New delhi; ಪ್ರಧಾನಿ ಮೋದಿ ಭೇಟಿಯಾಗಿ ಬರ ಪರಿಸ್ಥಿತಿ ವಿವರಿಸಿದ ಸಿಎಂ ಸಿದ್ದರಾಮಯ್ಯ
Team Udayavani, Dec 19, 2023, 2:29 PM IST
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.
ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.