BB Telugu: ಬಿಗ್‌ಬಾಸ್‌ ಗೆದ್ದು ಮೂರೇ ದಿನದಲ್ಲಿ ಜೈಲು ಸೇರಿದ ಪಲ್ಲವಿ ಪ್ರಶಾಂತ್‌.!

Team Udayavani, Dec 21, 2023, 1:27 PM IST

BB Telugu: ಬಿಗ್‌ಬಾಸ್‌ ಗೆದ್ದು ಮೂರೇ ದಿನದಲ್ಲಿ ಜೈಲು ಸೇರಿದ ಪಲ್ಲವಿ ಪ್ರಶಾಂತ್‌.!

ಹೈದರಾಬಾದ್: ಬಿಗ್‌ ಬಾಸ್ ತೆಲುಗು ಸೀಸನ್‌ -7 ಪಲ್ಲವಿ ಪ್ರಶಾಂತ್‌ ಅವರು ಬಿಗ್‌ ಬಾಸ್‌ ಪ್ರಶಸ್ತಿ ಗೆದ್ದ ಬಳಿಕ ಸುದ್ದಿಯಲ್ಲಿದ್ದಾರೆ. ಅವರ ವಿರುದ್ಧ ಪೊಲೀಸರು ಜಾಮೀನು ರಹಿತ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಬಳಿಕ ಅವರು ಪೊಲೀಸರ ಕಣ್ತಪ್ಪಿಸಿ ಪರಾರಿ ಆಗಿದ್ದಾರೆ ಎನ್ನಲಾಗಿತ್ತು, ಇದೀಗ ಪೊಲೀಸರು ಅವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎಂದು ವರದಿಯಾಗಿದೆ.

ಆಗಿದ್ದೇನು? : ಭಾನುವಾರ(ಡಿ.17 ರಂದು) ಬಿಗ್‌ ಬಾಸ್‌ ಫಿನಾಲೆ ನಡೆದಿತ್ತು. ಬಿಗ್ ಬಾಸ್ ನ ಗ್ರ್ಯಾಂಡ್ ಫಿನಾಲೆಗೆ ತಮ್ಮ ಹಳ್ಳಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಕರೆತರದಂತೆ ಪ್ರಶಾಂತ್ ಅವರಲ್ಲಿ ಪೊಲೀಸರು ಮೊದಲೇ ವಿನಂತಿಸಿದ್ದರು. ಇದಲ್ಲದೇ ಜನಸಂದಣಿ ತಪ್ಪಿಸಲು  ಅನ್ನಪೂರ್ಣ ಸ್ಟುಡಿಯೋದಲ್ಲಿರುವ ಬೇರೆ ನಿರ್ಗಮನ ದ್ವಾರವನ್ನು ಬಳಸಬೇಕೆಂದು ಪೊಲೀಸರು ವಿನಂತಿಸಿದ್ದರು. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಪ್ರಶಾಂತ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟು ಮಾಡಿದ್ದರಿಂದ ರಸ್ತೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರ ಅನುಮತಿಯಿಲ್ಲದೆ ಅವರು ರ‍್ಯಾಲಿ ನಡೆಸಿದ್ದರು.

ಬಿಗ್‌ ಬಾಸ್‌ ವಿಜೇತ ಪ್ರಶಾಂತ್‌ ಹಾಗೂ ರನ್ನರ್‌ ಅಪ್‌ ಅಮರ್‌ ಅಭಿಮಾನಿಗಳ ನಡುವೆ ರಂಪಾಟವೇ ನಡೆದಿತ್ತು. ಉತ್ಸುಕರಾದ ಅಭಿಮಾನಿಗಳು ವಿವಿಧ ಹೌಸ್‌ಮೇಟ್‌ಗಳ ಕಾರಿನ ಗ್ಲಾಸ್‌ಗಳನ್ನು ಒಡೆದು, ಹಲವು ಸರ್ಕಾರಿ ಬಸ್‌ಗಳ ಗಾಜುಗಳನ್ನು ಒಡೆದಿದ್ದಾರೆ. ಅಮರ್ ಮತ್ತು ಪ್ರಶಾಂತ್ ಅಭಿಮಾನಿಗಳ ನಡುವೆ ರಸ್ತೆಯಲ್ಲೇ ಹೊಡೆದಾಟ ನಡೆದಿತ್ತು.

ಇದನ್ನೆಲ್ಲಾ ಪರಿಗಣಿಸಿ ಪೊಲೀಸರು ಪ್ರಶಾಂತ್ ವಿರುದ್ಧ ಅಸಹಕಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಇಂದು ಸಂಜೆಯೊಳಗೆ (ಡಿ.20) ತಮ್ಮ ಮುಂದೆ ಹಾಜರಾಗುವಂತೆ ಪೊಲೀಸರು ಪ್ರಶಾಂತ್‌ಗೆ ಸೂಚಿಸಿದ್ದರು.

ಆದರೆ ಪೊಲೀಸರ ಕೈಗೆ ಸಿಗದೆ ಪಲ್ಲವಿ ಪ್ರಶಾಂತ್‌ ಪರಾರಿ ಆಗಿದ್ದರು ಎನ್ನಲಾಗಿತ್ತು. ಗದ್ವೇಲ್‌ನಲ್ಲಿರುವ ಅವರ ನಿವಾಸದಿಂದ ಅವರನ್ನು ಬಂಧಿಸಲಾಗಿದೆ. ಪ್ರಶಾಂತ್ ಅವರನ್ನು ನಿನ್ನೆ ರಾತ್ರಿ ಹೈದರಾಬಾದ್‌ಗೆ ಕರೆದೊಯ್ಯಲಾಯಿತು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಶಾಂತ್‌ , ಅವರ ಸಹೋದರನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ತಿಳಿಸಿದೆ. ಸದ್ಯ ಪ್ರಶಾಂತ್‌ ಹೈದರಾಬಾದ್‌ನ ಚಂಚಲಗುಡ ಜೈಲಿನಲ್ಲಿದ್ದಾರೆ.

View this post on Instagram

A post shared by IDream Media (@idreammedia)

ಟಾಪ್ ನ್ಯೂಸ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

2-biggboss

BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.