Chikkamagaluru: ಬಸ್ ಇಳಿದು ತಪ್ಪಿಸಿಕೊಂಡಿದ್ದ 3 ವರ್ಷದ ಮಗು ಮರಳಿ ಪೋಷಕರ ಮಡಿಲಿಗೆ
Team Udayavani, Dec 27, 2023, 10:35 AM IST
ಚಿಕ್ಕಮಗಳೂರು: ಅಜ್ಜನ ಜೊತೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಗುವೊಂದು ಅರ್ಧ ದಾರಿಯಲ್ಲಿ ಇಳಿದು ಪೋಷಕರ ಕೈಯಿಂದ ತಪ್ಪಿಸಿಕೊಂಡಿದ್ದ ಮಗುವೊಂದು ಸಾರ್ವಜನಿಕರ ಹಾಗೂ ಪೊಲೀಸರ ಸಹಕಾರದಿಂದ ಮರಳಿ ಪೋಷಕರ ಮಡಿಲಿಗೆ ಸೇರಿದ ಘಟನೆ ತರೀಕೆರೆಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ಅಜ್ಜ ತನ್ನ ಮೂರೂ ವರ್ಷದ ಮೊಮ್ಮಗುವನ್ನು ಕರೆದುಕೊಂಡು ಬಸ್ಸಿನಲ್ಲಿ ತರೀಕೆರೆಗೆ ಹೊರಟಿದ್ದರು. ಈ ನಡುವೆ ಅಜ್ಜ ನಿದ್ರೆಗೆ ಜಾರಿದ್ದಾರೆ ಇದಾದ ಕೆಲ ಹೊತ್ತಿನಲ್ಲಿ ಬಸ್ಸು ನಿಲ್ದಾಣದಲ್ಲಿ ನಿಂತಿದೆ ಈ ವೇಳೆ ಮಗು ಇಳಿದುಬಿಟ್ಟಿದೆ. ಇದಾದ ಕೆಲ ಹೊತ್ತಿನಲ್ಲಿ ತರೀಕೆರೆಗೆ ಹೋಗುವ ಮತ್ತೊಂದು ಬಸ್ಸು ಇದೆ ನಿಲ್ದಾಣದಲ್ಲಿ ನಿಂತಿದ್ದು ಅದಕ್ಕೆ ಹತ್ತಿದ ಮಗು ಅಜ್ಜ ಇಲ್ಲದನ್ನು ಕಂಡು ಅಳತೊಡಗಿದೆ ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಬಳಿಕ ಮಗುವನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಅಲ್ಲಿ ಮಗುವಿನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ ಇದರಿಂದ ಮಗುವಿನ ಪೋಷಕರಿಗೆ ಮಾಹಿತಿ ಸಿಕ್ಕಿ ಬಳಿಕ ಪೋಷಕರು ಠಾಣೆಗೆ ಬಂದು ಮಗುವನ್ನು ಕರೆದುಕೊಂಡು ಹೋಗಿದ್ದಾರೆ.
ಮಗುವನ್ನು ಪೋಷಕರಿಗೆ ತಲುಪಿಸುವಲ್ಲಿ ಸಹಕರಿಸಿದ ಸ್ಥಳೀಯರು ಹಾಗೂ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ: Chennai: ಅಮೋನಿಯಾ ಗ್ಯಾಸ್ ಪೈಪ್ ಸೋರಿಕೆ-ಆರು ಮಂದಿ ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.