Hunsur ಕಬ್ಬಿನ ಸಿಪ್ಪೆ ತುಂಬಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ; ಸಿಪ್ಪೆ ಭಸ್ಮ
Team Udayavani, Dec 19, 2023, 9:46 PM IST
ಹುಣಸೂರು: ಕಬ್ಬಿನ ಸಿಪ್ಪೆ ಹೊತ್ತೊಯ್ಯುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಕಬ್ಬಿನ ಸಿಪ್ಪೆ ಸಂಪೂರ್ಣ ಭಸ್ಮವಾಗಿದ್ದರೆ, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮದಿಂದ ಲಾರಿಗೆ ಯಾವುದೇ ಅಪಾಯವಾಗಿಲ್ಲ.
ಹುಣಸೂರು ನಗರಕ್ಕೆ ಸಮೀಪದ ಎಚ್.ಡಿ.ಕೋಟೆ ರಸ್ತೆಯ ಹಂಚ್ಯಾ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ಘಟನೆ ಸಂಭವಿಸಿದ್ದು, ಲಾರಿಯಲ್ಲಿ ಎತ್ತರವಾಗಿ ಕಬ್ಬಿನ ಸಿಪ್ಪೆ ತುಂಬಿದ್ದರಿಂದಾಗಿ ಹಂಚ್ಯಾ ಬಳಿಯ ರಸ್ತೆಗೆ ಅಡ್ಡಲಾಗಿ ಹಾಕಿದ್ದ ವಿದ್ಯುತ್ ತಂತಿಗೆ ಸಿಲುಕಿ ಒಮ್ಮೆಲೆ ಬೆಂಕಿ ಹತ್ತಿಕೊಂಡಿದೆ.
ತಕ್ಷಣವೇ ಪಕ್ಕದ ಜಮೀನಿನವರು ತಮ್ಮ ಬೋರ್ವೆಲ್ ನಿಂದ ಪೈಪ್ ಮೂಲಕ ನೀರು ಹಾಯಿಸಿದರಾದರೂ ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಲಾರಿಗೆ ಹಾನಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.