Christmas 2023 ಕರಾವಳಿಯಲ್ಲಿ ಶ್ರದ್ಧಾ ಭಕ್ತಿಯಿಂದ ಕ್ರಿಸ್ಮಸ್‌ ಆಚರಣೆ


Team Udayavani, Dec 24, 2023, 11:28 PM IST

Christmas 2023 ಕರಾವಳಿಯಲ್ಲಿ ಶ್ರದ್ಧಾ ಭಕ್ತಿಯಿಂದ ಕ್ರಿಸ್ಮಸ್‌ ಆಚರಣೆ

ಮಂಗಳೂರು: ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿರುವ ಚರ್ಚ್‌ಗಳು, ತಡ ರಾತ್ರಿ ವಿಶೇಷ ಪ್ರಾರ್ಥನೆ. ಆಕರ್ಷಣೀಯ ಗೋದಲಿಗಳು, ಅವುಗಳ ಸುತ್ತ ನಕ್ಷತ್ರಗಳ ಮಿಂಚು!

ಏಸು ಕ್ರಿಸ್ತರ ಜನ್ಮ ಸ್ಮರಣೆಯ ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತ ಬಾಂಧವರು ಕರಾವಳಿಯಾದ್ಯಂತ ರವಿವಾರ ರಾತ್ರಿ ಶ್ರದ್ಧಾಪೂರ್ವಕವಾಗಿ ಆಚರಿಸಿ ಸಂಭ್ರಮಿಸಿದರು. ಮಧ್ಯರಾತ್ರಿ ವೇಳೆಯಲ್ಲಿ ಕ್ರಿಸ್ತ ಜನಿಸಿದ ನೆನಪು ಸ್ಮರಿಸಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಸಂಪ್ರದಾಯವಿದ್ದು, ಸಹಸ್ರ ಸಂಖ್ಯೆಯಲ್ಲಿ ಕ್ರೈಸ್ತರು ಬಲಿಪೂಜೆಯಲ್ಲಿ ಭಾಗಿಗಳಾದರು.

ದ.ಕ. ಜಿಲ್ಲೆಯ ಮಂಗಳೂರು ಧರ್ಮಪ್ರಾಂತಕ್ಕೆ ಒಳಗೊಂಡ ವಿವಿಧ ಚರ್ಚ್‌ಗಳನ್ನು ವಿದ್ಯುದ್ದೀಪ ಗಳಿಂದ ಅಲಂಕರಿಸಲಾಗಿತ್ತು. ಕ್ರೈಸ್ತರ ಮನೆಗಳಲ್ಲಿ, ವಿವಿಧ ಚರ್ಚ್‌ಗಳ ಆವರಣದಲ್ಲಿ ಗೋದಲಿ ನಿರ್ಮಿಸ ಲಾಗಿತ್ತು. ರಾತ್ರಿ ವೇಳೆ ಚರ್ಚ್‌ಗಳಲ್ಲಿ ಕ್ಯಾರೊಲ್‌ ಗಾಯನದ ಮೂಲಕ ಕ್ರಿಸ್ತ ಜನನ ಸ್ಮರಿಸಿ ಬಲಿಪೂಜೆ, ಪ್ರಾರ್ಥನೆ ನಡೆದವು. ಹಲವು ದಿನಗಳ ತಯಾರಿಯ ಬಳಿಕ ರವಿವಾರ ರಾತ್ರಿ ಕ್ರಿಸ್ಮಸ್‌ ಜಾಗರಣೆಯ ಮೂಲಕ ಸಡಗರದಿಂದ ಆಚರಿಸಲಾಯಿತು.

ಮಂಗಳೂರು ಧರ್ಮಪ್ರಾಂತದ ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ರೊಸಾರಿಯೊ ಕೆಥೆಡ್ರಲ್‌ನಲ್ಲಿ ಕ್ರಿಸ್ಮಸ್‌ ಹಬ್ಬದ ಬಲಿಪೂಜೆ ಅರ್ಪಿಸಿ ಕ್ರಿಸ್ತ ಜನನದ ಮಹತ್ವ ಹಾಗೂ ಕ್ರಿಸ್ಮಸ್‌ ಸಂದೇಶ ನೀಡಿದರು. ನಗರದ ಪ್ರಮುಖ ಚರ್ಚ್‌ಗಳಾದ ರೊಸಾರಿಯೋ ಕೆಥೆಡ್ರಲ್‌, ಮಿಲಾಗ್ರಿಸ್‌, ಉರ್ವ, ಬಿಜೈ, ಬೆಂದೂರ್‌ವೆಲ್‌, ಕುಲಶೇಖರ, ಶಕ್ತಿನಗರ, ಬಿಕರ್ನಕಟ್ಟೆ, ಕೂಳೂರು, ಅಶೋಕನಗರ, ವಾಮಂಜೂರು, ಬೋಂದೆಲ್‌ ಹಾಗೂ ಗ್ರಾಮಾಂತರದ ಪುತ್ತೂರು, ಬಂಟ್ವಾಳ, ಮುಡಿಪು, ಪೆರ್ಮಾನ್ನೂರು ಸೇರಿದಂತೆ ಎಲ್ಲ ಚರ್ಚ್‌ಗಳಲ್ಲಿ ಭಕ್ತರು ಸಹಸ್ರ ಸಂಖ್ಯೆಯಲ್ಲಿ ಬಲಿಪೂಜೆಯಲ್ಲಿ ಭಾಗವಹಿಸಿದರು.

ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ವಿದೇಶ, ದೂರದೂರು ಗಳಲ್ಲಿರುವ ಕ್ರೈಸ್ತ ಬಾಂಧವರು ಊರಿಗೆ ಮರಳಿದ್ದು ಕುಟುಂಬದೊಂದಿಗೆ ಸೇರಿ ಹಬ್ಬ ಆಚರಣೆಯಲ್ಲಿ ತೊಡಗಿಕೊಂಡರು. ಹಬ್ಬದ ಹಿನ್ನೆಲೆಯಲ್ಲಿ ಚರ್ಚ್‌ಗಳಲ್ಲಿ ಎಂದಿಗಿಂತಲೂ ಹೆಚ್ಚಿನ ಜನಸ್ತೋಮವಿತ್ತು. ಬಲಿಪೂಜೆಯ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡುವುದು ಕಂಡುಬಂತು. ಇನ್ನು ಕೆಲವು ಚರ್ಚ್‌ಗಳಲ್ಲಿ ಐಸಿವೈಎಂ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಮನೋರಂಜನ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಸೋಮವಾರ ಬೆಳಗ್ಗಿನಿಂದಲೇ ಚರ್ಚ್‌ಗಳಲ್ಲಿ ಹಬ್ಬದ ಬಲಿ ಪೂಜೆ, ಶುಭಾಶಯಗಳ ವಿನಿಮಯ ನಡೆಯುವುದು. ಮನೆಗಳಲ್ಲಿ ಕ್ರಿಸ್ಮಸ್‌ ವಿಶೇಷ ತಿಂಡಿ ತಿನಿಸು “ಕುಸ್ವಾರ್‌’ ತಯಾರಿಸಿ ನೆರೆಹೊರೆಯರೊಂದಿಗೆ ವಿನಿಮಯ ಮಾಡುವುದು ಕಂಡುಬಂತು. ಹಬ್ಬದ ಭೋಜನದೊಂದಿಗೆ ಸಂಭ್ರಮ ಇಮ್ಮಡಿಗೊಂಡಿತು.

ಉಡುಪಿ: ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ರವಿವಾರ ರಾತ್ರಿ ಭಕ್ತಿ, ಶ್ರದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು.

ರವಿವಾರ ರಾತ್ರಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್‌ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್‌ ಲೋಬೊ ಅವರು ಕಲ್ಯಾಣಪುರದ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಅರ್ಪಿಸಿ ಹಬ್ಬದ ಸಂದೇಶ ನೀಡಿದರು.

ನಮ್ಮೆಲ್ಲರನ್ನು ಪ್ರೀತಿಸುವುದಕ್ಕಾಗಿ ಭುವಿಗೆ ಆಗಮಿಸಿದ ಯೇಸು ಸ್ವಾಮಿ ದನದ ಕೊಟ್ಟಿಗೆಯಾದ ಗೋದಲಿಯಲ್ಲಿ ಜನಿಸಿ ತನ್ನ ಸರಳತೆ ಮೆರೆದರು. ಪ್ರೀತಿ ಪಡೆಯುವುದರಲ್ಲಿ ಇರುವ ಸಂತೋಷಕ್ಕಿಂತ ಇತರರಿಗೆ ಸೇವೆ ಮೂಲಕ ನೀಡುವುದರಲ್ಲಿ ಹೆಚ್ಚಿನ ಸಮಾಧಾನ ನೀಡುತ್ತದೆ. ಪರಸ್ಪರ ದ್ವೇಷಿಸುವುದಕ್ಕಿಂತ ಯೇಸುವಿನಂತೆ ಇತರರನ್ನು ಪ್ರೀತಿಸುವ ಕೆಲಸ ಮಾಡಬೇಕಾಗಿದೆ. ಕ್ರಿಸ್ತ ಜಯಂತಿ ಶಾಂತಿಯನ್ನು ಹಂಚುವ ಹಬ್ಬವಾಗಿದ್ದು, ಜಗತ್ತಿನೆಲ್ಲೆಡೆ ಸದಾ ಶಾಂತಿ ನೆಲೆಸುವಂತೆ ಪ್ರಾರ್ಥಿಸಬೇಕು ಎಂದು ಧರ್ಮಾಧ್ಯಕ್ಷರು ತಮ್ಮ ಸಂದೇಶದಲ್ಲಿ ತಿಳಿಸಿದರು.

ಮಿಲಾಗ್ರಿಸ್‌ ಕೆಥೆಡ್ರಲ್‌ನ ರೆಕ್ಟರ್‌ ವಂ| ವಲೇರಿಯನ್‌ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ| ಜೋಯ್‌ ಅಂದ್ರಾದೆ, ಕಟಪಾಡಿ ಹೋಲಿ ಕ್ರಾಸ್‌ ಸಭೆಯ ವಂ| ರೊನ್ಸನ್‌ ಡಿ’ಸೋಜಾ ಉಪಸ್ಥಿತರಿದ್ದರು. ಕ್ರಿಸ್ಮಸ್‌ ಹಬ್ಬದ ಪ್ರಯುಕ್ತ ಇಡೀ ಜಿಲ್ಲೆಯ ಚರ್ಚ್‌ಗಳು ವರ್ಣಮಯ ವಿದ್ಯುತ್‌ ದೀಪಾಲಂಕಾರ ಹಾಗೂ ಬಗೆ ಬಗೆಯ ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು.

ರವಿವಾರ ರಾತ್ರಿ ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಭಕ್ತಾದಿಗಳು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು ಸುಗಂಧಗಳನ್ನು ಅರ್ಪಿಸುವುದರ ಮೂಲಕ ಯೇಸು ಸ್ವಾಮಿಯ ಜನನವನ್ನು ಕ್ರೈಸ್ತರು ಸ್ವಾಗತಿಸಿದರು.

ಜಿಲ್ಲೆಯ ಪ್ರಮುಖ ಚರ್ಚ್‌ ಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯ ದಲ್ಲಿ ಧರ್ಮಗುರು ರೆ| ಡಾ| ಲೆಸ್ಲಿ ಡಿ’ಸೋಜಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ರೆ| ಚಾರ್ಲ್ಸ್ ಮಿನೇಜಸ್‌, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ರೆ| ಸ್ಟ್ಯಾನಿ ತಾವ್ರೊ, ಕಾರ್ಕಳ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದಲ್ಲಿ ರೆ| ಆಲ್ಬನ್‌ ಡಿ’ಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ರೆ| ಡೆನಿಸ್‌ ಡೆಸಾ ಅವರ ನೇತೃತ್ವದಲ್ಲಿ ಕ್ರಿಸ್ಮಸ್‌ ಆಚರಣೆ, ಬಲಿಪೂಜೆಗಳು ನಡೆದವು.

ಬೆಳ್ತಂಗಡಿ ಧರ್ಮಪ್ರಾಂತದಲ್ಲಿ ಕ್ರಿಸ್ಮಸ್‌ ಸಂಭ್ರಮ
ಬೆಳ್ತಂಗಡಿ: ಕ್ರಿಸ್ಮಸ್‌ ಹಬ್ಬವನ್ನು ಬೆಳ್ತಂಗಡಿ ಧರ್ಮಪ್ರಾಂತದ 55 ಧರ್ಮಕೇಂದ್ರಗಳಲ್ಲಿ ಆಚರಿಸಲಾಯಿತು.

ಬೆಳ್ತಂಗಡಿ ಸಂತ ಲಾರೆನ್ಸ್‌ ನವರ ಪ್ರಧಾನ ದೇವಾಲಯದಲ್ಲಿ ಬಿಷಪ್‌ ರೈ| ರೆ| ಡಾ| ಲಾರೆನ್ಸ್‌ ಮುಕ್ಕುಯಿಯವರು ರವಿವಾರ ಬಲಿಪೂಜೆ ನೆರವೇರಿಸಿದರು. ಬಳಿಕ ಪ್ರವಚನ ನೀಡಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಈ ವೇಳೆ ವಾಳ್ಯದ ಸಾವಿರಕ್ಕೂ ಅಧಿಕ ಮಂದಿ ಕ್ರೈಸ್ತ ಬಾಂಧವರು ಪ್ರಾರ್ಥನೆ ನೆರವೇರಿಸಿದರು. ಈ ವೇಳೆ ವಂ| ಅಬ್ರಾಹಮ್‌ ಪಟ್ಟೇರಿಲ್‌, ವಂ| ಕುರಿಯಕೋಸ್‌ ವೆಟ್ಟುವರಿ, ಕೆಥೆಡ್ರೆಲ್‌ ವಿಗಾರ್‌ ತೋಮಸ್‌ ಕಣ್ಣಾಂಗಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.