Music maestro ಉಸ್ತಾದ್ ರಶೀದ್ ಖಾನ್ ಅವರ ಸ್ಥಿತಿ ಚಿಂತಾಜನಕ
Team Udayavani, Dec 23, 2023, 7:26 PM IST
ಕೋಲ್ಕತಾ: ಪ್ರಾಸ್ಟೇಟ್ ಕ್ಯಾನ್ಸರ್ನಿಂದಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಖ್ಯಾತ ಹಿಂದುಸ್ಥಾನಿ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರ ಸ್ಥಿತಿ ಚಿಂತಾಜನಕವಾಗಿದೆ. 55 ರ ಹರೆಯದ ಖಾನ್ ಅವರನ್ನು ವೆಂಟಿಲೇಶನ್ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದರಾದರೂ ಸೆರೆಬ್ರಲ್ ಅಟ್ಯಾಕ್ ನಂತರ, ಅವರ ದೇಹ ಸ್ಥಿತಿಯು ಕ್ಷೀಣಿಸಲು ಪ್ರಾರಂಭವಾಯಿತು. ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ನಲ್ಲಿ ಇರಿಸಲಾಗಿದೆ. ನಮ್ಮ ವೈದ್ಯರು ಅವರ ಮೇಲೆ ನಿರಂತರ ನಿಗಾ ಇಡುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ರಾಂಪುರ-ಸಹಸ್ವಾನ್ ಘರಾನಾಗೆ ಸೇರಿದ ಖಾನ್, ಘರಾನಾ ದಿಗ್ಗಜ ಇನಾಯತ್ ಹುಸೇನ್ ಖಾನ್ ಅವರ ಮರಿಮೊಮ್ಮಗ. ಉತ್ತರ ಪ್ರದೇಶದ ಬದೌ ನ್ನ ಸಹಸ್ವಾನ್ನಲ್ಲಿ ಜನಿಸಿದ ಖಾನ್ ಅವರು ತಮ್ಮ ತಾಯಿಯ ಅಜ್ಜ, ಉಸ್ತಾದ್ ನಿಸ್ಸಾರ್ ಹುಸೇನ್ ಖಾನ್ (1909-1993) ರಿಂದ ಆರಂಭಿಕ ತರಬೇತಿಯನ್ನು ಪಡೆದಿದ್ದರು. ಅವರು ಉಸ್ತಾದ್ ಗುಲಾಮ್ ಮುಸ್ತಫಾ ಖಾನ್ ಅವರ ಸೋದರಳಿಯ ಕೂಡ.2006ರಲ್ಲಿ ಪದ್ಮಶ್ರೀ ಮತ್ತು 2022 ರಲ್ಲಿ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.