20 ವರ್ಷದಲ್ಲಿ ಇಂತಹ ಅನೇಕ ಅವಮಾನ ಅನುಭವಿಸಿದ್ದೇನೆ… ಉಪ ರಾಷ್ಟ್ರಪತಿಗೆ ಪ್ರಧಾನಿ ಸಾಂತ್ವನ
Team Udayavani, Dec 20, 2023, 12:20 PM IST
ನವದೆಹಲಿ: ಸಂಸದರ ಅಮಾನತು ವಿರುದ್ಧ ಮಂಗಳವಾರ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರನ್ನು ಅಣಕಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಉಪರಾಷ್ಟ್ರಪತಿಗಳಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಉಪರಾಷ್ಟ್ರಪತಿ ಜಗದೀಪ್ ಧನಖರ್ ಅವರಿಗೆ ಕರೆ ಮಾಡಿ ಸಂಸತ್ತಿನ ಸಂಕೀರ್ಣದಲ್ಲಿ ಕೆಲವು ಸಂಸದರ ವರ್ತನೆಯ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು.
ಅಮಾನತ್ತುಗೊಂಡ ಸಂಸದರು ಮಂಗಳವಾರ ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಉಪರಾಷ್ಟ್ರಪತಿ ಧಂಖರ್ ಅವರನ್ನು ಲೇವಡಿ ಮಾಡಿದ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂತ್ವನ ಹೇಳಿದ ಕುರಿತು ಟ್ವೀಟ್ ಮಾಡಿದ ಉಪರಾಷ್ಟ್ರಪತಿಗಳು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಕರೆ ಮಾಡಿ, ಮಂಗಳವಾರ ಪವಿತ್ರ ಸಂಸತ್ ಭವನದಲ್ಲಿ ಕೆಲ ಸಂಸದರು ಅಣುಕಿಸಿದ ಕೆಲಸಗಳಿಂದ ಬಹಳ ನೋವಾಗಿದೆ ಎಂದು ಸಮಾಧಾನ ಹೇಳಿದ್ದಾರೆ’ ಎಂದು ಜಗದೀಪ್ ಧನಖರ್ ಬರೆದಿದ್ದಾರೆ.
ಇಪತ್ತು ವರ್ಷಗಳಿಂದ ತಾನು ಇಂಥ ಅವಮಾನಗಳನ್ನು ಎದುರಿಸುತ್ತಾ ಬಂದಿದ್ದೇನೆ. ಆದರೆ, ಉಪರಾಷ್ಟ್ರಪತಿಯಂತಹ ಸಾಂವಿಧಾನಿಕ ಹುದ್ದೆಗೆ ಇಂಥ ಅಪಮಾನ ಆಗುವುದು, ಅದರಲ್ಲೂ ಸಂಸತ್ತಿನಲ್ಲೇ ಆ ಘಟನೆ ಆಗುವುದು ನಿಜಕ್ಕೂ ದುರದೃಷ್ಟಕರ…’ ಎಂದು ಉಪರಾಷ್ಟ್ರಪತಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
Received a telephone call from the Prime Minister, Shri @narendramodi Ji. He expressed great pain over the abject theatrics of some Honourable MPs and that too in the sacred Parliament complex yesterday. He told me that he has been at the receiving end of such insults for twenty…
— Vice President of India (@VPIndia) December 20, 2023
ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಉಪರಾಷ್ಟ್ರಪತಿ ಅವರು, ಕೆಲವರ ಚೇಷ್ಟೆಗಳು ನನ್ನ ಕರ್ತವ್ಯವನ್ನು ನಿರ್ವಹಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ತತ್ವಗಳನ್ನು ಎತ್ತಿಹಿಡಿಯಲು ಅಡ್ಡಿಯಾಗುವುದಿಲ್ಲ. ನನ್ನ ಹೃದಯದ ಒಳಗಿನಿಂದ ನನ್ನ ಕೆಲಸಕ್ಕೆ ನಾನು ಬದ್ಧನಾಗಿದ್ದೇನೆ ಹಾಗಾಗಿ ನನಗೆ ಯಾವುದೇ ಅವಮಾನಗಳಿಲ್ಲ ಬದಲಾಗಿ ಇಂತಹ ಘಟನೆಗಳು ನನ್ನ ಕೆಲಸಕ್ಕೆ ಹೆಚ್ಚಿನ ಧೈರ್ಯ ತುಂಬುತ್ತದೆ ಹೊರತು ಕುಗ್ಗುವುದಿಲ್ಲ ಎಂದಿದ್ದಾರೆ.
I was dismayed to see the manner in which our respected Vice President was humiliated in the Parliament complex. Elected representatives must be free to express themselves, but their expression should be within the norms of dignity and courtesy. That has been the Parliamentary…
— President of India (@rashtrapatibhvn) December 20, 2023
ಘಟನೆಗೆ ಸಂಬಂಧಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಬೇಸರ ವ್ಯಕ್ತಪಡಿಸಿದ್ದು ಈ ಕುರಿತು ಟ್ವೀಟ್ ಮಾಡಿದ ಅವರು “ನಮ್ಮ ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ದಿಗ್ಭ್ರಮೆಗೊಂಡಿದ್ದೇನೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.