Drugs Case: ಸ್ಯಾಂಡಲ್‌ವುಡ್‌ಗೆ ಮತ್ತೆ ಡ್ರಗ್ಸ್ ನಂಟು?

Team Udayavani, Dec 18, 2023, 11:38 AM IST

Drugs Case: ಸ್ಯಾಂಡಲ್‌ವುಡ್‌ಗೆ ಮತ್ತೆ ಡ್ರಗ್ಸ್ ನಂಟು?

ಬೆಂಗಳೂರು: ಮೂರು ವರ್ಷಗಳ ಹಿಂದೆ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸ್ಯಾಂಡಲ್‌ವುಡ್‌ನ‌ಲ್ಲಿ ಡ್ರಗ್ಸ್‌ ಎಂಬ ಆರೋಪ ಇದೀಗ ಮತ್ತೆ ಕೇಳಿ ಬಂದಿದೆ. ಇತ್ತೀಚೆಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ 21 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸಂಗ್ರಹಿಸಿಟ್ಟಿದ್ದ ಆರೋಪದಲ್ಲಿ ಬಂಧನಕ್ಕೊಳಗಾದ ನೈಜೀರಿಯಾ ಪ್ರಜೆ ಲಿಯೋ ನಾರ್ಡ್‌ ಒಕ್ವುಡಿಲಿನ ವಿಚಾರಣೆಯಲ್ಲಿ ಆತ ಸ್ಯಾಂಡಲ್‌ವುಡ್‌ನ‌ ನಟ-ನಟಿಯರ ಜತೆ ನಂಟು ಹೊಂದಿದ್ದ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

ಈ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಲಿಯೋ ನಾರ್ಡ್‌ ಒಕ್ವುಡಿಲಿನ ಮನೆ ಮೇಲೆ ದಾಳಿ ನಡೆಸಿ 21 ಕೋಟಿ ರೂ. ಮೌಲ್ಯದ ಪಾರ್ಟಿ ಡ್ರಗ್ಸ್‌ ಎಂದು ಹೇಳುವ ಎಂಡಿಎಂಎ, ಕೋಕೇನ್‌ ಪತ್ತೆಯಾಗಿತ್ತು. ಆರೋಪಿ ಮಹಿಳೆಯರ ಚೂಡಿದಾರ, ಬಟ್ಟೆಗಳ ಬಾಕ್ಸ್‌, ಚಾಕಲೇಟ್‌, ಸೋಪ್‌ ಬಾಕ್ಸ್‌ಗಳ ಒಳ ಭಾಗದಲ್ಲಿ ಮಾದಕ ವಸ್ತು ಇಟ್ಟು ನೆರೆ ರಾಜ್ಯಗಳಿಂದ ತರಿಸಿಕೊಂಡು, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ. ಹೊಸ ವರ್ಷದ ಸಂದರ್ಭದಲ್ಲಿ ನಗರ ಹಾಗೂ ನಗರದ ಹೊರ ವಲಯದಲ್ಲಿ ನಡೆಯುವ ಪಾರ್ಟಿಗಳಿಗೆ ಪೂರೈಕೆ ಮಾಡಲು ಸಿದ್ಧತೆ ನಡಸಿದ್ದ.

ಈ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ ಈತನ ಮೊಬೈಲ್‌ ಪರಿಶೀಲಿಸಿದಾಗ ಅದರಲ್ಲಿ ಸ್ಯಾಂಡಲ್‌ವುಡ್‌ನ‌ ಕೆಲ ನಟ-ನಟಿಯರು ಈತನಿಂದ ಮಾದಕ ವಸ್ತು ಖರೀದಿಸುತ್ತಿದ್ದರು ಎಂಬುದು ಗೊತ್ತಾಗಿದೆ.ಅಲ್ಲದೆ, ಹೆಚ್ಚಾಗಿ ಕಿರುತೆರೆ ನಟ, ನಟಿಯರೇ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಆದರೆ, ಪ್ರಾಥಮಿಕ ತನಿಖೆಯಲ್ಲಿ ಈ ನಟ, ನಟಿಯರು ಗ್ರಾಹಕರಾಗಿದ್ದು, ಪೆಡ್ಲರ್‌ಗಳಲ್ಲ ಎನ್ನಲಾಗಿದೆ.

ಮತ್ತೂಂದೆಡೆ ಈತನ ಬಳಿ ಅಷ್ಟೊಂದು ಪ್ರಮಾ ಣದಲ್ಲಿ ಮಾದಕ ವಸ್ತು ಹೇಗೆ ಬಂತು ಎಂಬ ಬಗ್ಗೆ ತನಿಖೆಯನ್ನು ತೀವ್ರಗೊಳಿಸಲಾಗಿದೆ. ಈತನ ಜತೆ ಬೇರೆ ಯಾರಾದರೂ ಪೆಡ್ಲರ್‌ ಇದ್ದಾರೆಯೇ? ಅವರು ಬೆಂಗಳೂರಿನವರಾ? ಅಥವಾ ನೆರೆ ರಾಜ್ಯದ ವರಾ? ಎಂಬ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸ್ಯಾಂಡಲ್‌ವುಡ್‌ನ‌ಲ್ಲಿ ಡ್ರಗ್ಸ್‌: ಮೂರು ವರ್ಷಗಳ ಹಿಂದೆ ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕಣದಲ್ಲಿ ಸ್ಯಾಂಡಲ್‌ವುಡ್‌ ಇಬ್ಬರು ನಟಿಯರು ಹಾಗೂ ಅವರ ಆಪ್ತ ವಲಯದರು ಸೇರಿ 12ಕ್ಕೂ ಅಧಿಕ ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಕೆಲ ಕಿರುತೆರೆ ನಟ-ನಟಿಯರು, ನಿರ್ಮಾಪಕರು, ನಿರ್ದೇಶಕರು ಹಾಗೂ ಹಿರಿಯ ನಟರ ಪುತ್ರರ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಲವರನ್ನು ವಿಚಾರಣೆ ಕೂಡ ಮಾಡಲಾಗಿತ್ತು.

ಇದೀಗ ಮಾದಕ ವಸ್ತು ಮಾರಾಟ ಮತ್ತು ಸೇವನೆ ಜಾಲದಲ್ಲಿ ಮತ್ತೆ ಸ್ಯಾಂಡಲ್‌ವುಡ್‌ ಹೆಸರು ಕೇಳಿ ಬಂದಿದ್ದು, ನಟ-ನಟಿಯರು ಆತಂಕ ಉಂಟು ಮಾಡಿದೆ. ಪೆಡ್ಲರ್‌ಗಳಾಗಿದ್ದರೆ ಖಂಡಿತ ಕ್ರಮ: ಒಂದು ವೇಳೆ ಲಿಯೋ ನಾರ್ಡ್‌ ಒಕ್ವುಡಿಲಿ ಸಂಪರ್ಕದಲ್ಲಿರುವ ಸ್ಯಾಂಡಲ್‌ ವುಡ್‌ನ‌ ನಟ-ನಟಿಯರು ಈತನಿಂದ ಖರೀದಿಸಿದ ಡ್ರಗ್ಸ್ ಗಳನ್ನು ಬೇರೆ ಯಾರಿಗಾದರೂ ಮಾರಾಟ ಮಾಡಿ ಹಣ ಸಂಪಾದಿಸಿದ್ದರೆ ಅವರನ್ನು ಡ್ರಗ್ಸ್‌ ಪೆಡ್ಲರ್‌ಗಳೆಂದು ಪರಿಗಣಿಸಿ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಒಂದು ವೇಳೆ ಗ್ರಾಹಕರಿಗೆ ನೋಟಿಸ್‌ ಕೊಟ್ಟು ವಿಚಾರಣೆ ನಡೆಸಲಾಗುತ್ತದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ‌

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.