![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Dec 25, 2023, 11:33 AM IST
ಚಿಕ್ಕಮಗಳೂರು: ದತ್ತಜಯಂತಿ ಅಂಗವಾಗಿ ದತ್ತಮಾಲಾಧಾರಿಗಳು ಸೋಮವಾರ ನಗರದಲ್ಲಿ ಪಡಿಸಂಗ್ರಹ (ಭಿಕ್ಷಾಟನೆ) ಮಾಡಿದರು.
ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಸಾಥ್ ನೀಡಿದರು.
ನಗರದ ನಾರಾಯಣಪುರ ಬಡಾವಣೆ ಸೋಮವಾರ ಬೆಳಿಗ್ಗೆ ತೆರಳಿದ 20ಕ್ಕೂ ಹೆಚ್ಚು ದತ್ತ ಮಾಲಾಧಾರಿಗಳು ಬಡಾವಣೆಯಲ್ಲಿ 9 ಮನೆಗಳಿಗೆ ತೆರಳಿ ಪಡಿ ಸಂಗ್ರಹಿಸಿದರು.
ದತ್ತಮಾಲಾಧಾರಿಗಳು ಮನೆಗೆ ಆಗಮಿಸುತ್ತಿದ್ದಂತೆ ಮನೆಯ ಒಡತಿಯರು ದತ್ತಮಾಲಾಧಾರಿಗಳ ಪಾದ ತೊಳೆದು, ಅಕ್ಕಿ, ಬೆಲ್ಲ ಸೇರಿದಂತೆ ಇತರೆ ಪದಾರ್ಥಗಳನ್ನು ನೀಡಿದರು. ಮಂಗಳವಾರ ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮತ್ತು ಹೋಮ ಹವನಗಳು ಜರುಗಲಿದ್ದು, ಈ ವೇಳೆ ಸಂಗ್ರಹಿಸಿದ ಪಡಿಯನ್ನು ದೇವರಿಗೆ ಅರ್ಪಿಸಲಾಗುವುದು.
ಸೋಮವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಸ್ಥಾನದಿಂದ ಬೃಹತ್ ಶೋಭಾಯಾತ್ರೆ ಆರಂಭಗೊಂಡು ನಗರ ಆಜಾದ್ ಪಾರ್ಕ್ ವೃತ್ತ ತಲುಪಲಿದೆ. ಅಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವರು.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.