Politics: ಉತ್ತರ-ದಕ್ಷಿಣ ಚರ್ಚೆ ಕುರಿತು ಮೋದಿ ಕಿಡಿ- ವಿಪಕ್ಷಗಳಿಂದ ದೇಶ ವಿಭಜಿಸುವ ಪ್ರಯತ್ನ
ಇದೆಲ್ಲ ವಿಪಕ್ಷಗಳ ಸುಳ್ಳಿನ ಬಲೂನ್; ಸಂದರ್ಶನದಲ್ಲಿ ಪ್ರಧಾನಿ
Team Udayavani, Dec 18, 2023, 12:24 AM IST
ಹೊಸದಿಲ್ಲಿ: “ಇತ್ತೀಚೆಗಿನ ಪಂಚರಾಜ್ಯ ಚುನಾವಣೆ ಫಲಿತಾಂಶದ ಅನಂತರ ಉತ್ತರ ಹಾಗೂ ದಕ್ಷಿಣ ಭಾರತ ಎಂಬ ಚರ್ಚೆಯನ್ನು ವಿಪಕ್ಷಗಳು ಪ್ರಾರಂಭಿಸಿವೆ. ಇದು “ಸುಳ್ಳುಗಳ ಬಲೂನ್’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ದೈನಿಕ ಜಾಗರಣ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ವಿಪಕ್ಷಗಳು ಹತಾಶೆಯಿಂದ ದೇಶವನ್ನು ವಿಭಜಿಸುವ ಕೆಲಸವನ್ನು ಮಾಡುತ್ತಿವೆ. ಅಧಿಕಾರಕ್ಕೆ ಬರಲು ಏನು ಬೇಕಾದರೂ ಮಾಡಲು ಇವರು ಪ್ರಯತ್ನಿಸುತ್ತಿದ್ದಾರೆ. ದೇಶದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಜನರ ತಿಳಿವಳಿಕೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದಿದ್ದಾರೆ.
ಇತ್ತೀಚಿಗೆ ಹಿಂದಿ ಹಾರ್ಟ್‌ಲ್ಯಾಂಡ್‌ನ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ದೇಶದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿ. ದೇಶದ ಜನ ಸ್ಥಿರ, ಶಾಶ್ವತ ಮತ್ತು ಸಮರ್ಪಿತ ಸರಕಾರಕ್ಕೆ ಜನಾದೇಶ ನೀಡಿ ದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
“ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಗಳನ್ನು ಲೋಕಸಭೆಗೆ ಸೆಮಿ ಫೈನಲ್ ಎಂದು ಪರಿಗಣಿಸಬಹುದೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ರಾಜ್ಯಗಳಲ್ಲಿ ಬಿಜೆಪಿಗೆ ಹೆಚ್ಚು ಬೆಂಬಲ ಸಿಗುತ್ತಿಲ್ಲ ಎಂದು ಕೆಲವರು ಹೇಳಿದ್ದರು. ಆದರೆ ಫಲಿತಾಂಶಗಳಿಂದ ಅದು ಮಿಥ್ಯೆ ಎಂಬುದು ಸಾಬೀತಾಗಿದೆ. ನಾವು (ಬಿಜೆಪಿ) ಮೂರು ರಾಜ್ಯಗಳಲ್ಲಿ ಸರಕಾರ ಗಳನ್ನು ರಚಿಸಿದ್ದೇವೆ. ತೆಲಂಗಾಣ ದಲ್ಲಿಯೂ ಬಿಜೆಪಿಯ ಶೇಕಡಾವಾರು ಮತಗಳು ದಾಖಲೆಯ ಹೆಚ್ಚಳ ಕಂಡಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ವಿದ್ಯಾರ್ಥಿಗಳಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.