Labor Department: ದಿನಪತ್ರಿಕೆ ವಿತರಕರಿಗೆ ವಿಮೆ, ವೈದ್ಯಕೀಯ ಪರಿಹಾರ ಸೌಲಭ್ಯ
Team Udayavani, Dec 22, 2023, 12:28 AM IST
ಮಣಿಪಾಲ: ಕಾರ್ಮಿಕ ಇಲಾಖೆ ಈಗ ದಿನಪತ್ರಿಕೆ ವಿತರಿಸುವ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ “ಇ-ಶ್ರಮ್’ ಪೋರ್ಟಲ್ ಹಾಗೂ ಗಿಗ್ ಕಾರ್ಮಿಕರ ಜೀವ ವಿಮೆ ಮತ್ತು ಅಪಘಾತ ಪರಿಹಾರ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಲು ತಂತ್ರಾಂಶ ಅಭಿವೃದ್ಧಿಪಡಿಸಿದೆ.
ಈ ಯೋಜನೆಗಳಡಿ ಗಿಗ್ ಕಾರ್ಮಿಕರಿಗೆ 2 ಲಕ್ಷ ರೂ. ಜೀವ ವಿಮೆ ಸೌಲಭ್ಯ ಮತ್ತು 2 ಲಕ್ಷ ರೂ.ಅಪಘಾತ ವಿಮೆ ಸೌಲಭ್ಯ ಸಹಿತ ಒಟ್ಟು 4 ಲಕ್ಷ ರೂ.ವಿಮೆ ಸೌಲಭ್ಯ ದೊರೆಯಲಿದೆ. ಜತೆಗೆ ದಿನಪತ್ರಿಕೆ ವಿತರಿಸುವ ಕಾರ್ಮಿಕರಿಗೆ 2 ಲಕ್ಷ ರೂ. ಅಪಘಾತ ಪರಿಹಾರ ಸೌಲಭ್ಯ ಹಾಗೂ 1 ಲಕ್ಷ ರೂ.ವರೆಗೆ ವೈದ್ಯಕೀಯ ಸೌಲಭ್ಯ ಸಿಗಲಿದೆ.
ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆ
ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
16ರಿಂದ 59 ವಯೋಮಾನದವರಾಗಿರಬೇಕು
ಕೇಂದ್ರ ಸರಕಾರ ಇ ಶ್ರಮ ಪೋರ್ಟಲ್ ನಲ್ಲಿ ‘NEWS PAPER BOY’ ಎಂಬ ವರ್ಗದಡಿ ನೋಂದಣಿಯಾಗಿರಬೇಕು.
ಆದಾಯ ತೆರಿಗೆ ಪಾವತಿದಾರರಾಗಿರಬಾರದು.
ಇಎಸ್‌ಐ ಮತ್ತು ಇಪಿಎಫ್ ಸೌಲಭ್ಯ ಹೊಂದಿರಬಾರದು.
ದೊರಕುವ ಸೌಲಭ್ಯಗಳು
ಅಪಘಾತದಿಂದ ಮರಣ ಹೊಂದಿದಲ್ಲಿ 2 ಲಕ್ಷ ರೂಪಾಯಿ
ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ವರೆಗೆ (ಶೇಕಡಾವಾರು ದುರ್ಬಲತೆ ಆಧಾರದ ಮೇಲೆ)
ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ 1 ಲಕ್ಷ ರೂಪಾಯಿಗಳ ವರೆಗೆ ಸಿಗಲಿದೆ.
ಎಲ್ಲ ಪತ್ರಿಕೆ ವಿತರಕರು ಇ- ಶ್ರಮ ಪೋರ್ಟಲ್ http://www.eshram.gov.in ಅಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಕಾರ್ಮಿಕ ಸಹಾಯವಾಣಿ
155214 (24×7) ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು / ಕಾರ್ಮಿಕ ನಿರೀಕ್ಷಕರ ಕಚೇರಿಗಳು, ಕಾರ್ಮಿಕ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.