![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 25, 2023, 2:53 PM IST
ವಿಜಯಪುರ: ಯತ್ನಾಳ ವಿರುದ್ಧ ಬಿಜೆಪಿ ವರಿಷ್ಠರಿಗೆ ದೂರು ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರೂ, ಅವರು ಏನು ಹೇಳುತ್ತಾರೋ ಅದೆಲ್ಲಾ ಒಳಗೆ ಉಲ್ಟಾ ನಡೆದಿರುತ್ತದೆ. ಯಡಿಯೂರಪ್ಪ ಶಕುನಿ ಇದ್ದಂತೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಪಕ್ಷೀಯ ನಾಯಕರ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿದ್ದಾರೆ.
ಸೋಮವಾರ ನಗರದಲ್ಲಿ ವಾಜಪೇಯಿ ಜನ್ಮೋತ್ಸವ ಕಾರ್ಯಕ್ರಮದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯತ್ನಾಳ, ನನ್ನ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಿದರೂ ಏನೂ ಅಗದು ಎಂಬುದನ್ನು ಅರಿತೆ ಇದೀಗ ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಟುಕಿದರು.
ಈ ಹಿಂದೆ ಶೋಭಾ ಕರಂದ್ಲಾಜೆ ಪಕ್ಷದ ರಾಜ್ಯಾಧ್ಯಕ್ಷರಾಗಲು, ಯತ್ನಾಳ ವಿಪಕ್ಷದ ನಾಯಕರಾಗಲು ನನ್ನ ಅಭ್ಯಂತರವಿಲ್ಲ ವಿಜಯೇಂದ್ರ ಹೇಳಿದ್ದ. ಬಳಿಕ ಹೈಕಮಾಂಡ್ ನಲ್ಲಿ ಎಲ್ಲ ಪ್ಯಾಕ್ ಮಾಡಿಕೊಂಡು ಬಂದಿದ್ದರು. ಯಡಿಯೂರಪ್ಪ ನನ್ನ ಮೇಲೆ ದೂರು ನೀಡಿದ್ದರೂ ಏನೂ ಆಗಲಿಲ್ಲ. ಇದರಿಂದಾಗಿ ತಮ್ಮ ಮರ್ಯಾದೆ ಹೋಗುತ್ತದೆ ಎಂದರಿತು ಯತ್ನಾಳ ವಿರುದ್ದ ಹೈಕಮಾಂಡ್ ಗೆ ದೂರು ನೀಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ವಾಗ್ದಾಳಿ ಮುಂದುವರೆಸಿದ್ದಾರೆ.
ಮತ್ತೊಂದೆಡೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಮ್ಮನ್ನು ಮೂರನೇ ಟಿಪ್ಪು ಎಂದು ಟೀಕಿಸಿದ್ದಕ್ಕೂ ಪ್ರತಿಕ್ರಿಯಿಸಿ, ಎಂ.ಬಿ.ಪಾಟೀಲ ನಾಲ್ಕನೇ ಟಿಪ್ಪು ಸುಲ್ತಾನ್ ಎಂದು ಪ್ರತಿ ವಾಗ್ದಾಳಿ ನಡೆಸಿದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.