ಮೇಲ್ಮನೆಯಲ್ಲಿ ಮಾಲಾಶ್ರೀ-ಉಮಾಶ್ರೀ…ಕನಸಿನ ಕನ್ಯೆಯ ಕನವರಿಕೆ..ಕಾಡಿದ ವಯಸ್ಸೂ..

Team Udayavani, Dec 16, 2023, 5:55 AM IST

1-sadasds

ಬೆಳಗಾವಿ: ಬಿಜೆಪಿಯ ಎಚ್‌.ವಿಶ್ವನಾಥ್‌ ಅವರ ಕನಸಿನಕನ್ಯೆಯ ಕನವರಿಕೆಯು, ಗಂಭೀರವಾಗಿದ್ದ ಮೇಲ್ಮನೆಯನ್ನು ಸ್ವಲ್ಪ ಹೊತ್ತು ನಗೆಯ ಲೋಕಕ್ಕೆ ಕೊಂಡೊಯ್ಯುವುದರ ಜತೆಗೆ ಸ್ವಾರಸ್ಯಕರ ಚರ್ಚೆಗೆ ವೇದಿಕೆಯಾಯಿತು.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ಮಸೂದೆ ಮೇಲಿನ ಗಂಭೀರ ಚರ್ಚೆಯಲ್ಲಿ ಮಾತಿಗಿಳಿದ ವಿಶ್ವನಾಥ್‌, ಕಾಂಗ್ರೆಸ್‌ ಸದಸ್ಯೆ ಹಾಗೂ ನಟಿ ಉಮಾಶ್ರೀ ಅವರ ಹೆಸರನ್ನು ಮಾಲಾಶ್ರೀ ಎಂದು ಸಂಬೋಧಿಸಿದರು. ಇದು ಇಡೀ ಪ್ರಹಸನಕ್ಕೆ ಶ್ರೀಕಾ ರ ಹಾಡಿತು. ಮಾಲಾಶ್ರೀ ಹೆಸರು ಹೇಳುತ್ತಿದ್ದಂತೆ ಕಾಂಗ್ರೆಸ್‌ನ ನಾಗರಾಜು ಯಾದವ್‌, ಈ ವಯಸ್ಸಿನಲ್ಲಿ ನಿಮಗ್ಯಾಕೆ ಮಾಲಾಶ್ರೀ ನೆನಪಾಯಿತು ಎಂದು ಪ್ರಶ್ನಿಸಿದರು. ಆಗ, ನನ್ನ ವಯಸ್ಸಿಗೂ ಮಾಲಾಶ್ರೀ ನೆನಪಿಗೂ ಸಂಬಂಧ ಇಲ್ಲ ಕುಳಿತ್ಕೊಳಿÅà ಅಂತ ಗದರಿದರು. ಬಿಜೆಪಿಯ ತೇಜಸ್ವಿನಿ ಗೌಡ, ಬಾಲಿವುಡ್‌ನ‌ಲ್ಲಿ ಹೇಮಾಮಾಲಿನಿ ಕನಸಿನಕನ್ಯೆ. ಅದೇ ರೀತಿ, ಆ ದಶಕಗಳಲ್ಲಿ ದಕ್ಷಿಣ ಭಾರತದಲ್ಲಿ ಮಾಲಾಶ್ರೀ ಕನಸಿನಕನ್ಯೆ ಆಗಿದ್ದರು. ಹಾಗಾಗಿ ಹಿರಿಯ ಸದಸ್ಯರು ಅವರನ್ನು ಮೆಲುಕುಹಾಕಿದ್ದಾರೆ. ಅದು ಅವರ ಕಲಾಭಿರುಚಿ ಎಂದು ಹೇಳಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರು, ಇರಬಹುದು, ಆದರೆ ಈ ವಯಸ್ಸಿನಲ್ಲಿ ಆ ಕನಸಿನಕನ್ಯೆ ಇವರ ಕನಸಿನಲ್ಲಿ ಯಾಕೆ ಬಂದಳು ಎಂದು ಕೇಳಿದರು. ಇದಕ್ಕೆ ಸಮಜಾಯಿಷಿ ನೀಡಿದ ವಿಶ್ವನಾಥ್‌, ಕಲಾಭಿರುಚಿಯೂ ಒಂದು ರೀತಿ ಹುಣಸೆಹಣ್ಣು ಇದ್ದಂತೆ. ಅದರ ಗುಣ ನಿಮಗೆ ಗೊತ್ತಿಲ್ಲವೇ? ಎಂದು ಕೇಳಿದರು. ಆಗ ಸದನ ನಗೆಗಡಲಲ್ಲಿ ತೇಲಿತು.

ಜೀವಮಾನ ಪ್ರಶಸ್ತಿ ಪ್ರದಾನ ಶೀಘ್ರ
ಕಳೆದೆರಡು ವರ್ಷಗಳಿಂದ ಜೀವಮಾನ ಸಾಧನೆ ಪ್ರಶಸ್ತಿ ಪ್ರಕಟಿಸಲಾಗಿದೆ. ಆದರೆ, ಅದನ್ನು ಪ್ರದಾನಿಸಿಲ್ಲ. ಈ ನಿಟ್ಟಿನಲ್ಲಿ ಶೀಘ್ರ ದೊಡ್ಡ ಕಾರ್ಯಕ್ರಮ ಆಯೋಜಿಸುವ ಮೂಲಕ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು. ಉಮಾಶ್ರೀಗೆ ಕರ್ನಾಟಕ ನಾಟಕ ಅಕಾಡೆಮಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಆದರೆ, ರಾಜಕೀಯ ಕಾರಣಗಳಿಂದ ನೀಡದಿರುವುದು ಸರಿ ಅಲ್ಲ ಎಂದು ವಿಶ್ವನಾಥ್‌ ಗಮನ ಸೆಳೆದರು. ಆಗ ಸಚಿವರು ಈ ಭರವಸೆ ನೀಡಿದರು.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.