Nagenahalli ದರ್ಗಾದಲ್ಲಿ ದತ್ತಜಯಂತಿ; ಶ್ರೀರಾಮಸೇನೆಯ ರಂಜಿತ್ ಶೆಟ್ಟಿ ಪೊಲೀಸ್ ವಶಕ್ಕೆ
Team Udayavani, Dec 26, 2023, 10:19 AM IST
ಚಿಕ್ಕಮಗಳೂರು: ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುವುದಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದತ್ತಪೀಠವೇ ಬೇರೆ, ದರ್ಗಾವೇ ಬೇರೆ, ಮುಸ್ಲಿಂ ಸಮುದಾಯದವರು ದತ್ತಪೀಠದಲ್ಲಿ ಉರುಸ್ ಆಚರಿಸುವುದಾದರೇ, ಸೌಹಾರ್ದತೆಯ ದೃಷ್ಟಿಯಿಂದ ನಾಗೇನಹಳ್ಳಿಯಲ್ಲಿ ಡಿ.26 ರಂದು ದತ್ತಜಯಂತಿ ಆಚರಿಸುವುದಾಗಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮತ್ತು ರಂಜಿತ್ ಶೆಟ್ಟಿ ಹೇಳಿಕೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರನ್ನು ಜ.5ರ ವರೆಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:Mutton Shanks; ಮೆನುವಿನಲ್ಲಿ ಮಟನ್ ಮೂಳೆ ಇಲ್ಲವೆಂದು ಮದುವೆ ರದ್ದು ಮಾಡಿದ ವರನ ಕಡೆಯವರು!
ನಾಗೇನಹಳ್ಳಿ ದರ್ಗಾ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲಾಡಳಿತ ನಿಷೇಧದ ನಡುವೆ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಮುಂದಾಗಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಬಂಧಿಸಿರುವ ಪೊಲೀಸರು ಗೌಪ್ಯಸ್ಥಳಕ್ಕೆ ಕರೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.