JDU: ರಾಜಕೀಯ ಬೆಳವಣಿಗೆ- ಜನತಾದಳ ಯುನೈಟೆಡ್ ಅಧ್ಯಕ್ಷ ಸ್ಥಾನಕ್ಕೆ ಲಲಾನ್ ಸಿಂಗ್ ರಾಜೀನಾಮೆ
Team Udayavani, Dec 26, 2023, 1:50 PM IST
ನವದೆಹಲಿ: ಬಿಹಾರದ ಆಡಳಿತಾರೂಢ ಜನತಾ ದಳ (ಯುನೈಟೆಡ್) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಲಾಲನ್ ಸಿಂಗ್ ಅವರು ಮಂಗಳವಾರ (ಡಿಸೆಂಬರ್ 26) ರಾಜೀನಾಮೆ ಸಲ್ಲಿಸಿರುವ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿರುವುದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Encounter: ವಿವಾಹ ನಿಶ್ಚಯವಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಗುಂಡೇಟಿನಿಂದ ಮೃತ್ಯು!
ಮೂಲಗಳ ಪ್ರಕಾರ, ಜೆಡಿಯು ನಾಯಕತ್ವದಲ್ಲಿ ಲಾಲನ್ ಸಿಂಗ್ ಅವರು ಮಹತ್ವದ ವ್ಯಕ್ತಿಯಾಗಿದ್ದರು. ಇದೀಗ ಲಾಲನ್ ಸಿಂಗ್ ಅವರು ತಮ್ಮ ರಾಜೀನಾಮೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಲ್ಲಿಸಿದ್ದಾರೆ.
ಜೆಡಿಯು ಪಕ್ಷದಲ್ಲಿ ಭವಿಷ್ಯದ ದೃಷ್ಟಿಯಿಂದ ಮಹತ್ತರ ಬದಲಾವಣೆಯಾಗಲಿದೆ ಎಂಬ ಊಹಾಪೋಹದ ನಡುವೆ ಲಲಾನ್ ಸಿಂಗ್ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ರಾಜೀನಾಮೆ ಸ್ವೀಕಾರವಾಗಿಲ್ಲ:
ಲಲಾನ್ ಸಿಂಗ್ ರಾಜೀನಾಮೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ವೀಕರಿಸಿಲ್ಲ ಎಂದು ವರದಿ ತಿಳಿಸಿದೆ. ಇದೊಂದು ಅನಿರೀಕ್ಷಿತ ಬೆಳವಣಿಗೆಯಾಗಿದ್ದು, ಈ ವಿಷಯದ ಬಗ್ಗೆ ದೆಹಲಿಯಲ್ಲಿ ಡಿಸೆಂಬರ್ 29ರಂದು ನಡೆಯಲಿರುವ ಸಭೆಯಲ್ಲಿ ಅಧಿಕೃತವಾಗಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿ ತಿಳಿಸಿದೆ.
ಲಲಾನ್ ಸಿಂಗ್ ಅವರು ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದಾರೆಂಬುದ ಸ್ಪಷ್ಟವಾಗಿಲ್ಲ. ಪ್ರಾದೇಶಿಕ ಪಕ್ಷಗಳ ಕುಟುಂಬ ರಾಜಕಾರಣದಿಂದ ಬೇಸತ್ತು ಲಲಾನ್ ಸಿಂಗ್ ರಾಜೀನಾಮೆ ನೀಡಿರುವುದಾಗಿ ಊಹಾಪೋಹ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.