ಪತಿಯನ್ನು ಕೊಲೆ ಮಾಡಿದ್ದಾರೆಂದು ಸಂಬಂಧಿಕರನ್ನು ಜೈಲುಗಟ್ಟಿದ ಮಹಿಳೆಯೇ ಅರೆಸ್ಟ್; ಆಗಿದ್ದೇನು?
Team Udayavani, Dec 26, 2023, 2:34 PM IST
ಲಕ್ನೋ: ಗಂಡನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ, ಸಂಬಂಧಿಕರನ್ನು ಜೈಲಿಗಟ್ಟಿದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗೊಂಡದಲ್ಲಿ ನಡೆದಿದೆ.
ಘಟನೆ ವಿವರ: ಗುಡಿಯಾ ಎನ್ನುವ ಮಹಿಳೆ ಕಳೆದ 6 ತಿಂಗಳ ಹಿಂದೆ ಮಾವ ನಾಂಕೆ ಮತ್ತು ಸೋದರಮಾವರಾದ ಅರ್ಜುನ್, ಶ್ಯಾಮ್ ಮತ್ತು ಅಗ್ಯಾರಾಮ್ ಅವರ ಮೇಲೆ ಕೊಲೆ ಮಾಡಿದ ಆರೋಪವನ್ನು ಮಾಡಿ ದೂರು ದಾಖಲಿಸಿದ್ದರು. ಇವರು ತನ್ನ ಪತಿ ರಾಮಕರಣ್ ನನ್ನು ಕೊಲೆ ಮಾಡಿ ಸಾಕ್ಷಿ ಮರೆಮಾಚಲು ಶವವನ್ನು ಎಲ್ಲೋ ವಿಲೇವಾರಿ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಪೊಲೀಸರು ಜೂನ್ 5 ರಂದು ನ್ಯಾಯಾಲಯದ ಆದೇಶದ ನಂತರ ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ಆ ಬಳಿಕ ಪ್ರಕರಣದ ಬಗ್ಗೆ ವಿವರವಾದ ತನಿಖೆಯನ್ನು ಆರಂಭಿಸಿದ್ದರು.
ಸುಳ್ಳಿನ ಕಥೆ ಕಟ್ಟಿದ ದಂಪತಿ: ತನಿಖೆಯನ್ನು ಆರಂಭಿಸಿದ ಪೊಲೀಸರಿಗೆ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಕೊಲೆಯಾಗಿದ್ದಾನೆ ಎನ್ನಲಾದ ಮಹಿಳೆ ಪತಿ ರಾಮಕರಣ್ ಜೀವಂತವಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಕೊಲೆಯ ನಾಟಕವನ್ನು ಗುಡಿಯಾ ಹಾಗೂ ರಾಮಕರಣ್ ಸೇರಿಕೊಂಡು ಮಾಡಿದ್ದಾರೆ. ಆಸ್ತಿಯನ್ನು ಕಬಳಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ರಾಮಕರಣ್ ನನ್ನು ಪಶ್ಚಿಮ ರಾಜ್ಯದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿಯ ಯೋಜನೆ ಮತ್ತು ಅವರು ಹೇಗೆ ಸುಳ್ಳು ಪ್ರಕರಣ ದಾಖಲಿಸಿ, ಪೊಲೀಸರನ್ನು ದಾರಿತಪ್ಪಿಸಿದ್ದಾರೆ ಎಂಬುದರ ಕುರಿತು ಪೊಲೀಸರು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
“ದಂಪತಿಗಳನ್ನು ವಿಚಾರಣೆಗೊಳಪಡಿಸಿದಾಗ, ಕುಟುಂಬದ ಆಸ್ತಿಗಾಗಿ ರಾಮ್ ಕರಣ್ ಮತ್ತು ಅವರ ಸಹೋದರರ ನಡುವೆ ತಕರಾರು ಇತ್ತು. ಆಸ್ತಿಯನ್ನು ಹೇಗಾದರೂ ಮಾಡಿ ಕಬಳಿಸುವ ಬೇಕೆನ್ನುನ ನಿಟ್ಟಿನಲ್ಲಿ ಇಬ್ಬರು ಸೇರಿ ಈ ಯೋಜನೆಯನ್ನು ಮಾಡಿರುವುದಾಗಿ ಪೊಲೀಸರ ವಿಚಾರಣೆಯಲ್ಲಿ ದಂಪತಿ ಹೇಳಿದ್ದಾರೆ.
ಸದ್ಯ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.