Bangalore: ಅಪಾರ್ಟ್ಮೆಂಟ್ನಿಂದ ಬಿದ್ದು ಜಿಮ್ ತರಬೇತುದಾರ ಆತ್ಮಹತ್ಯೆ
Team Udayavani, Dec 26, 2023, 10:34 AM IST
ಬೆಂಗಳೂರು: ಒಡಿಶಾ ಮೂಲದ ಜೀಮ್ ತರ ಬೇತುದಾರನೊಬ್ಬ ನಾಲ್ಕು ಅಂತಸ್ತಿನ ಅಪಾರ್ಟ್ ಮೆಂಟ್ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹರಳೂರು-ಸರ್ಜಾಪುರ ಮುಖ್ಯರಸ್ತೆಯ ಅಪಾರ್ಟ್ಮೆಂಟ್ ನಿವಾಸಿ ಗಣೇಶ್ ಪಾಂಡ (32) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ರಾತ್ರಿ 11.30ಕ್ಕೆ ಘಟನೆ ನಡೆದಿದೆ. ಒಡಿಶಾ ಮೂಲದ ಗಣೇಶ್ ಪಾಂಡ ಮೂರು ವರ್ಷದ ಹಿಂದೆ ಬೆಂಗಳೂರಿಗೆ ಬಂದು ಜೀಮ್ ತರಬೇತುದಾರ ನಾಗಿ ಕೆಲಸ ಮಾಡುತ್ತಿದ್ದ. ಹರಳಸೂರು- ಸರ್ಜಾಪುರ ರಸ್ತೆಯಲ್ಲಿನ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದ ಸಹೋದರಿ ಮನೆಯಲ್ಲಿ ವಾಸವಾಗಿದ್ದ.
ಈ ಮಧ್ಯೆ ವಿಪರೀತ ಮದ್ಯದ ಚಟ ಅಂಟಿಸಿಕೊಂಡಿದ್ದ ಪಾಂಡನಿಗೆ ಸಹೋದರಿ ಮತ್ತು ಭಾವ ಮದ್ಯ ಬಿಡಿಸಲು ಸಾಕಷ್ಟು ಪ್ರಯತ್ನಿಸಿದ್ದರು. ಆದರೂ, ಮದ್ಯ ಸೇವಿಸುವುದನ್ನು ಬಿಟ್ಟಿರಲಿಲ್ಲ. ಭಾನುವಾರ ರಾತ್ರಿ ಕೂಡ ಅಕ್ಕ- ಭಾವನ ಜತೆಗೆ ಊಟ ಮಾಡಿ ಟೆರಾಸ್ ಮೇಲೆ ಹೋಗಿದ್ದಾನೆ. ಈ ವೇಳೆಯೂ ಮದ್ಯ ಸೇವಿಸಿದ್ದ. ಬಳಿಕ ಅಲ್ಲಿಂದ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಅದರಿಂದ ಆತನ ತಲೆ, ಕೈ-ಕಾಲುಗಳಿಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಣೇಶ ಪಾಂಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರವೂ ಸಿಕ್ಕಿಲ್ಲ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.