![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 22, 2023, 6:10 AM IST
ಹೊಸದಿಲ್ಲಿ: ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಆರ್‌ಟಿಪಿಸಿಆರ್ -ಕೊರೊನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವ ಕುರಿತು ಚಿಂತನೆ ಮಾಡಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟ ಪಡಿಸಿದೆ.
ಜೆಎನ್.1 ಉಪ ರೂಪಾಂತರಿ ಪತ್ತೆಯ ಬಳಿಕವೂ ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಸಂಖ್ಯೆ ಕಡಿಮೆಯೇ ಇದ್ದು, ಪರಿಸ್ಥಿತಿ ತೀರಾ ಕಳವಳಕಾರಿಯಾಗಿಲ್ಲ ಈ ಹಿನ್ನೆಲೆಯಲ್ಲಿ ಅಂಥ ಯಾವುದೇ ಕ್ರಮಗಳನ್ನು ಕಡ್ಡಾಯಗೊಳಿಸುವ ಬಗ್ಗೆ ಪ್ರಸ್ತಾವಿಸಲಾಗಿಲ್ಲ ಎಂದಿದೆ. ಇನ್ನು ಗುರುವಾರ ದೇಶಾದ್ಯಂತ ಹೊಸದಾಗಿ 594 ಮಂದಿಗೆ ಕೊರೊನಾ ದೃಢಪಟ್ಟು, 6 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಕೇರಳದಿಂದಲೇ 300 ಪ್ರಕರಣ ದಾಖಲಾಗಿದೆ ಹಾಗೂ ಮೂವರು ಮೃತಪಟ್ಟಿದ್ದಾರೆ.
ರಾಜಸ್ಥಾನದಲ್ಲಿ ಮಾರ್ಗಸೂಚಿ: ರಾಜಸ್ಥಾನದ ಜೈಸ್ಮ ಲೇರ್‌ನಲ್ಲಿ ಇಬ್ಬರಿಗೆ ಜೆಎನ್.1 ಉಪ ರೂಪಾಂತರಿ ದೃಢವಾದ ಬೆನ್ನಲ್ಲೇ ಗುರುವಾರ ಜೈಪುರದಲ್ಲಿ ಮತ್ತಿಬ್ಬರಿಗೆ ಇದೇ ಸೋಂಕು ಹರಡಿರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಚಂಡೀಗಢದಲ್ಲಿ ಮಾಸ್ಕ್ ಕಡ್ಡಾಯ
ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಚಂಡೀಗಢ ಆಡಳಿತ ಆದೇಶಿಸಿದೆ. ಉಪ ತಳಿ ಜೆಎನ್.1 ತೀವ್ರಗತಿಯಲ್ಲಿ ಹರಡುತ್ತಿದೆ. ಮುನ್ನೆ ಚ್ಚರಿಕೆ ಕ್ರಮವಾಗಿ ಚಂಡೀಗಢ ಆಡಳಿತ ಮಾರ್ಗಸೂಚಿ ಹೊರಡಿಸಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೆಮ್ಮುವಾಗ ಮತ್ತು ಸೀನುವಾಗ ಬಟ್ಟೆ ಅಥವಾ ಟಿಶ್ಯು ಪೇಪರ್ ಅನ್ನು ಅಡ್ಡ ಹಿಡಿಯಿರಿ. ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.