Raghu Thatha: ಕೀರ್ತಿ ಸುರೇಶ್ ʼರಘು ತಾತʼನ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಹೊಂಬಾಳೆ
Team Udayavani, Dec 19, 2023, 6:23 PM IST
ಚೆನ್ನೈ: ಭಾರತೀಯ ಸಿನಿರಂಗದಲ್ಲಿ ʼಹೊಂಬಾಳೆ ಫಿಲ್ಮ್ಸ್ʼ ನಿರ್ಮಾಣ ಮಾಡಿದ ಸಿನಿಮಾಗಳೆಲ್ಲಾ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ʼಸಲಾರ್ʼ ಸಿನಿಮಾದ ಮೂಲಕ ಮತ್ತೊಂದು ದೊಡ್ಡ ಹಿಟ್ ಕೊಡುವ ನಿರೀಕ್ಷೆಯಲ್ಲಿರುವ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾವೊಂದರ ಬಗ್ಗೆ ಅಪ್ಡೇಟ್ ನೀಡಿದೆ.
ಸಾಲು ಸಾಲು ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ ಕನ್ನಡ, ತೆಲುಗು ಬಳಿಕ ಇದೀಗ ಕಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದೆ. ಕಳೆದ ಕೆಲ ಸಮಯದ ಹಿಂದೆ ಈ ಬಗ್ಗೆ ಹೊಂಬಾಳೆ ಅನೌನ್ಸ್ ಮಾಡಿತ್ತು. ಕೀರ್ತಿ ಸುರೇಶ್ ಪ್ರಧಾನ ಪಾತ್ರದಲ್ಲಿರುವ ʼರಘು ತಾತʼ ಸಿನಿಮಾವನ್ನು ನಿರ್ಮಾಣ ಮಾಡುವ ಬಗ್ಗೆ ಹೊಂಬಾಳೆ ಹೇಳಿತ್ತು. ಇದೀಗ ಈ ಸಿನಿಮಾದ ಬಗ್ಗೆ ಹೊಸ ಮಾಹಿತಿಯನ್ನು ಹಂಚಿಕೊಂಡಿದೆ.
ಸುಮನ್ ಕುಮಾರ್ ನಿರ್ದೇಶನದ ʼರಘು ತಾತʼ ಮಹಿಳಾ ಹಾಗೂ ಹಾಸ್ಯ ಪ್ರಧಾನ ಕಥೆಯನ್ನೊಳಗೊಂಡಿದೆ. ಕಾಲಿವುಡ್ ನ ʼಮಹಾನಟಿʼ ಕೀರ್ತಿ ಸುರೇಶ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಸಿನಿಮಾದ ಬ್ಯಾನರ್ ನ್ನು ಎತ್ತಿಕೊಂಡು ಹೋಗುವ ದೃಶ್ಯವನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಶೀಘ್ರದಲ್ಲಿ ತೆರೆಗೆ ಬರಲಿದೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹೇಳಿದೆ.
ʼದಸರಾʼ ಬಳಿಕ ಕೀರ್ತಿ ಸುರೇಶ್ ʼರಘು ತಾತʼದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ಯಾನ್ ಇಂಡಿಯಾ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ ಎನ್ನಲಾಗಿದೆ.
#RaghuThatha, a rollicking, hilarious adventure is coming soon to a cinema near you.
வேடிக்கையும் வினோதமும் நிறைந்த நகைச்சுவை திரைப்படம், ரகு தாத்தா. விரைவில் உங்கள் அருகிலுள்ள திரையரங்குகளில்…
▶️ https://t.co/kTXp5FY4jV@KeerthyOfficial @hombalefilms @VKiragandur @sumank… pic.twitter.com/x3XXVCtl0U
— Hombale Films (@hombalefilms) December 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.