EC: ಮತದಾರರ ಪಟ್ಟಿ – ಅವಧಿ ವಿಸ್ತರಣೆ
Team Udayavani, Dec 27, 2023, 10:43 PM IST
ಬೆಂಗಳೂರು: ಭಾರತ ಚುನಾವಣ ಆಯೋಗವು 2024ರ ಜ. 1ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆಯ ಅರ್ಜಿ ಫಾರಂ ಸಲ್ಲಿಸಲು ಮತ್ತೂಂದು ಅವಕಾಶ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು 2024ರ ಜ.12ಕ್ಕೆ ವಿಸ್ತರಿಸಲಾಗಿದೆ. ದತ್ತಾಂಶಗಳು ಕ್ರೋಢೀಕರಣ, ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜ.17ಕ್ಕೆ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿ ಪ್ರಕಟನೆ ದಿನಾಂಕವನ್ನು ಜ.22ಕ್ಕೆ ವಿಸ್ತರಿಸಲಾಗಿದೆ.
ಮುಂದಿನ ಲೋಕಸಭೆ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು 2024ರ ಜ.1ಕ್ಕೆ 18 ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರು ನಮೂನೆ-6 ಅರ್ಜಿ ಸಲ್ಲಿಸಬಹುದು. ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದು. ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ 2023ರ ಡಿ.27ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ ವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.