![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 25, 2023, 2:27 PM IST
ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಿ.ಕೆ .ಹರಿಪ್ರಸಾದ್ ಅವರ ಮಾನಸಿಕ ಸ್ಥಿತಿ ಸರಿ ಇಲ್ಲ. ಆದ್ದರಿಂದ ಅವರ ಹೇಳಿಕೆಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಪ್ರಸಾದ್ ಅವರಿಗೆ ಕಾಂಗ್ರೆಸ್ ನಲ್ಲಿ ಹಿಂಸೆ ಆಗುತ್ತಿದ್ದು, ಹಿಂಸೆ ತಾಳಲಾರದೆ ಏನೇನು ಹೇಳಿಕೆ ಕೊಡುತ್ತಿದ್ದಾರೆ ಎಂದರು.
ಯಾರು ಏನು ಎಂಬುದು ದೇಶಕ್ಕೆ ಗೊತ್ತಿದೆ. ಹರಿಪ್ರಸಾದ್ ಬಾಯಿಗೆ ಬಂದಂತೆ ಹೇಳಿದ ಕೂಡಲೇ ಅದು ಸತ್ಯವಾಗದು. ಹಿರಿಯ ನಾಯಕರಾದ ಹರಿಪ್ರಸಾದ್ ಅವರು ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡುವುದು ಒಳಿತು ಎಂದರು.
ಬೂಟು ನೆಕ್ಕಿದವರು ಎಂಬುದು ಹೀನ ಸಂಸ್ಕೃತಿ ತೋರಿಸುತ್ತದೆ. ಗೌರವಯುತ ವರ್ತನೆ ತೋರುವುದು ಉತ್ತಮ ಎಂದು ನುಡಿದರು.
ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆಗಿದ್ದು, ಅಂತಹ ಪಕ್ಷಕ್ಕೆ ಯಾರು ಹೋಗಲಾರರು ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ ನಂತರದಲ್ಲಿ, ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಲೋಕಸಭಾ ಚುನಾವಣೆ ಒಳಗಾಗಿ ಒಕ್ಕೂಟ ಛಿದ್ರವಾಗಲಿದೆಎಂದು ಭವಿಷ್ಯ ನುಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಹಲವು ನಾಯಕರ ವಿರುದ್ಧ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಸರಿಯಲ್ಲ.
ಯುವಕರಿಗೆ ಆದ್ಯತೆ ನೀಡಬೇಕೆಂಬ ಹಿನ್ನೆಲೆಯಲ್ಲಿ, ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ. ವರಿಷ್ಠರ ತೀರ್ಮಾನವನ್ನು ಗೌರವಿಸುವ ಕಾರ್ಯವನ್ನು ಯತ್ನಾಳ್ ಮಾಡಬೇಕು ಎಂದರು.
You seem to have an Ad Blocker on.
To continue reading, please turn it off or whitelist Udayavani.