Hijab ಧರಿಸುವುದಾದರೆ ಕೇಸರಿ ಧರಿಸುವುದರಲ್ಲಿ ತಪ್ಪಿಲ್ಲ: ಡಾ.ಭರತ್ ಶೆಟ್ಟಿ ವೈ
ಶಾಲಾ ಕಾಲೇಜು ಕ್ಯಾಂಪಸ್ ಗಳಲ್ಲಿ ಯೂನಿಫಾರ್ಮ್ ವಸ್ತ್ರ ಸಂಹಿತೆಗೆ ಸರಕಾರವೇ ಅಡ್ಡಿ
Team Udayavani, Dec 23, 2023, 3:04 PM IST
ಮಂಗಳೂರು: ಶಾಲಾ-ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಂಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ. ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ ನೀಡುವುದಾದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಹೋಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ತಿರುಗೇಟು ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜು ಕ್ಯಾಂಪಸ್ ಗಳಲ್ಲಿ ವಸ್ತ್ರ ಸಂಹಿತೆ ಕುರಿತಂತೆ ಸುಧೀರ್ಘ ಹೋರಾಟವೊಂದು ವಿವಿಧ ವಿದ್ಯಾರ್ಥಿ ಸಂಘಟನೆಗಳ ನಡುವೆ ರೂಪುಗೊಳ್ಳಬಹುದು ಎಂದಿರುವ ಶಾಸಕ ಡಾ.ಭರತ್ ಶೆಟ್ಟಿ ಅವರು, ಸರಕಾರ ಕೂಡಲೇ ಎಚ್ಚೆತ್ತುಕೊಂಡು ತನ್ನ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಹಿಜಾಬ್ ಧರಿಸಲು ಕ್ಯಾಂಪಸ್ ಹೊರಗಡೆ, ಕಾಲೇಜಿನ ಒಳಗೂ ಅನುಮತಿ ನೀಡುವುದಾದರೆ,ಕೇಸರಿ ಶಾಲು ಧರಿಸಲು ಹಿಂದೂಪರ ವಿದ್ಯಾರ್ಥಿಗಳಿಗೂ ಆಯ್ಕೆಯ ಸ್ವಾತಂತ್ರ್ಯವಿದೆ. ಜಾತಿಗೊಂದರಂತೆ ಬಟ್ಟೆ ಧರಿಸಲು ಕ್ಯಾಂಪಸ್ ನಲ್ಲಿ ಅನುಮತಿ ನೀಡುವ ಮೂಲಕ ಸರಕಾರ ಶಾಲಾ-ಕಾಲೇಜಿನ ಯೂನಿಫಾರ್ಮ್ ವ್ಯವಸ್ಥೆಗೆ ಬೆಲೆ ಇಲ್ಲದಂತೆ ಮಾಡಿದೆ ಎಂದು ಹೇಳಿದರು.
ಶಾಲಾ-ಕಾಲೇಜು ಕೊಠಡಿ ಒಳಗೆ ಎಲ್ಲರೂ ಸಮಾನರು ಎಂಬ ಭಾವನೆಗೆ ಸರಕಾರವೇ ಹಿಜಾಬ್ ಧರಿಸಲು ಅನುಮತಿ ನೀಡುವ ಮೂಲಕ ದಕ್ಕೆ ತಂದಂತಾಗಿದೆ. ಬಿಜೆಪಿ ಇದರ ವಿರುದ್ದ ಎಲ್ಲಾ ಹೋರಾಟ ಹಾದಿಯನ್ನು ಮುಕ್ತವಾಗಿ ಇರಿಸಿದೆ. ಸೂಕ್ತ ಸಮಾಲೋಚನೆಯ ಬಳಿಕ ಹೋರಾಟದ ಅಭಿಯಾನ ಆರಂಭವಾಗಲಿದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.