ಡಿ. 17: ಬನ್ನಂಜೆ ಬಾಬು ಅಮೀನ್‌ರಿಗೆ ಅಭಿನಂದನೆ
Team Udayavani, Dec 15, 2023, 11:45 PM IST
ಉಡುಪಿ: ಹಿರಿಯ ಜಾನಪದ ವಿದ್ವಾಂಸ, ಸಮಾಜ ಸೇವಕ ಬನ್ನಂಜೆ ಬಾಬು ಅಮೀನ್ ಅವರು 80ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಹಿನ್ನೆಲೆಯಲ್ಲಿ ಬನ್ನಂಜೆ ಬಾಬು ಅಮೀನ್-80 ಅಭಿನಂದನ ಸಮಿತಿ ವತಿಯಿಂದ ಸಿರಿತುಪ್ಪೆ ಕಾರ್ಯಕ್ರಮ ಬನ್ನಂಜೆಯ ನಾರಾಯಣಗುರು ಆಡಿಟೋರಿಯಂನಲ್ಲಿ ಡಿ.17ರಂದು ಬೆಳಗ್ಗೆ 8.45ರಿಂದ ನಡೆಯಲಿದೆ.
ಬೆಳಗ್ಗೆ 8.45ರಿಂದ ಗುರುಪೂಜೆ, ನಾಗಸ್ವರ ವಾದನ, ಡೋಲುವಾದನ, ಪಾಡ್ಡನ ನಡೆಯಲಿದೆ. 10ಕ್ಕೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದಾರೆ. ಬನ್ನಂಜೆ ಬಾಬು ಅಮೀನ್ ಅವರ ತುಳುನಾಡ ಸುತ್ತಮುತ್ತ ಹಾಗೂ ಗರೋಡಿ ಒಂದು ಚಿಂತನೆ ಪುಸ್ತಕ ಬಿಡುಗಡೆ ನಡೆಯಲಿದೆ. 10.30ಕ್ಕೆ ಬನ್ನಂಜೆ ಬಾಬು ಅಮೀನ್ ಅವರ ತುಳುನಾಡ ಜಾನಪದ ಸಾಹಿತ್ಯ ಸಂಕಲನ ವಿಚಾರಗೋಷ್ಠಿ, 11.45ಕ್ಕೆ ಪಟ್ಲ ಸತೀಶ್ ಶೆಟ್ಟಿ ಮತ್ತು ಬಳಗದ ಸುದರ್ಶನ ವಿಜಯ ಯಕ್ಷಗಾನ, ಮಧ್ಯಾಹ್ನ 1.30ಕ್ಕೆ ಆರಾಧನಾ ಗೋಷ್ಠಿ, 2.30ಕ್ಕೆ ವೀನಸ್ ಇಂಟರ್‌ನ್ಯಾಶನಲ್ ಸಾರಥ್ಯದಲ್ಲಿ ಬನ್ನಂಜೆ ಬಾಬು ಅಮೀನ್ ಅವರ ಸಾಕ್ಷ್ಯಚಿತ್ರ ಪ್ರದರ್ಶನ, 3ಕ್ಕೆ ಅಭಿಮಾನದ ಅಭಿವಂದನೆ ಅರ್ಪಣೆ ನಡೆಯಲಿದೆ. ವಿಶ್ರಾಂತ ಕುಲಪತಿ ಪ್ರೊ| ಕೆ.ಚಿನ್ನಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿನಂದನ ಭಾಷಣ ಮಾಡಲಿದ್ದಾರೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅಭಿನಂದನ ಗ್ರಂಥ ಸಿರಿ ಕುರಲ್ ಅನಾವರಣ ಮಾಡಲಿದ್ದಾರೆ. ಅಭಿನಂದನ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಕಾರ್ಯಾಧ್ಯಕ್ಷ ರಘುನಾಥ್ ಮಾಬಿಯಾನ್ ಅಭಿನಂದನೆ ಸಲ್ಲಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಂಬಯಿ ಉದ್ಯಮಿ ಮೇನಾಳಗುತ್ತು ಕಿಶನ್ ಜೆ. ಶೆಟ್ಟಿ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಜಾನಪದ ವಿದ್ವಾಂಸ ಡಾ| ವೈ.ಎನ್.ಶೆಟ್ಟಿ ಭಾಗವಹಿಸಲಿದ್ದಾರೆ. 4.30ಕ್ಕೆ ಅಭಿಮಾನಿಗಳು ಹಾಗೂ ಸಂಘ-ಸಂಸ್ಥೆಗಳ ಗೌರವಾರ್ಪಣೆ ನಡೆಯಲಿದೆ.
ಇದೇ ಸಂದರ್ಭ ಅಳಿವಿನಂಚಿನಲ್ಲಿರುವ ತುಳುನಾಡಿನ ಪರಿಕರಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಡೆಯಲಿದ್ದು, ಜನಪದದ ಇತರ ಪ್ರಕಾರಗಳ ಪ್ರಾತಕ್ಷಿಕೆ ನಡೆಯಲಿದೆ. ಜನಪದ ನೃತ್ಯ ಸಂಯೋಜನೆಯನ್ನೂ ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.