ಹನುಮಮಾಲಾ ವಿಸರ್ಜನೆ:ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಕಿಷ್ಕಿಂಧಾ ಅಂಜನಾದ್ರಿ
Team Udayavani, Dec 22, 2023, 10:38 PM IST
ಗಂಗಾವತಿ:ಹನುಮದ್ ವೃತದ ನಿಮಿತ್ತ ಡಿ.23,24 ರಂದು ಜರುಗುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಿಮಿತ್ತ ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿ ಇಡೀ ಬೆಟ್ಟಕ್ಕೆ ವಿವಿಧ ಬಗೆಯ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು ಇಡೀ ಅಂಜನಾದ್ರಿ ಸುಂದರವಾಗಿ ಕಂಗೊಳಿಸುತ್ತಿದೆ.
ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿರುವ ಏಳು ಬೆಟ್ಟಗಳಲ್ಲಿ ಅಂಜನಾದ್ರಿ ಪ್ರಾಕೃತಿಕವಾಗಿ ಮುಂದಿನ ಭಾಗ ಹನುಮಂತ ಮುಖವನ್ನು ಹೋಲುತ್ತಿದೆ. ಬಾಲಾಂಜನೇಯ ಚಿಕ್ಕಂದಿನಲ್ಲಿ ಸೂರ್ಯ ದೇವನನ್ನು ಕೆಂಪಾದ ಹಣ್ಣು ಎಂದು ತಿಳಿದು ತಿಂದ ರೀತಿಯಲ್ಲಿ ಇಡೀ ಬೆಟ್ಟಕ್ಕೆ ಅಳವಡಿಸಿರುವ ವಿದ್ಯುತ್ ದೀಪಗಳು ಕಾಣುತ್ತಿವೆ. ದೂರದ ಹೊಸಪೇಟೆ, ಕಮಲಾಪೂರ,ಜಿಂದಾಲ್ ಹಾಗೂ ಸುತ್ತಲಿನ ಊರುಗಳ ಜನರು ಅಂಜನಾದ್ರಿ ಗೆ ಅಳವಡಿಸಿರುವ ವಿದ್ಯುತ್ ದೀಪಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದೇ ಮೊದಲ ಭಾರಿಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ.
ಪೂರ್ವ ಸಿದ್ದತೆ ಸಭೆಯ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ ಹಾಗೂ ಶಾಸಕ ಗಾಲಿ ಜನಾರ್ದನರೆಡ್ಡಿ ಮೂರು ದಿನಗಳ ಕಾಲ ಇಡೀ ಬೆಟ್ಟಕ್ಕೆ ವಿದ್ಯುತ್ ಅಲಂಕಾರ ಮಾಡಲು ಸೂಚನೆ ನೀಡಿದ್ದರು.
ಇದುವರೆಗೆ ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕಿಂತ ಈ ವೈಶಿಷ್ಟ್ಯವಾಗಿ ಅದ್ದೂರಿಯಾಗಿ ಮತ್ತು ಶಿಸ್ತು ಬದ್ಧವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಹಿನ್ನೆಲೆಯಲ್ಲಿ ಇಡೀ ಜಿಲ್ಲಾಡಳಿತ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಮಾಡಿ ವ್ಯವಸ್ಥೆಗಳನ್ನು ಗಮನಿಸುತ್ತಿದ್ದರು.
ಗಂಗಾವತಿ ಜರುಗಿದ ಹನುಮಮಾಲಾ ಸಂಕೀರ್ತನಾ ಯಾತ್ರೆಯನ್ನು ಪೊಲೀಸ್ ಇಲಾಖೆ ಶಿಸ್ತು ಹಾಗೂ ಶಾಂತಿಯಿಂದ ಯಶಸ್ವಿಯಾಗಿ ನಡೆಸಿದ್ದು ಹನುಮಮಾಲಾಧಾರಿಗಳು ಹಾಗೂ ಸಾರ್ವಜನಿಕರು ಪ್ರಶಂಸೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.