Goa ಶೀಘ್ರದಲ್ಲಿಯೇ ಕನ್ನಡ ಭವನ ನಿರ್ಮಾಣ ಕಾರ್ಯ ಪೂರ್ಣ: ಸಚಿವ ಶಿವರಾಜ್ ತಂಗಡಗಿ

Team Udayavani, Dec 16, 2023, 7:59 PM IST

goaGoa ಶೀಘ್ರದಲ್ಲಿಯೇ ಕನ್ನಡ ಭವನ ನಿರ್ಮಾಣ ಕಾರ್ಯ ಪೂರ್ಣ: ಸಚಿವ ಶಿವರಾಜ್ ತಂಗಡಗಿ

ಪಣಜಿ: ಗೋವಾ ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಕನ್ನಡಿಗರು ಸ್ಥಾಯಿಕರಾಗಿದ್ದಾರೆ. ಇಡೀ ಗೋವಾದ ಜನಸಂಖ್ಯೆ 15 ಲಕ್ಷ ಕರ್ನಾಟಕದಿಂದ ಗೋವಾದಲ್ಲಿ ಉದ್ಯೋಗಕ್ಕಾಗಿ ಬಂದು ಹೋಗುವವರ ಸಂಖ್ಯೆ ಕೂಡ ಇದಕ್ಕಿಂತ ಹೆಚ್ಚಾಗಿದೆ. ಇಷ್ಟೊಂದು ಸಂಖ್ಯೆಯಲ್ಲಿ ಕನ್ನಡಿಗರಿರುವ ಗೋವಾದಲ್ಲಿ ಶೀಘ್ರದಲ್ಲಿಯೇ ಕನ್ನಡ ಭವನ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಗೋವಾ ಕನ್ನಡಿಗರಿಗೆ ಭರವಸೆ ನೀಡಿದರು.

ಗೋವಾದ ವಾಸ್ಕೊ ಜುವಾರಿನಗರದಲ್ಲಿರುವ ಶ್ರೀ ಯಲ್ಲಾಲಿಂಗೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಗೋವಾದ ವಿವಿಧ ಸರ್ಕಾರಿ ಇಲಾಖೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಸಕ್ತ ಬಾರಿ ಗೋವಾದಲ್ಲಿ ಕನ್ನಡ ಭವನಕ್ಕೆ ಕನಿಷ್ಠ ಒಂದು ಎಕರೆ ಅಥವಾ ಅರ್ಧ ಎಕರೆಯನ್ನಾದರೂ ಭೂಮಿಯನ್ನೂ ಖರೀದಿಸುತ್ತೇವೆ. ಇಷ್ಟು ಹೊತ್ತಿಗಾಗಲೇ ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕತ್ತು, ಬೇರೆ ರಾಜ್ಯಗಳಲ್ಲಿ ಕನ್ನಡ ಭವನ ನಿರ್ಮಾಣವಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕೂಡ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡೋಣ ಎಂದಿದ್ದಾರೆ. ಇದೀಗ ಗೋವಾದಲ್ಲಿ ಎರಡು ಕಡೆಗಳಲ್ಲಿ ಜಾಗ ವೀಕ್ಷಣೆ ಮಾಡಿದ್ದೇವೆ ಎಂದು ಸಚಿವ ಶಿವರಾಜ ತಂಗಡಗಿ ನುಡಿದರು.

ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ. ಸಿದ್ಧಣ್ಣ ಮೇಟಿ ಮಾತನಾಡಿ  ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ನಮ್ಮ ಬಹು ವರ್ಷಗಳ ಕನಸಾಗಿದೆ. ಈ ಹಿನ್ನೆಲೆಯಲ್ಲಿ ನಾವು ಕನ್ನಡ ಭವನಕ್ಕಾಗಿ ಸತತ ಪ್ರಯತ್ನ ನಡೆಸುತ್ತಾ ಬಂದಿದ್ದೇವೆ. ಆದರೆ ಪ್ರಸಕ್ತ ಬಾರಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಲಿದೆ ಎಂಬ ವಿಶ್ವಾಸ ನಮಗಿದೆ ಎಂದರು. ಈ ಸಂದರ್ಭದಲ್ಲಿ ಗೋವಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಚಿವ ಶಿವರಾಜ್ ತಂಗಡಗಿ ರವರಿಗೆ ಕನ್ನಡ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಾ.ಸಿದ್ಧಣ್ಣ ಮೇಟಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ಜಿಪಂ ಮಾಜಿ ಅಧ್ಯಕ್ಷ ನೀಲಮ್ಮ ಮೇಟಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಸಾಪ ಗೋವಾ ರಾಜ್ಯ ಗೌ. ಕಾರ್ಯದರ್ಶಿ ನಾಗರಾಜ ಗೋಂದಕರ್,ಕಸಾಪ ಗೋವಾ ರಾಜ್ಯ ಘಟಕದ ಮಹಿಳಾ ಪ್ರತಿನಿಧಿ ವಿದ್ಯಾ ದಿನ್ನಿ, ಶ್ರೀ ಯಲ್ಲಾಲಿಂಗೇಶ್ವರ ಮಠದ ಅರ್ಚಕ ಕಂಬಳ್ಳ ಮಹಾರಾಜರು, ಕಸಾಪ ಗೋವಾ ರಾಜ್ಯ ಘಟಕದ ಗೌ.ಕೋಶಾಧ್ಯಕ್ಷ ಪುಟ್ಟಸ್ವಾಮಿ ಗುಡಿಗಾರ, ಸಂಘ ಸಂಸ್ಥೆಗಳ ಪ್ರತಿನಿಧಿ ಪಡದಯ್ಯಾ ಹಿರೇಮಠ, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ್ ತಾಲೂಕಾಧ್ಯಕ್ಷ ಬಸವರಾಜ್ ಬನ್ನಿಕೊಪ್ಪ, ಕಸಾಪ ಪಣಜಿ ತಾಲೂಕಾಧ್ಯಕ್ಷ ಹನುಮಂತ ಗೊರವರ್, ಉತ್ತರ ಗೋವಾ ಜಿಲ್ಲಾಧ್ಯಕ್ಷ ಮಡಿವಾಳಯ್ಯ ಗಣಾಚಾರಿ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಕರವೇ ಗೋವಾ ರಾಜ್ಯಾಧ್ಯಕ್ಷ ಮಂಜು ನಾಟೀಕರ್, ಶ್ರೀ ದಾಮೋದರ ಸೇವಾ ಸಮೀತಿಯ ಅಧ್ಯಕ್ಷ ಸಂಗಮೇಶ್ ಹಗರಿ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದಸರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.