Chandan Shetty; ವಾಟ್ ಟು ಡು ಮಾಮ? ಅಂತಿದ್ದಾರೆ ಚಂದನ್ ಶೆಟ್ಟಿ
Team Udayavani, Dec 28, 2023, 1:57 PM IST
ಕಳೆದ ಕೆಲ ವರ್ಷಗಳಿಂದ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಪ್ರತಿವರ್ಷ ಡಿಸೆಂಬರ್ ತಿಂಗಳ ಕೊನೆಯಲ್ಲಿ ಒಂದಲ್ಲಾ ಒಂದು ಪಾರ್ಟಿ ಸಾಂಗ್ ಬಿಡುಗಡೆ ಮಾಡುತ್ತಲೇ ಬಂದಿದ್ದಾರೆ. ಈ ವರ್ಷ ಡಿಸೆಂಬರ್ ತಿಂಗಳಲ್ಲೂ ಕೂಡ ಚಂದನ್ ಶೆಟ್ಟಿ ಅಂಥದ್ದೇ ಮತ್ತೂಂದು ಪಾರ್ಟಿ ಸಾಂಗ್ ಬಿಡುಗಡೆ ಮಾಡಿದ್ದಾರೆ.
ಹೌದು, ಈ ಬಾರಿ ಕೂಡ ಚಂದನ್ ಶೆಟ್ಟಿ, ವಾಟ್ ಟು ಡು ಮಾಮ? ಎಂಬ ಅಪ್ಪಟ್ಟ ದೇಸಿ ಶೈಲಿಯ ಟಪ್ಪಾಂಗುಚಿ ಪಾರ್ಟಿ ಹಾಡನ್ನು ವರ್ಷದ ಕೊನೆಗೆ ಬಿಡುಗಡೆ ಮಾಡಿದ್ದಾರೆ.
“ಪ್ರಾಬ್ಲಿಂ ಪ್ರಾಬ್ಲಿಂ ಪ್ರಾಬ್ಲಿಂ ವಾಟ್ ಟು ಡು ಮಾಮ?’ ಎಂದು ಶುರುವಾಗುವ ಈ ಹಾಡಿನಲ್ಲಿ ಹದಿಹರೆಯದ ಹುಡುಗರ ಸಮಸ್ಯೆಗಳನ್ನು ಹಾಸ್ಯಭರಿತವಾಗಿ ಬಿಂಬಿಸಲಾಗಿದೆ. ಇಲ್ಲಿಯವರೆಗೆ ಬಿಡುಗಡೆಯಾಗಿರುವ ಚಂದನ್ ಶೆಟ್ಟಿ ಅವರ ರ್ಯಾಪ್ ಸಾಂಗ್ಸ್ ಹೆಚ್ಚಾಗಿ ಪಬ್‌ಗಳ ಮೇಲೆ ಕೇಂದ್ರಿಕೃತವಾಗಿರುತ್ತಿತ್ತು. ಆದರೆ ಈ ಹಾಡು ಪಕ್ಕಾ ಲೋಕಲ್ ಸ್ಟೆçಲ್‌ನಲ್ಲಿ ಮೂಡಿಬಂದಿದೆ. ಕಂಠೀರವ ಸ್ಟುಡಿಯೋದಲ್ಲಿ ಬಾರ್ ಸೆಟ್ ಹಾಕಿ ಈ ಹಾಡನ್ನು ಚಿತ್ರೀಕರಣ ಮಾಡಲಾಗಿದೆ.
ಚಂದನ್ ಶೆಟ್ಟಿ ಈ ಹಾಡಿನಲ್ಲಿ ಪಕ್ಕಾ ಲೋಕಲ್ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ನಟ ರಂಗಾಯಣ ರಘು ಈ ಹಾಡಿನಲ್ಲಿ ಚಂದನ್ ಶೆಟ್ಟಿ ಸೋದರ ಮಾವನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜನಪ್ರಿಯ ರಿಯಾಲಿಟಿ ಶೋ ಗಿಚ್ಚಿ ಗಿಲಿಗಿಲಿಯ ಕಲಾವಿದರಾದ ರಾಘವೇಂದ್ರ, ಆರ್. ಜೆ. ವಿಕ್ಕಿ, ಹುಲಿ ಕಾರ್ತಿಕ್, ನಿತಿನ್ ಅಮಿನ್, ಶಿಡ್ ಶ್ಯಾಡೋ ಶಿವ, ಎನ್. ಸಿ ಅಯ್ಯಪ್ಪ ಮುಂತಾದವರು ಈ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.