯಾಡ್ಮಿಂಟನ್ ಹಾಲ್‌ನಲ್ಲಿ ನಡೆಯಲಿದೆ. ಶುಕ್ರವಾರ ಎರಡು ಪಂದ್ಯಗಳು ನಡೆಯಲಿವೆ. 8 ಗಂಟೆಗೆ ನಡೆಯುವ ಮೊದಲ ಪಂದ್ಯದಲ್ಲಿ ಯು ಮುಂಬಾ ತಂಡವು ಪಾಟ್ನಾ ಪೈರೇಟ್ಸ್ ತಂಡವನ್ನು ಎದುರಿಸಲಿದ್ದರೆ 9 ಗಂಟೆಗೆ ನಡೆಯುವ ದ್ವಿತೀಯ ಪಂದ್ಯದಲ್ಲಿ ಪುನೇರಿ ಪಲ್ಟಾನ್ಸ್ ಮತ್ತು ಹರಿಯಾಣ ಸ್ಟೀಲರ್ ಹೋರಾಡಲಿದೆ.
ಅಹ್ಮದಾಬಾದ್ ಮತ್ತು ಬೆಂಗಳೂರು ಚರಣದ ಪಂದ್ಯಗಳು ಈಗಾಗಲೇ ಮುಗಿದಿದೆ. ಈ ಬಾರಿ ಆಯಾಯ ತಂಡಗಳ ತವರಿನಲ್ಲಿಯೂ ಪಂದ್ಯಗಳು ನಡೆಯಲಿವೆ. ಹಾಗಾಗಿ ಪ್ರತಿಯೊಂದು ತಂಡವು ತವರಿನ ಅಭಿಮಾನಿಗಳ ಪ್ರೋತ್ಸಾಹದಿಂದ ಆಡುವ ಅವಕಾಶ ಪಡೆದಿದೆ. ಬೆಂಗಳೂರು ಚರಣದ ವೇಳೆ ಆತಿಥೇಯ ಬೆಂಗಳೂರು ಬುಲ್ಸ್ ಸಾಧಾರಣ ನಿರ್ವಹಣೆ ನೀಡಿದೆ. ಈ ಚರಣದ ಅಂತಿಮ ದಿನವಾದ ಬುಧವಾರ ಬೆಂಗಳೂರು ಬುಲ್ಸ್ ಜೈಪುರ ವಿರುದ್ಧ ಕಷ್ಟಪಟ್ಟು ಗೆದ್ದು ಸಮಾಧಾನಪಟ್ಟುಕೊಂಡಿದೆ.
ಸದ್ಯದ ಅಂಕಪಟ್ಟಿಯಲ್ಲಿ ಬೆಂಗಾಲ್ ವಾರಿಯರ್ ಅಗ್ರಸ್ಥಾನದಲ್ಲಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಗೆದ್ದಿರುವ ಬೆಂಗಾಲ್ ಒಟ್ಟು 18 ಅಂಕ ಗಳಿಸಿದೆ. ಗುಜರಾತ್ ಜೈಂಟ್ಸ್ 5 ಪಂದ್ಯ ಆಡಿದ್ದು ಮೂರು ಪಂದ್ಯಗಳಲ್ಲಿ ಗೆದ್ದು 17 ಅಂಕ ಪಡೆದು ದ್ವಿತೀಯ ಸ್ಥಾನದಲ್ಲಿದೆ.
1. ಮುಂಬಾ-ಪಾಟ್ನಾ
ಆರಂಭ: ರಾತ್ರಿ 8.00
2. ಪುನೇರಿ-ಹರಿಯಾಣ
ಆರಂಭ: ರಾತ್ರಿ 9.00
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.