ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ- ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಅಶೋಕ್ ಆಗ್ರಹ
Team Udayavani, Dec 20, 2023, 11:29 PM IST
ಬೆಂಗಳೂರು: ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ಕೊಡಬೇಕು ಮತ್ತು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ಸರಕಾರಕ್ಕೆ ವಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದರು.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಹಿಂದೆ ಯಡಿಯೂರಪ್ಪ ನೇತೃತ್ವದಲ್ಲಿ ನಮ್ಮ ಸರ್ಕಾರ ಎನ್‌ಡಿಆರ್‌ಎಫ್ ಪರಿಹಾರಕ್ಕಿಂತ ಹೆಚ್ಚು ಪರಿಹಾರ ಕೊಡಲಾಗಿತ್ತು. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಎಷ್ಟು ಕೊಟ್ಟಿತ್ತು? ಪ್ರಧಾನಿ ಮೋದಿ ಸರಕಾರ ಎಷ್ಟು ಕೊಟ್ಟಿದೆ ಎಂಬುದನ್ನೆಲ್ಲಾ ಚರ್ಚಿಸಿದ್ದೇವೆ. ಆದರೆ, ಸಿಎಂ ಸಿದ್ದರಾಮಯ್ಯರಿಂದ ಸೂಕ್ತ ಉತ್ತರವೇ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣದಿಂದ ರೈತರಿಗೆ ತಲಾ 2 ಸಾವಿರ ರೂ. ಪರಿಹಾರ ಘೋಷಿಸಿದ ಸರಕಾರ, ಇದುವರೆಗೆ ಕೊಟ್ಟಿಲ್ಲ. ಫ್ರೂಟ್ಸ್ ತಂತ್ರಾಂಶದಲ್ಲಿ ಶೇ. 40ರಷ್ಟು ರೈತರೂ ನೋಂದಣಿ ಮಾಡಿಕೊಂಡಿಲ್ಲ. ಅದರ ಬದಲು ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲು ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದರು.
ಷರತ್ತು ವಿಧಿಸಿದೆ
ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿರುವ ಸರಕಾರ, ಅಸಲು ಕಟ್ಟಿದ್ದರೆ ಮಾತ್ರ ಎಂಬ ಷರತ್ತು ವಿಧಿಸಿದೆ. ಎಲ್ಲದರಲ್ಲೂ ಜನರನ್ನು ವಂಚಿಸುವ ನೀತಿಯನ್ನೇ ಸರ್ಕಾರ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
ಸಣ್ಣ-ಪುಟ್ಟ ಗೊಂದಲ ಸಹಜ
ನಮ್ಮದು ಒಂದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಸಣ್ಣಪುಟ್ಟ ಗೊಂದಲಗಳು ಸಹಜ. ಗೊಂದಲ ಇರಬಾರದೆಂಬ ಕಾರಣಕ್ಕಾಗಿಯೇ ಬಿಜೆಪಿ-ಜೆಡಿಎಸ್ ಸೇರಿ ಸಮಿತಿ ಮಾಡಿಕೊಂಡಿದ್ದೇವೆ. ಅದರಂತೆ ನಡೆದುಕೊಳ್ಳುತ್ತೇವೆ. ಯತ್ನಾಳ್ ಅವರು ವರಿಷ್ಠರ ಭೇಟಿಗೆ ತೆರಳಿದ್ದಾರೆ. ಆ ಬಗ್ಗೆ ಹೆಚ್ಚಿಗೆ ಏನೂ ಹೇಳುವುದಿಲ್ಲ ಎಂದು ಅಶೋಕ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
Election Campaign: ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ
MUST WATCH
ಹೊಸ ಸೇರ್ಪಡೆ
Bantwala: ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರಿಂದ ಹಲ್ಲೆ: ಪ್ರಕರಣ ದಾಖಲು
Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ
BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.