ಡಜನ್‌ ಸಚಿವರು ಲೋಕಸಭೆ ಕಣಕ್ಕೆ ವರಿಷ್ಠರ ಸೂಚನೆಯನ್ನು ಸಿಎಂ, ಡಿಸಿಎಂಗೆ ತಿಳಿಸಿದ ಸುರ್ಜೇವಾಲ


Team Udayavani, Dec 23, 2023, 11:37 PM IST

CONGRESS FLAG IMP

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಗಳಿಸಿದಂತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಕರ್ನಾಟಕದಿಂದ ಅತ್ಯಧಿಕ ಸ್ಥಾನಗಳನ್ನು ಗೆಲ್ಲಬೇಕೆಂದು ಸಂಕಲ್ಪ ತೊಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ಈಗ ಒಂದು ಡಜನ್‌ ಸಚಿವರನ್ನು ಕಣಕ್ಕಿಳಿಸಲು ಗಂಭೀರ ಚಿಂತನೆ ನಡೆಸಿದೆ.

ನಿಗಮ, ಮಂಡಳಿಗಳ ನೇಮಕಾತಿ ಸಂಬಂಧ ಇತ್ತೀಚೆಗೆ ದಿಲ್ಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುಜೇìವಾಲ ಅವರು ಲೋಕಸಭಾ ಚುನಾವಣೆ ತಯಾರಿ ಸಂಬಂಧ ನಡೆಸಿದ ಮಾತುಕತೆ ಸಂದರ್ಭದಲ್ಲಿ ಪಕ್ಷದ ವರಿಷ್ಠರ ಸೂಚನೆಯನ್ನು ಸುಜೇìವಾಲ ಅವರು ಸೂಚ್ಯವಾಗಿ ತಿಳಿಸಿದರೆಂದು ಗೊತ್ತಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರವು ಈಗಾಗಲೇ 4 ಗ್ಯಾರಂಟಿ ಯೋಜನೆಗಳನ್ನು (ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ) ಜಾರಿಗೊಳಿಸುವ ಮೂಲಕ ಜನಮನ ಗೆದ್ದಿದೆ. ಜನವರಿಯಲ್ಲಿ 5ನೇ ಗ್ಯಾರಂಟಿಯಾದ ಯುವನಿಧಿ ಜಾರಿಗೆ ಸಿದ್ಧತೆ ಆರಂಭಿಸಿದೆ. ಹೀಗಾಗಿ ಈ ಗ್ಯಾರಂಟಿ ಯೋಜನೆಗಳ ಫ‌ಲಾನುಭವಿಗಳು ಸರಕಾರದ ಕೈಹಿಡಿಯಲಿದ್ದಾರೆ ಎಂಬುದು ಸಿಎಂ, ಡಿಸಿಎಂ ಅವರ ರಾಜಕೀಯ ಲೆಕ್ಕಾಚಾರ. ಜತೆಗೆ ಜೆಡಿಎಸ್‌-ಬಿಜೆಪಿ ಮೈತ್ರಿಕೂಟದ ಬಗ್ಗೆ ಉಭಯ ಪಕ್ಷಗಳ ಒಂದು ವರ್ಗ ಅಸಮಾಧಾನದಲ್ಲಿದೆ. ಹೀಗಾಗಿ ಅದರ ಲಾಭವೂ ನಮಗೆ ಆಗುತ್ತದೆ ಎಂಬುದು ರಾಜ್ಯ ನಾಯಕರ ನಿರೀಕ್ಷೆ.
ಈ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಈಗ ರಾಜ್ಯದ ಒಂದು ಡಜನ್‌ ಸಚಿವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಸಚಿವರೇ ಚುನಾವಣೆ ಕಣಕ್ಕೆ ಧುಮುಕುವುದರಿಂದ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಎಲ್ಲರೂ ಕೆಲಸ ಮಾಡುತ್ತಾರೆ. ಬದಲಿಗೆ ಅವರ ಕುಟುಂಬ ಸದಸ್ಯರು ಇಲ್ಲವೇ ಸಂಬಂಧಿಕರನ್ನು ಕಣಕ್ಕಿಳಿಸುವ ಬಗ್ಗೆ ಹೈಕಮಾಂಡ್‌ ಅಷ್ಟೊಂದು ಒಲವು ತೋರುತ್ತಿಲ್ಲ. ಹೀಗಾಗಿ ಸಚಿವರೇ ಚುನಾವಣೆ ಕಣಕ್ಕಿಳಿಯುವುದು ಅನಿವಾರ್ಯ ಆಗಬಹುದು.

ಯಾರ್ಯಾರು?
ಚಾಮರಾಜನಗರದಿಂದ ಸಮಾಜ ಕಲ್ಯಾಣ ಸಚಿವ ಡಾ| ಎಚ್‌.ಸಿ.ಮಹದೇವಪ್ಪ, ಬಳ್ಳಾರಿಯಿಂದ ಕ್ರೀಡಾ ಸಚಿವ ಬಿ.ನಾಗೇಂದ್ರ, ಬೆಂಗಳೂರು ಉತ್ತರದಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ, ಕೋಲಾರದಿಂದ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅಥವಾ ಗೃಹ ಸಚಿವ ಡಾ| ಜಿ.ಪರಮೇಶ್ವರ್‌, ಬೆಳಗಾವಿಯಿಂದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಮಂಡ್ಯದಿಂದ ಕೃಷಿ ಸಚಿವ ಚಲುವರಾಯಸ್ವಾಮಿ, ತುಮಕೂರಿನಿಂದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ, ಬೆಂಗಳೂರು ಸೆಂಟ್ರಲ್‌ನಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅಥವಾ ವಸತಿ ಸಚಿವ ಜಮೀರ್‌ ಅಹ್ಮದ್‌ ಅಥವಾ ಶಾಂತಿನಗರ ಶಾಸಕ ಎನ್‌.ಎ.ಹ್ಯಾರೀಸ್‌ ಹಾಗೂ ಬೀದರ್‌ನಿಂದ ಅರಣ್ಯ ಸಚಿವ ಈಶ್ವರ ಖಂಡ್ರೆ, ಬಾಗಲಕೋಟೆಯಿಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಪ್ರಾಥಮಿಕ ಚರ್ಚೆಗಳು ಹೈಕಮಾಂಡ್‌ ಹಂತದಲ್ಲಿ ನಡೆದಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಲೆಕ್ಕಾಚಾರವೇನು?
ಬಹುತೇಕ ಹಿರಿಯ ಸಚಿವರೇ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳಾಗುವುದರಿಂದ ಆಯಾ ಜಿಲ್ಲೆಯ ಸಚಿವರು ಒಗ್ಗಟ್ಟಾಗಿ ಕೆಲಸ ಮಾಡುವುದರಿಂದ ಒಳ್ಳೆಯ ಫ‌ಲಿತಾಂಶ ಬರಬಹುದೆಂಬ ಲೆಕ್ಕಾಚಾರವಿದೆ. ಜತೆಗೆ ಲೋಕಸಭೆಗೆ ಸಚಿವರು ಆಯ್ಕೆಯಾದ ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಆ ಸ್ಥಾನಗಳಿಗೆ ಮತ್ತಷ್ಟು ಮಂದಿಯನ್ನು ತುಂಬುವ ಮೂಲಕ ಕಾಂಗ್ರೆಸ್‌ ಪಕ್ಷದೊಳಗಿನ ಅಸಮಾಧಾನವನ್ನು ಕಡಿಮೆ ಮಾಡಬಹುದು ಎಂಬುದು ಮತ್ತೂಂದು ಲೆಕ್ಕಾಚಾರ. ಆದರೆ ಸಚಿವರು ತೆರವು ಮಾಡುವ ಶಾಸಕ ಸ್ಥಾನಗಳಿಗೆ ನಡೆಯುವ ಉಪ ಚುನಾವಣೆಗಳನ್ನು ಗೆಲ್ಲುವ ಸವಾಲು ಕೂಡ ಸರಕಾರ ಹಾಗೂ ಪಕ್ಷದ ಮುಂದಿದೆ.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.