BJP: ಪಕ್ಷ ವಿರೋಧಿ ಹೇಳಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ


Team Udayavani, Dec 27, 2023, 9:30 AM IST

BJP: ಪಕ್ಷ ವಿರೋಧಿ ಹೇಳಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ

ನವದೆಹಲಿ: ಪಶ್ಚಿಮ ಬಂಗಾಳದ ಬೋಲ್ಪುರದ ಮಾಜಿ ಸಂಸದ ಅನುಪಮ್ ಹಜ್ರಾ ಅವರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆ ಮೇರೆಗೆ ಹಜ್ರಾ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದ್ದು. ಇತ್ತೀಚೆಗೆ ಅನುಪಮ್ ಹಜ್ರಾ ಅವರು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೋಲ್ಕತ್ತಾ ಪ್ರವಾಸದಲ್ಲಿದ್ದಾಗಲೇ ಹಜ್ರಾ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿತ್ತು.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ನೋಟಿಸ್ ಜಾರಿ ಮಾಡಿದ್ದು, “ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಸೂಚನೆಯಂತೆ ಅನುಪಮ್ ಹಜ್ರಾ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆ ಮಾಡಲಾಗಿದೆ. ಈ ಮಾಹಿತಿಯು ತಕ್ಷಣದಿಂದ ಜಾರಿಗೆ ಬರಲಿದೆ” ಎಂದು ಬರೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮಂಗಳವಾರ ಕೋಲ್ಕತ್ತಾಗೆ ಆಗಮಿಸಿ ಬಂಗಾಳದಲ್ಲಿ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ, ಪಕ್ಷದ ನಾಯಕರೊಂದಿಗಿನ ಸಭೆಯ ನಂತರ, ಅನುಪಮ್ ಹಜ್ರಾ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ತೆಗೆದುಹಾಕಲಾಯಿತು. ಇದಕ್ಕೂ ಮುನ್ನ ಅನುಪಮ್ ಹಜ್ರಾ ಅವರಿಗೆ ನೀಡಲಾಗಿದ್ದ ಕೇಂದ್ರ ಭದ್ರತೆಯನ್ನೂ ಕೆಲ ದಿನಗಳ ಹಿಂದೆ ತೆಗೆದುಹಾಕಲಾಗಿತ್ತು.

ಅನುಪಮ್ ಹಜ್ರಾ ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು ಮತ್ತು ಬೋಲ್ಪುರ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ, 2019ರ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ಅನುಪಮ್ ಹಜ್ರಾ ಅವರನ್ನು ಪಶ್ಚಿಮ ಬಂಗಾಳದ ಪರಿಶಿಷ್ಟ ಜಾತಿಗಳ ಯುವ ಮುಖ ಎಂದು ಬಿಜೆಪಿ ಬಿಂಬಿಸಿತ್ತು, ನಂತರ ಅವರನ್ನು 2020 ರಲ್ಲಿ ಮೊದಲ ಬಾರಿಗೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಾಡಲಾಯಿತು. ಈ ಅವಧಿಯಲ್ಲಿ ಬಿಹಾರದ ಸಹ ಪ್ರಭಾರಿ ಹೊಣೆಗಾರಿಕೆಯೂ ಸಿಕ್ಕಿದೆ. 2023ರಲ್ಲೂ ಅವರಿಗೆ ಅದೇ ಜವಾಬ್ದಾರಿ ನೀಡಲಾಗಿತ್ತು, ಆದರೆ ಅವರ ಪಕ್ಷ ವಿರೋಧಿ ಹೇಳಿಕೆಗಳಿಂದಾಗಿ ಅವರು ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಇದೀಗ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Israel ರಾಯಭಾರ ಕಚೇರಿ ಬಳಿ ಸ್ಫೋಟ: ಸ್ಥಳದಲ್ಲಿ ಇಸ್ರೇಲ್ ಧ್ವಜದಿಂದ ಸುತ್ತಿದ ಪತ್ರ ಪತ್ತೆ

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.