Covid ಹೊಸ ರೂಪಾಂತರಿ: ಮುನ್ನೆಚ್ಚರಿಕೆ, ಸನ್ನದ್ಧತೆ ಇರಲಿ


Team Udayavani, Dec 18, 2023, 6:20 AM IST

Covid ಹೊಸ ರೂಪಾಂತರಿ: ಮುನ್ನೆಚ್ಚರಿಕೆ, ಸನ್ನದ್ಧತೆ ಇರಲಿ

ಕೊರೊನಾದ ಅತ್ಯಂತ ಕ್ಷಿಪ್ರವಾಗಿ ಹರಡಬಲ್ಲ ಹೊಸ ತಳಿ ಜೆಎನ್‌.1 ಸೋಂಕು ಕೇರಳದಲ್ಲಿ ಪತ್ತೆಯಾಗಿರುವುದು ಗಾಬರಿ ಪಡಬೇಕಾದ ವಿಷಯ ಅಲ್ಲ; ಆದರೆ ಮುನ್ನೆಚ್ಚರಿಕೆಯಿಂದ ಇರಬೇಕಾದ, ಸಂಭಾವ್ಯ ಪರಿಸ್ಥಿತಿಗಳನ್ನು ಪರಿಣಾಮಕಾರಿ ಯಾದ ರೀತಿಯಲ್ಲಿ ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಬೆಳವಣಿಗೆ.

2019-20ರಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಹಾಹಾಕಾರ ಸೃಷ್ಟಿಸಿದ ಕೊರೊನಾ ಮರುವರ್ಷ ಬೇರೆಯದೇ ರೀತಿಯಲ್ಲಿ ಅಪಾರ ತೊಂದರೆಗೆ ಕಾರಣ ವಾಗಿತ್ತು. ಮೊದಲ ವರ್ಷ ಕಾಯಿಲೆ ಸಂಪೂರ್ಣವಾಗಿ ಅಪರಿಚಿತ ವಾಗಿದ್ದುದರಿಂದ ಸಾವುನೋವುಗಳು ಸಂಭವಿಸಿದವು. ಆಗ ಜಗತ್ತಿನಾದ್ಯಂತ ಸೃಷ್ಟಿಯಾದದ್ದು ಮನುಕುಲ ಇತ್ತೀಚೆಗಿನ ದಶಕಗಳಲ್ಲಿ ಅನುಭವಿಸಿರದಂತಹ ಆರೋಗ್ಯ ತುರ್ತುಸ್ಥಿತಿ. ಅದರಿಂದ ಹೇಗೋ ಪಾರಾಗಿ ನಿಟ್ಟುಸಿರು ಬಿಡುವ ವೇಳೆಗೆ ಮರುವರ್ಷ ಅದೇ ಕೊರೊನಾ ತುಸು ಹೊಸ ರೂಪ ತಳೆದು ಕಂಗೆಡಿಸಿತು. ಆಗ ಆಮ್ಲಜನಕ ಕೊರತೆ ಉಂಟಾದುದು, ಬ್ಲ್ಯಾಕ್‌ ಫ‌ಂಗಸ್‌ ಕಾಟ ಮರೆಯಲಾಗದ್ದು. ಮೊದಲ ವರ್ಷದ ಅನುಭವವನ್ನು ಪಾಠವಾಗಿ ಇರಿಸಿ ಕೊಂಡು ಮರುವರ್ಷದ ಅಲೆಯನ್ನು ಎದುರಿಸಲು ಮುಂದಾದಾಗ ಅದು ಬೇರೆಯದೇ ರೂಪದಲ್ಲಿ ಕಾಡಿತ್ತು ಎಂಬುದು ಗಮನದಲ್ಲಿ ಇರಿಸಿಕೊಳ್ಳಬೇಕಾದ ಅಂಶ.

ನಮ್ಮ ದೇಶದಲ್ಲಿ ದೃಢಪಟ್ಟಿರುವ ಕೊರೊನಾ ಉಪತಳಿ ಜೆಎನ್‌.1ನಿಂದಾಗಿ ಜೀವಹಾನಿ ಉಂಟಾಗಿಲ್ಲ ಎನ್ನುವುದು ಸದ್ಯಕ್ಕೆ ಸಮಾಧಾನದ ವಿಚಾರ. ಹಾಗೆಂದ ಮಾತ್ರಕ್ಕೆ ನಾವು ಯಾರೂ ನಿರಾಳವಾಗಿ ಇರುವಂತಿಲ್ಲ. ಏಕೆಂದರೆ ಹೊಸ ತಳಿ ಪ್ರತಿ  ರಕ್ಷಣೆಗಾಗಿ ನಾವು ಬಳಸುವ ವೈದ್ಯಕೀಯ ವ್ಯವಸ್ಥೆಗೆ ಸವಾಲು ಹಾಕು  ವಂಥದ್ದು. ಹೀಗಾಗಿ ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಆರೋಗ್ಯ ಮತ್ತು ತಾಂತ್ರಿಕ ಪರಿಣತರ ತಂಡ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮತ್ತೆ ವಿಷಮ ಪರಿಸ್ಥಿತಿ ಬಾರದಂತೆ ಎಲ್ಲರೂ ನೋಡಿಕೊಳ್ಳಬೇಕಾಗಿದೆ.

ಕೊರೊನಾದಂತಹ ಶ್ವಾಸಾಂಗ ಸಂಬಂಧಿ ಸೋಂಕು ರೋಗಗಳು ಚಳಿಗಾಲದಲ್ಲಿ ಹೆಚ್ಚುವುದು ಈ ಹಿಂದಿನ ನಿದರ್ಶನಗಳಿಂದ ಶ್ರುತಪಟ್ಟಿದೆ. ಅಮೆರಿಕ, ಸಿಂಗಾಪುರ, ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೆಮ್ಮು, ನೆಗಡಿ ಸೇರಿದಂತೆ ಕೊರೊನಾ ಲಕ್ಷಣಗಳನ್ನೇ ಹೊಂದಿರುವ ಆರೋಗ್ಯ ಸಮಸ್ಯೆ ವ್ಯಾಪಕವಾಗಿರು ವುದು ಈಗಾಗಲೇ ವರದಿಯಾಗಿದೆ.

ನಮ್ಮ ದೇಶವೂ ಸೇರಿದಂತೆ ಜಗತ್ತಿನ ಹಲವು ಭಾಗಗಳಲ್ಲಿ ಕೊರೊನಾದ ಹೊಸ ರೂಪಾಂತರಿಯಿಂದಾಗಿ ಆರೋಗ್ಯ ಸಮಸ್ಯೆ ಉಂಟಾಗಿರುವುದು ನಿಜ. ಅದು ಈ ಹಿಂದಿನ ವರ್ಷಗಳಂತೆ ಹಾಹಾಕಾರ ಉಂಟು ಮಾಡುವುದು ಬೇಡವೇ ಬೇಡ. ಅದಕ್ಕಾಗಿ ನಾವೆಲ್ಲರೂ ರಾಜ್ಯ ಮತ್ತು ಕೇಂದ್ರ ಸರಕಾರಗಳ ಜತೆಗೆ ಕೈಜೋಡಿಸಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಆತಂಕ ಪಡದೆ ಉತ್ತಮ ಆರೋಗ್ಯಾಭ್ಯಾಸಗಳನ್ನೂ ನಾವು ಹೊಂದುವುದು ಅಗತ್ಯವಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಲಭ್ಯಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವುದು ಅಗತ್ಯ. ಶನಿವಾರದಿಂದ ರ‌ವಿವಾರದ ಅವಧಿಯಲ್ಲಿ ಕೇಂದ್ರ ಸರಕಾರದ ಮಾಹಿತಿ ಪ್ರಕಾರ 335 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ರೂಪಾಂತರಿ ಜೆಎನ್‌.1 ಇಲ್ಲದೇ ಇರುವುದು ಸಮಾಧಾನದ ಸಂಗತಿ.

ಕೊರೊನಾದಂತಹ ಅಪರಿಚಿತ ಸೋಂಕು ರೋಗಗಳ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂಬುದಕ್ಕೆ ರೂಪಾಂತರ ಹೊಂದಬಲ್ಲ ಅದರ ಸಾಮರ್ಥ್ಯ ಪ್ರಧಾನ ಕಾರಣ. ಅಲ್ಲದೆ ಇಂತಹ ಕಾಯಿಲೆಗಳನ್ನು ಗುಣಪಡಿಸಲು ಸಿದ್ಧ ಔಷಧಗಳು ಇಲ್ಲ. ಅದರಿಂದ ಉಂಟಾಗುವ ರೋಗ ಲಕ್ಷಣಗಳನ್ನು ಉಪಶಮನಗೊಳಿಸುವ ಔಷಧಗಳು ಮಾತ್ರ ನಮ್ಮಲ್ಲಿ ಲಭ್ಯವಿವೆ. ಹೀಗಾಗಿಯೇ ಪ್ರತೀ ಬಾರಿ ಹೊಸ ತಳಿ, ಹೊಸ ರೂಪಾಂತರಿ ಪತ್ತೆಯಾದಾಗ ಗಾಬರಿಗೊಳ್ಳದೆ ಸನ್ನದ್ಧತೆ ಹೆಚ್ಚಿಸಿಕೊಳ್ಳಬೇಕು, ಮುಂಜಾಗರೂಕತೆಯಿಂದ ಇರಬೇಕು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.