Pension Scheme: ಉಭಯ ಜಿಲ್ಲೆಗಳಲ್ಲಿ 3.23 ಲಕ್ಷ ಫಲಾನುಭವಿಗಳು


Team Udayavani, Dec 16, 2023, 11:04 PM IST

ವಿವಿಧ ಪಿಂಚಣಿ ಯೋಜನೆ: ಉಭಯ ಜಿಲ್ಲೆಗಳಲ್ಲಿ 3.23 ಲಕ್ಷ ಫಲಾನುಭವಿಗಳು

ಮಂಗಳೂರು: ಸರಕಾರದ ವಿವಿಧ ಪಿಂಚಣಿ ಯೋಜನೆಗಳ ಮೂಲಕ ಪ್ರತಿ ತಿಂಗಳು ದಕ್ಷಿಣ ಕನ್ನಡ (1,77,026 ಮತ್ತು ಉಡುಪಿ (1,46,897) ಜಿಲ್ಲೆಯಲ್ಲಿ ಒಟ್ಟಾರೆ 3.23,923 ಫಲಾನುಭವಿಗಳು ಹಣಕಾಸು ನೆರವು ಪಡೆದು ಆರ್ಥಿಕ ಭದ್ರತೆ ಹೊಂದಿದ್ದಾರೆ.

ದುರ್ಬಲರಿಗೆ ಆಶಾಕಿರಣವಾಗಿರುವ ವಿವಿಧ ಪಿಂಚಣಿ ಯೋಜನೆಗಳಿಂದ ಬಹಳಷ್ಟು ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ವಿಕಲಚೇತನರಿಗೆ ಸೇರಿದಂತೆ ಸಮಾಜದ ವಿವಿಧ ದುರ್ಬಲರಿಗೆ ಆಸರೆಯಾಗುವ ಹಲವಾರು ಪಿಂಚಣಿ ಯೋಜನೆಗಳನ್ನು ಜಾರಿಗೆ ತಂದಿದೆ.

1534 ಮಂದಿ ಆಧಾರ್‌ ಜೋಡಣೆ ಬಾಕಿ
ದಕ್ಷಿಣ ಕನ್ನಡದಲ್ಲಿ ಎಲ್ಲ ಪಿಂಚಣಿ ಯೋಜನೆಗಳ ಮೊತ್ತವನ್ನು ಆಧಾರ್‌ ಸಂಯೋಜಿತ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತದೆ. ಪಿಂಚಣಿ ದೊರಕಲು ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಕಡ್ಡಾಯವಾಗಿದೆ. ಆದರೆ ಜಿಲ್ಲೆಯಲ್ಲಿ 2023 ಜೂನ್‌ 1ರ ವರೆಗೆ ಸುಮಾರು 18577 ಮಂದಿ ಫಲಾನುಭವಿಗಳಿಗೆ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಆಗದಿರುವುದು, ಬ್ಯಾಂಕ್‌ಗೆ ಕೆವೈಸಿ ನೀಡದಿರುವುದು ಮತ್ತಿತರ ಸಮಸ್ಯೆಗಳಿಂದಾಗಿ ಪಿಂಚಣಿ ಜಮೆಯಾಗಲು ತೊಂದರೆ ಆಗುತ್ತಿತ್ತು.

ಕಂದಾಯ ಇಲಾಖೆಯು ಈ ಸಮಸ್ಯೆಯನ್ನು ಅಭಿಯಾನದ ಮೂಲಕ ಸರಿಪಡಿಸುತ್ತಿದೆ. ಈ ನಿಟ್ಟಿನಲ್ಲಿ ಆಯಾ ಗ್ರಾಮಕರಣಿಕರು ಫಲಾನುಭವಿಗಳ ಮನೆ ಮನೆಗೆ ತೆರಳಿ ಅವರ ಬ್ಯಾಂಕ್‌ ಖಾತೆಗಳನ್ನು ಆಧಾರ್‌ಗೆ ಜೋಡಿಸಲು ಮತ್ತು ಕೆವೈಸಿ ಅಪ್‌ಡೇಟ್‌ ಮಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಪಿಂಚಣಿ ಫಲಾನುಭವಿಗಳಿಗೆ ಸಕಾಲದಲ್ಲಿ ಪಿಂಚಣಿ ದೊರಕಲಿದ್ದು, ಪ್ರಸ್ತುತ 1,534 ಮಂದಿ ಆಧಾರ್‌ ಜೋಡಣೆ ಬಾಕಿ ಇದೆ ಶೀಘ್ರದಲ್ಲಿ ಇದು ಶೂನ್ಯಕ್ಕೆ ಬರಲಿದೆ.

ವಿವಿಧ ಯೋಜನೆ
ಸಾಮಾಜಿಕ ಭದ್ರತಾ ಯೋಜನೆಗಳು ಎಂದು ಕರೆಯಲ್ಪಡುವ ಈ ಪಿಂಚಣಿ ಯೋಜನೆಗಳ ಮೂಲಕ ಪ್ರತಿ ತಿಂಗಳು ನಿರ್ದಿಷ್ಟ ಮೊತ್ತದ ಹಣಕಾಸು ನೆರವು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತದೆ. ವೃದ್ದಾಪ್ಯ ವೇತನದಡಿ ಜಿಲ್ಲೆಯಲ್ಲಿ 37,231 ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ವಿಧವಾ ವೇತನವನ್ನು 49,062 ಫಲಾನುಭವಿಗಳು, ಅಂಗವಿಕಲ ವೇತನವನ್ನು 17,751 ಫಲಾನುಭವಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

ಸಂಧ್ಯಾ ಸುರಕ್ಷಾ ವೇತನವನ್ನು ಜಿಲ್ಲೆಯಲ್ಲಿ 62,907 ಮಂದಿ, ಮನಸ್ವಿನಿ ವೇತನವನ್ನು 6,228 ಫಲಾನುಭವಿಗಳು, ಮೈತ್ರಿ ವೇತನವನ್ನು 10 ಫಲಾನುಭವಿಗಳು, ಎಂಡೋಸಲ್ಫಾನ್‌ ವೇತನ 3,808 ಮಂದಿ, ಮೃತ ರೈತರ ಪತ್ನಿಗೆ ವಿಧವಾ ವೇತನ 28 ಫಲಾನುಭವಿಗಳು ಆ್ಯಸಿಡ್‌ ದಾಳಿಗೆ ಒಳಗಾಗಿರುವ ಮಹಿಳೆಯರಿಗೆ ಮಾಸಾಶನವನ್ನು ಒಬ್ಬರು ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

ಉಡುಪಿ ಜಿಲ್ಲೆಯ ಅಂಕಿಅಂಶ
ಸಾಮಾಜಿಕ ಭದ್ರತ ಯೋಜನೆಯಡಿಯಲ್ಲಿ ವೃದ್ಧಾಪ್ಯ ವೇತನವನ್ನು 29,939, ಅಂಗವಿಕಲ ವೇತನವನ್ನು 14,009, ವಿಧವಾ ವೇತನ 35093, ಸಂಧ್ಯಾ ಸುರಕ್ಷಾ ವೇತನ 63,823, ಮನಸ್ವಿನಿ ವೇತನವನ್ನು 4005 ಹಾಗೂ ಮೈತ್ರಿ ವೇತನವನ್ನು 28 ಫ‌ಲಾನುಭವಿಗಳು ಸೇರಿದಂತೆ ಜಿಲ್ಲೆಯ 1,46,897 ಫ‌ಲಾನುಭವಿಗಳು ವಿವಿಧ ಪಿಂಚಣಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಆಗದಿರುವುದು, ಬ್ಯಾಂಕ್‌ಗೆ ಕೆವೈಸಿ ನೀಡದಿರುವುದು ಮತ್ತಿತರ ಸಮಸ್ಯೆಗಳಿಂದಾಗಿ ಸುಮಾರು 4,000 ಫ‌ಲಾನುಭವಿಗಳು ಸೇವೆಯನ್ನು ಪಡೆಯಲು ಸಮಸ್ಯೆ ಎದುರಿಸುತ್ತಿದ್ದಾರೆ.

ಟಾಪ್ ನ್ಯೂಸ್

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.