WFI: ಬಜರಂಗ್ ಪೂನಿಯರಿಂದ ಪದ್ಮಶ್ರೀ ಪ್ರಶಸ್ತಿ ವಾಪಸ್?
Team Udayavani, Dec 22, 2023, 11:29 PM IST
ಹೊಸದಿಲ್ಲಿ: ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಬೃಜ್‌ಭೂಷಣ್ ಸಿಂಗ್ ಅವರ ಪರಮಾಪ್ತ ಸಂಜಯ್ ಸಿಂಗ್ ಆಯ್ಕೆಯಾದ ಬೆನ್ನಲ್ಲೇ ಕುಸ್ತಿಪಟುಗಳ ಆಕ್ರೋಶ, ಅಸಮಾಧಾನ ತೀವ್ರಗೊಂಡಿದೆ. ಗುರುವಾರ ಸಾಕ್ಷಿ ಮಲಿಕ್ ನಿವೃತ್ತಿ ಘೋಷಿಸಿದ್ದರು. ಇದೀಗ ಮತ್ತೋರ್ವ ಕುಸ್ತಿಪಟು ಬಜರಂಗ್ ಪೂನಿಯ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಮರಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸರಕಾರ, “ಇದು ಅವರ ವೈಯಕ್ತಿಕ ನಿರ್ಧಾರ. ಬಜರಂಗ್ ಅವರ ಮನ ಒಲಿಸಲು ಪ್ರಯತ್ನಿಸುತ್ತೇವೆ” ಎಂದಿದೆ.
“ನಾನು ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನ ಮಂತ್ರಿಯವರಿಗೆ ಹಿಂದಿರುಗಿಸುತ್ತೇನೆ. ಇದನ್ನು ಈ ಮೂಲಕ ಘೋಷಿಸುತ್ತಿದ್ದೇನೆ” ಎಂಬುದಾಗಿ ಬಜರಂಗ್ “ಎಕ್ಸ್”ನಲ್ಲಿ ಬರೆದುಕೊಂಡಿದ್ದಾರೆ. ಬಜರಂಗ್ ಪೂನಿಯ 2019ರಲ್ಲಿ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.