B. K. Hariprasad ದುರಹಂಕಾರದ ಮಾತಿಗೆ ಲೋಕ ಕದನದಲ್ಲಿ ಉತ್ತರ: ವಿಜಯೇಂದ್ರ
ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಲ್ಲ
Team Udayavani, Dec 24, 2023, 7:13 PM IST
ದಾವಣಗೆರೆ: ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ದುರಂಹಕಾರದ ಹೇಳಿಕೆಗೆ ಬಿಜೆಪಿಯ ಪ್ರತಿಯೊಬ್ಬ ಸ್ವಾಭಿಮಾನಿ ಕಾರ್ಯಕರ್ತರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದ ಅಮಲಿನಲ್ಲಿ ತೇಲುತ್ತ ದುರಹಂಕಾರದಿಂದ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಮುಖಂಡರಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ತಕ್ಕ ಶಾಸ್ತಿ ಮಾಡಲಿದ್ದಾರೆ.
ಕಾಂಗ್ರೆಸ್ ಟಿಪ್ಪುವಿನ ಪರವಾದ ಪಕ್ಷವಲ್ಲ ಎಂದಾದ ಮೇಲೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಮಾತು ಏಕೆ ಹೇಳಿದರು? ರಾಜ್ಯದಲ್ಲಿ ಬರದಿಂದ ರೈತರು ಕಂಗೆಟ್ಟು ಆತ್ಮಹತ್ಯೆಗೆ ಒಳಗಾಗುತ್ತಿರುವಾಗ ಸಿದ್ದರಾಮಯ್ಯ ಅವರ ಆದ್ಯತೆ ಏನು? ಬರ ಪರಿಹಾರವೋ ಅಥವಾ ಹಿಜಾಬ್? ರಾಜ್ಯದ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಇದಕ್ಕೆಲ್ಲ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಗೆಲ್ಲುವ ಜತೆಗೆ ಪ್ರಧಾನಿ ಮೋದಿ ಅವರಿಗೆ ಮತ್ತಷ್ಟು ಶಕ್ತಿ ತಂಬುವ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಹನುಮಂತನಂತೆ ಚುನಾವಣೆಗೆ ಕಾಯುತ್ತಿದ್ದಾರೆ. ಪಕ್ಷದ ನೂತನ ಪದಾಧಿಕಾರಿಗಳ ಆಯ್ಕೆ ಬಗ್ಗೆ ಯತ್ನಾಳ್ ವ್ಯಕ್ತಪಡಿಸಿದ ಆಕ್ಷೇಪಕ್ಕೆ ಪ್ರತಿಕ್ರಿಯಿಸಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.