Kundapura ಬಸ್ರೂರು: ಹೆಜ್ಜೇನು ಹಿಂಡು ಕಚ್ಚಿ ವ್ಯಕ್ತಿ ಸಾವು
Team Udayavani, Dec 21, 2023, 12:44 AM IST
ಕುಂದಾಪುರ: ಹೆಜ್ಜೇನು ಹಿಂಡು ಕಚ್ಚಿ, ಗಂಭೀರ ಗಾಯಗೊಂಡಿದ್ದ ವೃದ್ಧರೊಬ್ಬರು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ ಘಟನೆ ಬಸ್ರೂರಲ್ಲಿ ಬುಧವಾರ ಸಂಭವಿಸಿದೆ.
ಬಸ್ರೂರಿನ ಬಸ್ ನಿಲ್ದಾಣ ಬಳಿಯ ನಿವಾಸಿ ಜಗಜೀವನ್ (76) ಸಾವನ್ನಪ್ಪಿದ ವ್ಯಕ್ತಿ. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಂಗಳವಾರ ಸಂಜೆ ಇವರು ಮನೆಯಿಂದ ಬಸ್ರೂರಿನ ಬಸ್ ನಿಲ್ದಾಣ ಬಳಿ ಬರುವಾಗ ಹೆಜ್ಜೇನು ಹಿಂಡು ಕಚ್ಚಿದ್ದು, ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಬುಧವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.
ಇದೇ ವೇಳೆ ಹೆಜ್ಜೇನು ಹಲವು ಮಂದಿಗೆ ಕಚ್ಚಿದ್ದು, ಅವರೆಲ್ಲ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ ಒಬ್ಬರು ಗಂಭೀರಗೊಂಡಿದ್ದಾರೆ.
ಹೆಜ್ಜೇನು ಹಿಂಡು ದಾಳಿ
ಬಸ್ ನಿಲ್ದಾಣ ಬಳಿಯಿದ್ದ ಹೆಜ್ಜೇನು ಹಿಂಡಿಗೆ ಯಾವುದೋ ಹಕ್ಕಿ ಅಥವಾ ಇನ್ನೇನು ತಾಗಿದ್ದರಿಂದ ಅದು ಹಾರಾಡಲು ಶುರು ಮಾಡಿದ್ದು, ಈ ವೇಳೆ ಮೊದಲಿಗೆ ಒಬ್ಬರಿಗೆ ದಾಳಿ ನಡೆಸಿದ್ದು, ಅವರು ಓಡಿ ಪಾರಾಗಿದ್ದಾರೆ. ಆ ಬಳಿಕ ಅದೇ ದಾರಿಯಲ್ಲಿ ಬರುತ್ತಿದ್ದ ಜಗಜೀವನ್ ಅವರ ಮೇಲೆ ಹಿಂಡು ದಾಳಿ ನಡೆಸಿದೆ. ಇವರು ಬಳಿ ಬಟ್ಟೆ ಸಹ ಧರಿಸಿದ್ದರಿಂದ ಇವರನ್ನೇ ಗುರಿಯಾಗಿಸಿದೆ ಎನ್ನಲಾಗಿದೆ. ಏಕಕಾಲದಲ್ಲಿ ನೂರಾರು ಹೆಜ್ಜೇನು ಗಳು ದಾಳಿ ನಡೆಸಿದ್ದರಿಂದ ಮುಖ, ದೇಹ, ಕೈ-ಕಾಲುಗಳೆಲ್ಲ ಊದಿಕೊಂಡು, ಗಂಭೀರ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.