Flower show: ಫ್ಲವರ್‌ ಶೋನಲ್ಲಿ ಕೇಳಿಸಲಿದೆ ವಚನ ಸಾಹಿತ್ಯ

Team Udayavani, Dec 26, 2023, 10:49 AM IST

Flower show: ಫ್ಲವರ್‌ ಶೋನಲ್ಲಿ ಕೇಳಿಸಲಿದೆ ವಚನ ಸಾಹಿತ್ಯ

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೊ ತ್ಸವ ದಿನದ ಅಂಗವಾಗಿ “ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯ’ ವಿಷಯಾಧಾರಿತದ 215ನೇ ಫ‌ಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಜ್ಜಾಗಿದೆ.

ಪ್ರತಿವರ್ಷ ಒಂದೊಂದು ವಿಷಯ ಆಧಾರವಾಗಿಟ್ಟು ಕೊಂಡು ಲಾಲ್‌ಬಾಗ್‌ನಲ್ಲಿ ಆಯೋಜಿಸುವ ಫ‌ಲಪುಷ್ಪ ಪ್ರದರ್ಶನ, ಈ ಬಾರಿ ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾನವೀಯತೆ, ಧಾರ್ಮಿಕತೆ ಸಾರಿದ ಬಸವೇಶ್ವರರು ಹಾಗೂ 12ನೇ ಶತಮಾನದ ವಚನ ಸಾಹಿತ್ಯ ಮುಖ್ಯ ವಾಗಿರಿಸಿಕೊಂಡಿದೆ. “ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯ’ ಶೀರ್ಷಿಕೆಯಡಿ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಡೆಯುವ ಫ‌ಲಪುಷ್ಪ ಪ್ರದರ್ಶನಕ್ಕೆ ನಾಲ್ಕು ತಿಂಗಳುಗಳಿಂದ ಪೂರ್ವತಯಾರಿ ನಡೆಯುತ್ತಿದೆ.

ಜ.18ರಿಂದ 28ರವರೆಗೆ ಒಟ್ಟು ಹತ್ತು ದಿನ ಹಮ್ಮಿಕೊಳ್ಳುವ ಈ ಫ‌ಲಪುಷ್ಪ ಪ್ರದರ್ಶನಕ್ಕೆ ಒಟ್ಟು 2.75 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೇ ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪೂನಾ, ಆಂಧ್ರ, ಊಟಿ ಸೇರಿ ದೇಶದ ವಿವಿಧ ರಾಜ್ಯಗಳಿಂದ ಹತ್ತಾರು ಬಗೆಯ ಹೂವು ಮತ್ತು ಹೂವಿನ ಕುಂಡಗಳನ್ನು ತರಿಸಲಾಗುತ್ತಿದೆ.

ಅದರಲ್ಲೂ ವಿಶೇಷವಾಗಿ ಸಿಂಬಿಡಿಯಂ ಆರ್ಕಿಡ್‌, ಶೀತವಲಯದ ಹೂವುಗಳು, ಏರ್‌ ಪ್ಲಾಂಟ್‌ಗಳನ್ನು ಮೊದಲ ಸಲ ಬಳಸಲಾಗುತ್ತಿದೆ. ಒಟ್ಟಾರೆ 80ಕ್ಕೂ ಹೆಚ್ಚು ವಿವಿಧ ಹೂವುಗಳನ್ನು ಉಪಯೋಗಿಸಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ (ಲಾಲ್‌ಬಾಗ್‌) ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್‌ ಉದಯವಾಣಿಗೆ ತಿಳಿಸಿದ್ದಾರೆ.

ಫ‌ಲಪುಷ್ಪ ಪ್ರದರ್ಶನದ ಬಾರಿಯ ವಿಶೇಷತೆಗಳು :

ಲಾಲ್‌ಬಾಗ್‌ ಗಾಜಿನ ಮನೆ ಪ್ರವೇಶದಲ್ಲಿ ಬಸವಣ್ಣ ಅವರ ಪ್ರತಿಮೆ ವೀಕ್ಷಕರನ್ನು ಸ್ವಾಗತಿಸಲಿದೆ. 12ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಒಂದೆಡೆ ಸೇರುತ್ತಿದ್ದ ಸಾಮಾಜಿಕ-ಧಾರ್ಮಿಕ ಸಂಸತ್ತು ಎಂದೇ ಖ್ಯಾತಿ ಪಡೆದ “ಅನುಭವ ಮಂಟಪ’, ಬಸವೇಶ್ವರರ ಐಕ್ಯ ಸ್ಥಳವಾದ ಮಂಟಪವು ಬೃಹತ್‌ ಆಕಾರವಾಗಿ ವಿವಿಧ ಲಕ್ಷಾಂತರ ಹೂವುಗಳಲ್ಲಿ ಅರಳಲಿವೆ. ವಿವಿಧ ಹೂವಿನ ಲ್ಯಾಂಡ್‌ ಸ್ಕೇಪ್‌ ಜತೆಗೆ ಅಲ್ಲಮ ಪ್ರಭು, ಅಕ್ಕಮಹಾದೇವಿ, ಮಾದಿಗರ ಚೆನ್ನಯ್ಯ ಒಳಗೊಂಡಂತೆ 12ನೇ ಶತಮಾನದಲ್ಲಿ ನೆಲೆಸಿದ್ದ ಪ್ರಮುಖ ವಚನಕಾರರ ಮೂರ್ತಿಗಳನ್ನು ಹೂವಿನಲ್ಲಿ ಅಲಂಕರಿಸಲಾಗುತ್ತದೆ.

ಲಾಲ್‌ಬಾಗ್‌ ಫ‌ಲಪುಷ್ಪ ಪ್ರದರ್ಶನ:ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ :

ಬೆಂಗಳೂರು: ಪ್ರತಿ ವರ್ಷದಂತೆ ತೋಟಗಾರಿಕೆ ಇಲಾಖೆಯು ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಲಾಲ್‌ಬಾಗ್‌ನಲ್ಲಿ 215ನೇ ಫ‌ಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದ್ದು, ಈ ವೇಳೆ ನಡೆಯುವ ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಿದೆ.

ಈ ಬಾರಿಯ ಪ್ರದರ್ಶನ “ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯ’ ಎಂಬ ವಿಷಯಾಧಾರಿತದಲ್ಲಿ ಜರುಗಲಿದೆ. ಇದರ ಭಾಗವಾಗಿ ನಡೆಸುವ ಇಕೆಬಾನ, ಜಾನೂರ್‌, ಥಾಯ್‌ ಆರ್ಟ್‌, ತರಕಾರಿ ಕೆತ್ತನೆ ಮತ್ತು ಇತರೆ ಪೂರಕ ಕಲೆಗಳ ಸ್ಪರ್ಧೆಗೆ ಲಾಲ್‌ಬಾಗ್‌ನ ತೋಟಗಾರಿಕೆ ಜಂಟಿ ನಿರ್ದೇಶಕರು(ಯೋಜನೆ) ಕಚೇರಿಯಿಂದ ಅರ್ಜಿ ಪಡೆದು ಜ.1ರಿಂದ 6ರವರೆಗೆ ಅರ್ಜಿ ಸಲ್ಲಿಸಬಹುದು. ಅದೇ ರೀತಿ, ಜ.8ರಿಂದ 16ರವರೆಗೆ ವಿವಿಧ ಅಲಂಕಾರಿಕ ತೋಟಗಳ ಸ್ಪರ್ಧೆ/ಕುಂಡದಲ್ಲಿ ಬೆಳೆದ ಗಿಡಗಳ ಸ್ಪರ್ಧೆ, ಜ.15ರಿಂದ 17ರವರೆಗೆ ಗಾಜಿನ ಮನೆ ಆವರಣದಲ್ಲಿ ಪ್ರದರ್ಶಿಕೆಗಳ ಪ್ರದರ್ಶಿಸಲು, ಜ.10ರಿಂದ 19ರವರೆಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಗೆ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ಜಂಟಿ ನಿರ್ದೇಶಕರ(ತೋಟದ ಬೆಳೆಗಳು)ಕಚೇರಿಯಿಂದ ಮತ್ತು ಡಿ.28ರಿಂದ ಜ.6ರವರೆಗೆ ಇರುವ ಮಳಿಗೆಗಳ ಹಂಚಿಕೆಗೆ ತೋಟಗಾರಿಕೆ ಅಪರ ನಿರ್ದೇಶಕರು (ಹಣ್ಣುಗಳು)ಕಚೇರಿಯಿಂದ ಅರ್ಜಿ ಪಡೆದು, ಸಲ್ಲಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ (ಲಾಲ್‌ಬಾಗ್‌)ಉಪನಿರ್ದೇಶಕಿ ಡಾ.ಕುಸುಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ಮೊ.78926555167, 9900150979 ಸಂಪರ್ಕಿಸಬಹುದು.

ವಚನ ಸಾಹಿತ್ಯ ನಿರಂತರ ಮಾಹಿತಿ ಪ್ರಸಾರಕ್ಕೆ ವ್ಯವಸ್ಥೆ :

ಗಾಜಿನ ಮನೆ ಹೊರಾಂಗಣದಲ್ಲಿ ಫ್ಲವರ್‌ ಫ್ಲೋ, ನವಿಲು ಆಕಾರ ಮತ್ತು ಹೃದಯಾಕಾರದಲ್ಲಿ ವಿವಿಧ ಬಣ್ಣದ ಹೂವಿನ ಕುಂಡಗಳನ್ನು ಜೋಡಿಸಲಾಗುತ್ತದೆ. ಲಾಲ್‌ಬಾಗ್‌ನ 50 ಕಡೆ ಸುಂದರ ಹೂವುಗಳ ಪ್ರದರ್ಶನಕ್ಕೆ ಸಿದ್ಧಗೊಳಿಸಲಾಗುತ್ತದೆ. ಉದ್ಯಾನದ ಕೆಲ ಭಾಗಗಳಲ್ಲಿ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಲಾಗುತ್ತಿದೆ. ವಚನ ಸಾಹಿತ್ಯ ಕುರಿತಂತೆ ನಿರಂತರ ಮಾಹಿತಿ ಪ್ರಸಾರಕ್ಕೆ ವ್ಯವಸ್ಥೆಗೊಳಿಸಲಾಗುತ್ತಿದೆ.

ವಿಶ್ವ ಗುರು ಬಸವಣ್ಣ, ವಚನ ಸಾಹಿತ್ಯ ಕುರಿತಂತೆ ಈ ಬಾರಿಯ ಫ‌ಲಪುಷ್ಪ ಪ್ರದರ್ಶನವಿರಲಿದೆ. 2.75 ಕೋಟಿ ರೂ.ನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಜ.18ರಿಂದ 28ರವರೆಗೆ ಈ ಪ್ರದರ್ಶನ ಇರಲಿದೆ. 10 ಲಕ್ಷ ವೀಕ್ಷಕರು ಆಗಮಿಸುವ ನಿರೀಕ್ಷೆ ಇದೆ. ಇನ್ನೂ ಅನುಭವ, ಐಕ್ಯ ಮಂಟಪ ಎಷ್ಟು ವಿಸ್ತೀರ್ಣದಲ್ಲಿ ಹಾಗೂ ಎಷ್ಟು ಹೂವುಗಳಿಂದ ನಿರ್ಮಿಸಬೇಕು ಎಂಬ ಚರ್ಚೆಗಳು ನಡೆಯುತ್ತಿವೆ.-ಡಾ.ಎಂ.ಜಗದೀಶ್‌, ಜಂಟಿ ನಿರ್ದೇಶಕರು, ಲಾಲ್‌ಬಾಗ್‌. 

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.