Nejar Case: ಪ್ರವೀಣ್ ಚೌಗಲೆ ಜಾಮೀನು ಅರ್ಜಿ ಸಲ್ಲಿಕೆ
Team Udayavani, Dec 16, 2023, 12:36 AM IST
ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಡಿ. 14ರಂದು ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಪರಪ್ಪನ ಆಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗಲೆ ಪರ ಕೆ.ಎಸ್.ಎನ್. ರಾಜೇಶ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶ ದಿನೇಶ್ ಹೆಗ್ಡೆ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದಾರೆ. ಅದರಂತೆ ಡಿ. 20ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿ ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ.
ನ. 12ರಂದು ನೇಜಾರು ತೃಪ್ತಿ ಲೇಔಟ್‌ನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗಲೆಯನ್ನು ಪೊಲೀಸರು ನ. 14ರಂದು ಬಂಧಿಸಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಡಿ. 18ರ ವರೆಗೆ ವಿಸ್ತರಿಸಲಾಗಿದೆ. ಈತನಿಗೆ ನ್ಯಾಯಾಲಯ ಸರಕಾರಿ ವಕೀಲ ರಾಜು ಪೂಜಾರಿ ಅವರನ್ನು ನೇಮಕ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.