Mangaluru ಪಿಯುಸಿಯಲ್ಲಿ ಪ್ರಥಮ ಸ್ಥಾನಕ್ಕೆ ಪ್ರಯತ್ನಿಸಿ: ಸಿಂಧೂ
ರೋವರ್ಸ್, ರೇಂಜರ್ಸ್ ನಾಯಕತ್ವ ತರಬೇತಿ, ಶೈಕ್ಷಣಿಕ ಸಮಾವೇಶ
Team Udayavani, Dec 18, 2023, 11:50 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 3 ವರ್ಷಗಳಿಂದ ಪ್ರಥಮ ಸ್ಥಾನ ಪಡೆಯುತ್ತಿದ್ದು, ಈ ಬಾರಿಯೂ ಮರುಕಳಿಸಬೇಕು. ಕಳೆದ ಬಾರಿ ವಾಣಿಜ್ಯ ವಿಭಾಗದಲ್ಲಿ ರೇಂಜರ್ಸ್ ವಿದ್ಯಾರ್ಥಿನಿ ಪ್ರಥಮ ರ್‍ಯಾಂಕ್ ಪಡೆದಿರುವುದು ಹೆಮ್ಮೆಯ ವಿಚಾರ ಎಂದು ಶಾಲಾ ಶಿಕ್ಷಣ ಇಲಾಖೆ (ಪ.ಪೂ.) ನಿರ್ದೇಶಕಿ ಸಿಂಧೂ ಬಿ. ರೂಪೇಶ್ ಹೇಳಿದರು.
ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೆನರಾ – ವಿಕಾಸ ಪಪೂ ಕಾಲೇಜು, ಜಿಲ್ಲಾ ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ಸಹಯೋಗದಲ್ಲಿ ಸೋಮವಾರ ಮೇರಿಹಿಲ್‌ನ ಕೆನರಾ – ವಿಕಾಸ ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ನಾಯಕತ್ವ ತರಬೇತಿ, ಶೈಕ್ಷಣಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ರೋವರ್ಸ್ – ರೇಂಜರ್ಸ್ ಚಟುವಟಿಕೆಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಹಾಗೂ ಕರ್ನಾಟಕ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಮಾತನಾಡಿ, ಪರೀಕ್ಷೆಗಳಿಗೆ ಅಡ್ಡಿಯಾಗದಂತೆ ರೋವರ್ಸ್, ರೇಂಜರ್ಸ್‌ನಲ್ಲಿ ತೊಡಗಿಸಿಕೊಂಡು ಇಲ್ಲಿ ಕಲಿತ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಡಿ. ಜಯಣ್ಣ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಕಾರ್ಯದರ್ಶಿ ಕೆ. ಗಂಗಪ್ಪ ಗೌಡ, ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ್ ಭಟ್, ಹಿರಿಯ ತರಬೇತುದಾರ ಗುರುಮೂರ್ತಿ, ಕೆನರಾ ವಿಕಾಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಿಎ ಎಂ. ವಾಮನ ಕಾಮತ್ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಜಯಾನಂದ ಎನ್. ಸುವರ್ಣ ಸ್ವಾಗತಿಸಿ, ರತ್ನಾಕರ ಬನ್ನಾಡಿ ವಂದಿಸಿದರು. ಉಮೇಶ್ ಕೆ.ಆರ್. ನಿರ್ವಹಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.