Fraud Case ವಿದೇಶದಲ್ಲಿಉದ್ಯೋಗ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ
Team Udayavani, Dec 17, 2023, 12:20 AM IST
ಉಡುಪಿ: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.
ಇಮಾ ವಿ. ಅವರ ಮೊಬೈಲ್ಗೆ ಯಾರೋ ಅಪರಿಚಿತ ವ್ಯಕ್ತಿ ವಾಟ್ಸ್ ಆ್ಯಪ್ನಲ್ಲಿ ಸಂದೇಶ ಕಳುಹಿಸಿ, ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಅದಕ್ಕೆ ಕರೆ ಮಾಡಿ ಕೇಳಿದಾಗ ಆ ವ್ಯಕ್ತಿ ಸೂಚಿಸಿದ ಬ್ಯಾಂಕ್ ಉಳಿತಾಯ ಖಾತೆಗೆ ಹಣ ವರ್ಗಾವಣೆ ಮಾಡಲು ತಿಳಿಸಿದ್ದರು.
ಅದರಂತೆ ಇಮಾ ಅವರು 2022ರ ಆಗಸ್ಟ್ನಿಂದ ನವೆಂಬರ್ವರೆಗೆ ಹಂತ-ಹಂತವಾಗಿ ಒಟ್ಟು 7,65,000 ರೂ.ಗಳನ್ನು ಆನ್ಲೈನ್ ಹಾಗೂ ಡೆಪಾಸಿಟ್ ಮೂಲಕ ವರ್ಗಾಯಿಸಿದ್ದರು. ಆದರೆ ಇದುವರೆಗೂ ಇಮಾ ಅವರಿಗೆ ವಿದೇಶದಲ್ಲಿ ಉದ್ಯೋಗಕ್ಕೆ ವೀಸಾ ನೀಡದೇ, ನೀಡಿದ ಹಣವನ್ನು ಹಿಂದಿರುಗಿಸದೇ ಮೋಸದಿಂದ ನಷ್ಟ ಉಂಟು ಮಾಡಿದ್ದಾರೆ ಎಂದು ಇಮಾ ಅವರು ಸೆನ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.