Heavy Rain: ತಮಿಳುನಾಡಿನಲ್ಲಿ ವರುಣನ ಅಬ್ಬರಕ್ಕೆ 3 ಮೃತ್ಯು, ಶಾಲಾ-ಕಾಲೇಜುಗಳಿಗೆ ರಜೆ
Team Udayavani, Dec 19, 2023, 9:39 AM IST
ಚೆನ್ನೈ: ದಕ್ಷಿಣ ತಮಿಳುನಾಡಿನಲ್ಲಿ ಮಂಗಳವಾರವೂ ವರುಣನ ಅಬ್ಬರ ಜೋರಾಗಿದ್ದು ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ನಾಲ್ಕು ಜಿಲ್ಲೆಗಳಾದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿಯಲ್ಲಿ ಹಳದಿ ಅಲರ್ಟ್ ಘೋಷಿಸಿದೆ.
ವರದಿಯ ಪ್ರಕಾರ, ರಾಜ್ಯಾದ್ಯಂತ ಮಳೆಗೆ ಮೂವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಐಎಂಡಿ ತಿಳಿಸಿದೆ.
ಟುಟಿಕೋರಿನ್ ಜಿಲ್ಲೆಯ ಶ್ರೀವೈಕುಂಟಂ ರೈಲು ನಿಲ್ದಾಣದಲ್ಲಿ ಕಳೆದ 24 ಗಂಟೆಗಳಿಂದ ಸುಮಾರು 500 ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಭಾರೀ ಮಳೆಯ ನಂತರ ನಿಲ್ದಾಣವು ಜಲಾವೃತವಾಗಿದೆ ಮತ್ತು ರೈಲು ಹಳಿಗಳು ಹಾನಿಗೊಳಗಾಗಿವೆ. ಭಾರತೀಯ ವಾಯುಪಡೆಯು ಸಿಕ್ಕಿಬಿದ್ದ ರೈಲು ಪ್ರಯಾಣಿಕರಿಗೆ ಏರ್-ಡ್ರಾಪಿಂಗ್ ಪರಿಹಾರ ಸಾಮಗ್ರಿಗಳನ್ನು ಪ್ರಾರಂಭಿಸಿದೆ ಮತ್ತು ಅಸ್ವಸ್ಥ ಪ್ರಯಾಣಿಕರನ್ನು IAF ಹೆಲಿಕಾಪ್ಟರ್‌ಗಳ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
ದಕ್ಷಿಣ ತಮಿಳುನಾಡಿನ 39 ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಗದ್ದೆಗಳು, ರಸ್ತೆಗಳು ಮತ್ತು ಸೇತುವೆಗಳು ಮುಳುಗಡೆಯಾಗಿದ್ದು, ಅನೇಕ ವಸತಿ ಕಾಲೋನಿಗಳು ನೀರಿನಿಂದ ತುಂಬಿವೆ. ಕೆರೆಗಳು ಒಡೆದು ಪ್ರವಾಹ ಉಂಟಾದ ಪರಿಣಾಮ ಹಲವಾರು ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ.
ಮಳೆಯ ಹಿನ್ನೆಲೆಯಲ್ಲಿ ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ಕನ್ಯಾಕುಮಾರಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ.
ಮಳೆಯಿಂದಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದ್ದು. ಹಲವಾರು ಪ್ರದೇಶಗಳಲ್ಲಿ ಮೊಬೈಲ್ ಫೋನ್ ಸಂಪರ್ಕಕ್ಕೆ ತೊಂದರೆ ಉಂಟಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ತಮಿಳುನಾಡು ಕರಾವಳಿಯುದ್ದಕ್ಕೂ ಮತ್ತು ಮನ್ನಾರ್ ಗಲ್ಫ್, ಕೊಮೊರಿನ್ ಪ್ರದೇಶ, ಲಕ್ಷದ್ವೀಪ ಪ್ರದೇಶದಲ್ಲಿ ಗಂಟೆಗೆ 40-45 ಕಿಲೋಮೀಟರ್ ವೇಗದಲ್ಲಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆಗೆ ಬರಬೇಡಿ… ಅಡ್ವಾಣಿ, ಜೋಶಿ ಬಳಿ ಮನವಿ ಮಾಡಿದ ರಾಮ ಮಂದಿರ ಟ್ರಸ್ಟ್
Heavy rain has damaged the railway tracks and flooded the area near Vaikundam. Avoid traveling to Thiruchendur 👇🏽 #SouthTNRains #TNRains #TamilNaduRain pic.twitter.com/CE5GVOFFDt
— Shiva (@_ItzShiva01_) December 18, 2023
#WATCH | Rescue operation underway in Tirunelveli after heavy rain wreaks havoc#TamilNadu pic.twitter.com/ejxfJWqgyU
— ANI (@ANI) December 19, 2023
Breakfast at Sea!! Flooded restaurant in Tirunelveli #TamilNadu #India #flood #Tirunelveli #rain #flashflood #viral #Tamizh #weather #climate #बाढ़ #Nellairains #Nellaifloods #Thoothukudi #மழை #வெள்ளம் #Chennai #Nagercoil #Kanyakumari #Madurai #SouthIndia pic.twitter.com/ZNSlqnxHk5
— Earth42morrow (@Earth42morrow) December 19, 2023
Today, light to moderate rain is likely at many places over South #TamilNadu, at one or two places over North Tamil Nadu, Puducherry, and Karaikal.
Heavy to very heavy rain is likely to occur at one or two places over Kanyakumari, Tirunelveli, Thoothukudi and Tenkasi districts… pic.twitter.com/chFM3T7CFr
— All India Radio News (@airnewsalerts) December 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.