Alankaru ಛಾವಣಿಯಿಂದ ಬಿದ್ದು ಯುವಕ ಸಾವು
Team Udayavani, Dec 27, 2023, 12:08 AM IST
ಆಲಂಕಾರು: ನೂತನ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಮಂಗಳವಾರ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನ. 12ರಂದು ಕಾಮಗಾರಿ ನಡೆಯುತ್ತಿದ್ದ ತನ್ನ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಕ್ಕೊಳಗಾಗಿದ್ದರು. ಅವರನ್ನು ತತ್‌ಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.
ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು. ಆಲಂಕಾರು ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಸುನಂದ ಬಾರ್ಕುಲಿ ಸೇರಿದಂತೆ ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.