Corruption Case: ತಮಿಳುನಾಡು ಸಚಿವ ಕೆ.ಪೊನ್ಮುಡಿ ದೋಷಿ…: ಮದ್ರಾಸ್ ಹೈಕೋರ್ಟ್ ತೀರ್ಪು
Team Udayavani, Dec 19, 2023, 12:17 PM IST
ಚೆನ್ನೈ: ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಸಚಿವ ಕೆ. ಪೊನ್ಮುಡಿ ಅವರನ್ನು ಮದ್ರಾಸ್ ಹೈಕೋರ್ಟ್ ದೋಷಿ ಎಂದು ಘೋಷಿಸಿ, ಅವರ ಖುಲಾಸೆಯನ್ನು ರದ್ದುಗೊಳಿಸಿದೆ.
ಜೂನ್ 28 ರಂದು, ವೆಲ್ಲೂರಿನ ಪ್ರಧಾನ ಸೆಷನ್ಸ್ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಅಕ್ರಮ ಆಸ್ತಿ ಪ್ರಕರಣದಲ್ಲಿ ಖುಲಾಸೆಗೊಳಿಸಿತು, ಪ್ರಾಸಿಕ್ಯೂಷನ್ ಸಾಕಷ್ಟು ಸಾಕ್ಷ್ಯಗಳನ್ನು ನೀಡಲು ವಿಫಲವಾಗಿದೆ ಎಂದು ಹೇಳಿದೆ. ಮದ್ರಾಸ್ ಹೈಕೋರ್ಟ್ ಇದೀಗ ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿದ್ದು, ವಾರದ ನಂತರ ಶಿಕ್ಷೆಯನ್ನು ಪ್ರಕಟಿಸಲಾಗುವುದು ಎಂದು ಹೇಳಿದೆ.
ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶೆ, ಎನ್ ವಸಂತಲೀಲಾ ಅವರು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಮತ್ತು ಹಿರಿಯ ಡಿಎಂಕೆ ನಾಯಕ ಕೆ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ ದಾಖಲಿಸಿದ ಅಕ್ರಮ ಆಸ್ತಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದಾರೆ.
ತಮಿಳುನಾಡು ಸಚಿವ ಕೆ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೂನ್‌ನಲ್ಲಿ ವೆಲ್ಲೂರಿನ ನ್ಯಾಯಾಲಯವು ಖುಲಾಸೆಗೊಳಿಸಿದ ನಂತರ ಅವರ ಖುಲಾಸೆಯ ಪರಿಷ್ಕರಣೆಯನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಳ್ಳಲು ಮದ್ರಾಸ್ ಹೈಕೋರ್ಟ್ ಆಗಸ್ಟ್‌ನಲ್ಲಿ ನಿರ್ಧರಿಸಿತು.
1996-2001ರ ಅವಧಿಯಲ್ಲಿ ಆಗಿನ ಎಐಎಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗ ಅಕ್ರಮ ಹಣ ಸಂಪಾದನೆ ಮಾಡಿದ್ದಾರೆ ಎಂದು 2002ರಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿ ವಿರುದ್ಧ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ಪ್ರಕರಣ ದಾಖಲಿಸಲಾಗಿತ್ತು, ಇದರಲ್ಲಿ ಇಬ್ಬರ ಆದಾಯ 1.4 ಕೋಟಿ ರೂ. ಆಗಿತ್ತು ಆದರೆ ಅವರು ಅಧಿಕಾರಕ್ಕೆ ಬರುವ ಮೊದಲು ನೀಡಿದ ಆದಾಯಕ್ಕೂ ಈ ಆದಾಯಕ್ಕೂ ಅಜಗಜಾಂತರ ವ್ಯತ್ಯಾಸ ವಿತ್ತು ಎನ್ನಲಾಗಿದೆ.
ಪೊನ್ಮುಡಿ ಅವರು 1996-2001ರ ಅವಧಿಯಲ್ಲಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಅಕ್ರಮ ಸಂಪತ್ತು ಸಂಗ್ರಹಿಸಿದ್ದಾರೆ ಎಂದು ಡಿವಿಎಸಿ ಪ್ರತಿಪಾದಿಸಿದೆ.
ಇದನ್ನೂ ಓದಿ: Gyanvapi: ಮುಸ್ಲಿಂ ಸಮುದಾಯದ ಸಲ್ಲಿಸಿದ ಐದೂ ಅರ್ಜಿಗಳು ವಜಾ! ಸಮೀಕ್ಷೆಗೆ ಹೈಕೋರ್ಟ್ ಸಮ್ಮತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.