Tragedy: ನಾಯಿಗಳಿಗೆ ಹೆದರಿ ಓಡುವ ಭರದಲ್ಲಿ ರೈಲು ಡಿಕ್ಕಿ ಹೊಡೆದು 68 ಕುರಿಗಳು ಸಾವು
Team Udayavani, Dec 15, 2023, 6:25 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಲಕ್ಕಹಳ್ಳಿ ಗ್ರಾಮದ ಬಳಿ ರೈಲಿಗೆ ಸಿಲುಕಿ 62 ಕುರಿ 6 ಮೇಕೆಗಳು ಒಟ್ಟು 68 ಕುರಿ ಮೇಕೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ರೈಲು ಮಾರ್ಗದ ಲಕ್ಕಹಳ್ಳಿ ಗ್ರಾಮದ ಬಳಿ ಕುರಿಗಾಹಿಗಳು ಕುರಿಗಳನ್ನು ಮೇಯಿಸುತ್ತಿರುವ ವೇಳೆಯಲ್ಲಿ ನಾಯಿಗಳಿಗೆ ಬೆದರಿ ರೈಲ್ವೆ ಹಳಿಗಳ ಕಡೆ ನುಗ್ಗಿವೆ, ಅದೇ ಸಮಯದಲ್ಲಿ ವೇಗವಾಗಿ ಬಂದ ಪ್ಯಾಸೆಂಜರ್ ರೈಲು ಕುರಿಗಳಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಕುರಿಗಳ ದೇಹ ಚಿಲ್ಲಾಪಲ್ಲಿಯಾಗಿ ಛಿದ್ರವಾಗಿ ಕುರಿಗಳ ತಲೆ, ಕಾಲುಗಳು, ಗರ್ಭಾವಸ್ಥೆಯಲ್ಲಿದ್ದ ಕುರಿಗಳ ಹೊಟ್ಟೆಯೊಳಗಿನ ಮರಿಗಳು, ಮತ್ತು ಮೇಕೆಗಳು ರೈಲ್ವೆ ಹಳಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿವೆ.
ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಕೂರ್ಲಮ್ಮ, ಆಂಜಿನಪ್ಪ, ಮುನಿನಾರಾಯಣಪ್ಪ, ದೇವರಾಜ್, ನಾರಾಯಣಮ್ಮ ಎಂಬುವರಿಗೆ ಸೇರಿದ ಕುರಿ ಮತ್ತು ಮೇಕೆಗಳು ರೈಲಿಗೆ ಸಿಲುಕಿ ಸಾವನ್ನಪ್ಪಿವೆ. ಸ್ಥಳಕ್ಕೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಅಧಿಕಾರಿಗಳು ಹಾಗೂ ಪಶು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: T20 World Cup: ಭಾರತ Vs ಪಾಕಿಸ್ಥಾನ ಪಂದ್ಯ ನ್ಯೂಯಾರ್ಕ್ನಲ್ಲಿ, ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.