Hampi Utsav 2024: ಫೆ.2ರಿಂದ ಮೂರು ದಿನ ಹಂಪಿ ಉತ್ಸವ; ಸಚಿವ ಜಮೀರ್ ಅಹಮದ್ ಖಾನ್
Team Udayavani, Dec 26, 2023, 12:21 PM IST
ಬೆಂಗಳೂರು: ವಿಶ್ವವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ.
ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.