PU: ದ್ವಿತೀಯ ಪಿಯು ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಸಮಯ ವಿಸ್ತರಣೆ
Team Udayavani, Dec 20, 2023, 12:30 AM IST
ಬೆಂಗಳೂರು: 2024ರ ದ್ವಿತೀಯ ಪಿಯು ಮೊದಲ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಗಳ ಶುಲ್ಕ ಭರಿಸುವ ಅವಧಿ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಕಾಲೇಜಿಗೆ ದಂಡ ಸಹಿತಾ ಪರೀಕ್ಷಾ ಶುಲ್ಕವನ್ನು ಪಾವತಿಸಲು ಡಿ. 23 ವರೆಗೆ ಸಮಯ ವಿಸ್ತರಿಸಲಾಗಿದೆ. ಕಾಲೇಜಿನ ಪ್ರಾಂಶುಪಾರು ಪರೀಕ್ಷಾ ಶುಲ್ಕವನ್ನು ಖಜಾನೆಗೆ ಸಂದಾಯ ಮಾಡುವ ಮತ್ತು ಅಭ್ಯರ್ಥಿಗಳ ಅರ್ಜಿಯನ್ನು ಪಿಯು ಮಂಡಳಿಯ ಪೋರ್ಟಲ್‌ನಲ್ಲಿ ಅಪ್‌ಡೇಟ್ ಮಾಡುವ ದಿನಾಂಕವನ್ನು ಡಿ. 26ರ ವರೆಗೆ ವಿಸ್ತರಿಸಲಾಗಿದೆ.
ಕಾಲೇಜಿನವರು ಅರ್ಜಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಲು ಡಿ. 28ರ ವರೆಗೆ ಸಮಯಾವಕಾಶ ನೀಡಲಾಗಿದೆ. ಈ ಮೊದಲು ಡಿ. 12ರ ವರೆಗೆ ದಂಡ ಸಹಿತ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಪೋಷಕರು ಮತ್ತು ವಿದ್ಯಾರ್ಥಿಗಳ ಮನವಿಯ ಮೇರೆಗೆ ಸಮಯಾವಕಾಶ ವಿಸ್ತರಿಸಲಾಗಿದೆ. ಈಗ ನೀಡಿರುವುದು ಅಂತಿಮ ಅವಕಾಶವಾಗಿದ್ದು ಮುಂದೆ ಯಾವ ಕಾರಣಕ್ಕೂ ಅವಧಿ ವಿಸ್ತರಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.