KKRTC; ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ ಜಾರಿ
Team Udayavani, Dec 21, 2023, 1:39 PM IST
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೊಳಿಸಲಾಗಿದೆ.
ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಉಪಸ್ಥಿತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ, ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ರವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರಿಗೆ ನಿಗಮದ ಸಿಬ್ಬಂದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಯೂನಿಯನ್ ಬ್ಯಾಕ್ ಆಫ್ ಇಂಡಿಯಾ ರವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಂಡಿದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರರಿಸಿದ ಯೂನಿಯನ್ ಬ್ಯಾಂಕ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.
ಸದರಿ ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ ರೂ.1.20 ಕೋಟಿಯ ಅಪಘಾತ ವಿಮೆ ಹಣ ದೊರಕಲಿದೆ.
ನೌಕರರು ಶಾಶ್ವತ ಅಂಗನ್ಯೂನ್ಯತೆ / ಭಾಗಶಃ ಶಾಶ್ವತ ಅಂಗನ್ಯೂನ್ಯತೆ ಒಳಗಾದಲ್ಲಿ ರೂ.1 ಕೋಟಿಗಳನ್ನು ಪಡೆಯಬಹುದಾಗಿದ್ದು, ಡೆಬಿಟ್ ಕಾರ್ಡ್ ಮೇಲೆ ರೂ.15 ಲಕ್ಷಗಳ ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿರುತ್ತದೆ. ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ ರೂ.5 ಲಕ್ಷಗಳು ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ ರೂ.1.20 ಕೋಟಿಗಳ ಅಪಘಾತ ವಿಮೆ ಸಾರಿಗೆ ನೌಕರರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ ತರಲಾಗಿದೆ.
ಈ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಎಸ್. ಭರತ್ ಡಾ. ಕೆ. ನಂದಿನಿ ದೇವಿ ಭಾಆಸೇ, ನಿರ್ದೇಶಕರು (ಸಿ&ಜಾ), ಕೆಎಸ್ ಆರ್ ಟಿ ಸಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪರವಾಗಿ ವೆಂಕಟ್ ಸುದೀರ ಚೀದೆಲ್ಲ, ಪ್ರಾದೇಶಿಕ ಮುಖ್ಯಸ್ಥರು ಕಲಬುರಗಿ ಹಾಗೂ ಶ್ರೀ ನಾಗಭೂಷಣ. ಜಿ.ಆರ್. ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸಿ.ಆರ್.ಸಿ. ಬೆಂಗಳೂರು, ಶ್ರೀ,ನಾಗರಾಜ್ ದೇಶನೂರು, ಮುಖ್ಯ ವ್ಯವಸ್ಥಾಪಕರು ಸಿ.ಆರ್.ಸಿ. ಬೆಂಗಳೂರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.