ODI; ಸಂಜು ಸ್ಯಾಮ್ಸನ್ ಚೊಚ್ಚಲ ಅಂತಾರಾಷ್ಟ್ರೀಯ ಶತಕ: ಹರಿಣಗಳಿಗೆ 297 ರನ್ ಗುರಿ
ಸರಣಿ ನಿರ್ಣಾಯಕ ಪಂದ್ಯ
Team Udayavani, Dec 21, 2023, 8:23 PM IST
ಪಾರ್ಲ್ : ಇಲ್ಲಿನ ಬೋಲ್ಯಾಂಡ್ ಪಾರ್ಕ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಎದುರಿನ ಸರಣಿ ನಿರ್ಣಾಯಕ ಏಕದಿನ ಸರಣಿಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರು ಚೊಚ್ಚಲ ಅಂತಾರಾಷ್ಟ್ರೀಯ ಅಮೋಘ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ ಭಾರತ ಆತಿಥೇಯ ಹರಿಣಗಳಿಗೆ ಗೆಲ್ಲಲು 297 ರನ್ ಗಳ ಗುರಿ ಮುಂದಿಟ್ಟಿದೆ.
ಒನ್ ಡೌನ್ ಆಟಗಾರನಾಗಿ ಬಂದ ಸ್ಯಾಮ್ಸನ್ ಅವಕಾಶವನ್ನು ಭರಪೂರವಾಗಿ ಬಳಸಿಕೊಂಡರು. ಅಮೋಘ ಇನ್ನಿಂಗ್ಸ್ ಆಡಿದ ಅವರು 108 ರನ್ ಗಳಿಸಿ ಔಟಾದರು. 114 ಎಸೆತಗಳಲ್ಲಿ6 ಬೌಂಡರಿ ಮತ್ತು 3 ಆಕರ್ಷಕ ಸಿಕ್ಸರ್ ಗಳು ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು.
ಆರಂಭಿಕರಾದ ರಜತ್ ಪಾಟಿದಾರ್ 22, ಸಾಯಿ ಸುದರ್ಶನ್ 10 ರನ್ ಗೆ ಔಟಾದರು. ನಾಯಕ ಕೆಎಲ್ ರಾಹುಲ್ 21 ರನ್ ಗಳಿಗೆ ಪೆವಿಲಿಯನ್ ಗೆ ಮರಳಿದರು. ಆ ಬಳಿಕ ಸ್ಯಾಮ್ಸನ್ ಅವರಿಗೆ ಸಾಥ್ ನೀಡಿದ ತಿಲಕ್ ವರ್ಮ 52 ರನ್ ಗಳಿಸಿ ಔಟಾದರು. ರಿಂಕು ಸಿಂಗ್ 38, ವಾಷಿಂಗ್ಟನ್ ಸುಂದರ್ 14, ಅರ್ಷದೀಪ್ ಸಿಂಗ್ ಔಟಾಗದೆ 7 ರನ್ ಗಳಿಸಿದರು. 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್ ಕಲೆ ಹಾಕಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.